ಪುತ್ತೂರು: ವೀರಮಂಗಲ ಶಾಲಾ ವಾರ್ಷಿಕೋತ್ಸವ ಡಿ. 31 ರಂದು ಶಾಲಾ ಆವರಣದಲ್ಲಿ ನಡೆಯಲಿದೆ. 60 ವರ್ಷಗಳನ್ನು ಪೂರೈಸಿದ ಗ್ರಾಮೀಣ ಪ್ರದೇಶದ ಕುಮಾರನದಿಯ ತಟದಲ್ಲಿರುವ ಈ ಶಾಲೆಯಲ್ಲಿ 155 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮಾದರಿ ಶಾಲೆಯಾಗಿ ಮೂಡಿಬಂದಿದೆ. ಶಾಸಕ ಸಂಜೀವ ಮಠಂದೂರು ಅವರು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಶಾಂತಿಗೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಅಧ್ಯಕ್ಷತೆ ವಹಿಸುವರು.ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್, ವೀರಮಂಗಲ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವರಾಮ ಭಟ್ ಬಾವ, ವೀರಮಂಗಲ ಜುಮ್ಮಾ ಮಸೀದಿ ಅಧ್ಯಕ್ಷ ರಝಾಕ್ ವಿ.ಎಸ್. ಅತಿಥಿಗಳಾಗಿರುವರು. ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಾದ ಯಜ್ಣ ಇವರಿಗೆ ಗೌರವಾರ್ಪಣೆ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಂದ ವೈವಿಧ್ಯಮಯ ನೃತ್ಯ, ಭಾರತೀಯ ಸಂಸ್ಕೃತಿ ಬಿಂಭಿಸುವ ಏಕ್ ಭಾರತ್ ಶ್ರೇಷ್ಠ ಭಾರತ್ ಸಂಸ್ಕೃತಿಗಳ ಅನಾವರಣಗೊಳ್ಳಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. ಬೆಳಗ್ಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಶಾಂತಿಗೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧಾಕರ ಕುಲಾಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಸ್ ಡಿ ಎಂ ಸಿ ಅಧ್ಯಕ್ಷೆ ಅನುಪಮ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ ಸದಸ್ಯ ಬಾಬು ಶೆಟ್ಟಿ ಬಹುಮಾನ ವಿತರಣೆ ಮಾಡಲಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರಾದ ಪದ್ಮಾವತಿ, ವಸಂತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ಸಮನ್ವಯಾಧಿಕಾರಿ ನವೀನ್ ವೇಗಸ್, ಸಿ.ಆರ್.ಪಿ ಪರಮೇಶ್ವರಿ, ಶಾಲಾ ಮುಖ್ಯಗುರು ತಾರಾನಾಥ ಸವಣೂರು, ಎಸ್ ಡಿ ಎಂ ಸಿ ಅಧ್ಯಕ್ಷೆಅನುಪಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಾಬಲ ರೈ, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಆನಂದ ಗೌಡ ಗುತ್ತು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ಶಾಸಕರಾದಿಯಾಗಿ ಕೊಡುಗೆಗಳ