ಪುತ್ತೂರು

ಡಿ. 24: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸಂವಾದ, ಡಾ.ಗುರುರಾಜ ಕರಜಗಿ ಉಪನ್ಯಾಸ

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಡಿ. ೨೪ರಂದು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ ಹಾಗೂ ಹೆತ್ತವರೊಂದಿಗೆ ಸಂವಾದ ನಡೆಯಲಿದೆ. ಅಂತಾರಾಷ್ಟ್ರೀಯ ತರಬೇತುದಾರ, ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬೆಳಗ್ಗೆ 9ಕ್ಕೆ ಡಾ.ಕರಜಗಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುವರು. ತದನಂತರ 10.30ರಿಂದ 12.30ರ ವರೆಗೆ ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಅಪರಾಹ್ನ 1.30ರಿಂದ ಹೆತ್ತವರೊಂದಿಗೆ ಡಾ. ಗುರುರಾಜ ಕರಜಗಿ ಸಂವಾದ ನಡೆಸಲಿದ್ದು, ಸಾರ್ವಜನಿಕರಿಗೂ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ. […]

ಡಿ. 24: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸಂವಾದ, ಡಾ.ಗುರುರಾಜ ಕರಜಗಿ ಉಪನ್ಯಾಸ Read More »

ಪಂಜದಲ್ಲಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಆಶೀರ್ವಚನ

ಪುತ್ತೂರು: ಸುಳ್ಯ ತಾಲೂಕಿನಲ್ಲಿ ಸಮುದಾಯ ಸಮ್ಮಿಲನ ಕಾರ್ಯಕ್ರಮ ನಡೆಸುತ್ತಿರುವ ಶ್ರೀ ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಗುರುವಾರ ಪಂಜದಲ್ಲಿ ಆಶೀರ್ವಚನ ನೀಡಿದರು. ಇದೇ ಸಂದರ್ಭ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಉಪಸ್ಥಿತರಿದ್ದರು. ಪಂಜ ಆಸುಪಾಸಿನ ಆರು ಗ್ರಾಮಗಳ ಜನರು ಕಾರ್ಯಕ್ರಮದಲ್ಲಿ ಸೇರಿದ್ದರು.

ಪಂಜದಲ್ಲಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಆಶೀರ್ವಚನ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ | ಬಲ್ಲೇರಿ ಮಲೆ ಯಾತ್ರೆ ಕೈಗೊಂಡ ಆರ್ಯಾಪು ಗ್ರಾಮಸ್ಥರು

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಡಿ. 22ರಂದು ಬೆಳಿಗ್ಗೆ ಗೊನೆ ಮುಹೂರ್ತ ನಡೆಯಿತು. ಬಳಿಕ ದೇವಾಲಯದ ಮೂಲಸ್ಥಳವಾದ ಬಲ್ಲೇರಿ ಮಲೆಗೆ ತೆರಳಿ ಪೂಜೆ ನೆರವೇರಿಸಿ, ಮೃತ್ತಿಗೆ ತರಲಾಯಿತು. ಪ್ರತಿವರ್ಷ ಜಾತ್ರೆಗೆ ಪೂರ್ವಭಾವಿಯಾಗಿ ನಡೆಯುವ ಗೊನೆ ಮುಹೂರ್ತದಂದು, ಬಲ್ಲೇರಿ ಮಲೆಗೆ ತೆರಳುವ ಸಂಪ್ರದಾಯ ಬಹಳ ಹಿಂದಿನಿಂದಲೂ ಈ ದೇವಸ್ಥಾನದಲ್ಲಿ ನಡೆದು ಬಂದಿದೆ. ವರ್ಷಕ್ಕೆ ಒಂದೇ ಬಾರಿ ಮಾತ್ರ ಬಲ್ಲೇರಿ ಮಲೆಯ ತುದಿ ಭಾಗಕ್ಕೆ ತೆರಳುವುದು ವಾಡಿಕೆ. ಆದ್ದರಿಂದ ಹೋಗುವ ದಾರಿಯುದ್ಧಕ್ಕೂ ಬೆಳೆದು

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ | ಬಲ್ಲೇರಿ ಮಲೆ ಯಾತ್ರೆ ಕೈಗೊಂಡ ಆರ್ಯಾಪು ಗ್ರಾಮಸ್ಥರು Read More »

ಓದುವ ಹವ್ಯಾಸದಿಂದ ಜ್ಞಾನವೃದ್ಧಿ| ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸನ್ಮಾನ ರಶ್ಮಿಯಲ್ಲಿ ನವೀನ್ ಭಂಡಾರಿ

ಪುತ್ತೂರು: ಡಾಕ್ಟರ್, ಇಂಜಿನಿಯರ್ ಜೊತೆಗೆ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಸಮರ್ಥ ಅಧಿಕಾರಿಗಳ ಅವಶ್ಯಕತೆಯು ಈ ದೇಶಕ್ಕೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳತ್ತಲೂ ಗಮನ ಹರಿಸಬೇಕು ಎಂದು ಪುತ್ತೂರು ಹಾಗೂ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಹೇಳಿದರು. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಅಡಿಟೋರಿಯಂನಲ್ಲಿ ದ. 22 ರಂದು ನಡೆದ ಸನ್ಮಾನ ರಶ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಸ್ವರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕು. ಐಎಎಸ್, ಐಪಿಎಸ್ ಮುಂತಾದ ಪರೀಕ್ಷೆಗಳಲ್ಲಿ ಭಾಗಿಗಳಾಗಿ

ಓದುವ ಹವ್ಯಾಸದಿಂದ ಜ್ಞಾನವೃದ್ಧಿ| ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸನ್ಮಾನ ರಶ್ಮಿಯಲ್ಲಿ ನವೀನ್ ಭಂಡಾರಿ Read More »

ಅನ್ಯಾಡಿ: ನಾಗ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಮನೆಯಲ್ಲಿ ನಾಗ ಪ್ರತಿಷ್ಠಾ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಡಿ. 22ರಂದು ನಾಗತಂಬಿಲ, ವಿಶೇಷ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅನ್ಯಾಡಿ: ನಾಗ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೆಡಿಕಲ್ ಕಾಲೇಜು ಸ್ಥಾಪನೆ: ಹೋರಾಟ ಸಮಿತಿ

ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕು ಎನ್ನುವುದು ಜಿಲ್ಲಾ ಕೇಂದ್ರಕ್ಕೆ ಪೂರಕವಾದ ಬೇಡಿಕೆ. ಆದ್ದರಿಂದ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಾಲೇಜು ನಿರ್ಮಾಣದ ಅನಿವಾರ್ಯತೆಯ ಬಗ್ಗೆ ನೆನಪಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸಂಚಾಲಕ ಲಕ್ಷ್ಮೀಶ ಗಬ್ಲಡ್ಕ ಹೇಳಿದರು. ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರ ಈಗಾಗಲೇ ಪುತ್ತೂರಿನಲ್ಲಿ 40 ಎಕರೆ ಜಾಗ ಮೀಸಲಿಟ್ಟಿದೆ. ಈ ಜಾಗಕ್ಕೆ ಬೇಲಿ ನಿರ್ಮಿಸಿ, ನಾಮಫಲಕ ಅಳವಡಿಸಬೇಕು. ಅನ್ಯ ಕಾರ್ಯಕ್ಕೆ ಈ ಜಾಗವನ್ನು

ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೆಡಿಕಲ್ ಕಾಲೇಜು ಸ್ಥಾಪನೆ: ಹೋರಾಟ ಸಮಿತಿ Read More »

ಸರಣಿ ಆಡಿಯೋ ರಿಲೀಸ್: ಚುನಾವಣೆಗೆ ಭರ್ಜರಿ ತಯಾರಿಯೇ?

ಪುತ್ತೂರು: ಒಂದರ ಬೆನ್ನಿಗೆ ಇನ್ನೊಂದರಂತೆ ಹೊರಬರುತ್ತಿರುವ ಆಡಿಯೋ ತುಣುಕುಗಳು ಚುನಾವಣೆಗೆ ತಯಾರಿಯೇ? ಹೌದು ಎನ್ನುತ್ತಿವೆ ಬಲ್ಲಮೂಲಗಳು. ಚುನಾವಣೆ ಇನ್ನೇನು ಬಂದೇ ಬಿಟ್ಟಿತು ಎನ್ನುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಹೊಸ ವರಸೆಗಳು ಆರಂಭವಾಗತೊಡಗುತ್ತವೆ. ಹೇಳಿಕೆಗಳ ವಾರ್, ವೀಡಿಯೋ ರಿಲೀಸ್ ಹೀಗೆ ಅನೇಕ ರೀತಿ. ಆದರೆ ಈ ಬಾರಿ ಪುತ್ತೂರು ಕ್ಷೇತ್ರದಲ್ಲಿ ಆಡಿಯೋ ವಾರ್ ಆರಂಭವಾಗಿವೆ. ಈ ಆಡಿಯೋ ವಾರ್ ಯಾರನ್ನು ಗುರಿಯಾಗಿಸಿಕೊಂಡಿವೆ? ಉದ್ದೇಶವಾದರೂ ಏನು? ಆಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮಸಿ ಎರಚುವ ಹುನ್ನಾರವೇ? ಹೀಗೆ ಹತ್ತು ಹಲವು ಪ್ರಶ್ನೆಗಳು

ಸರಣಿ ಆಡಿಯೋ ರಿಲೀಸ್: ಚುನಾವಣೆಗೆ ಭರ್ಜರಿ ತಯಾರಿಯೇ? Read More »

ಭಜನೆ, ಭಜಕರ ನಿಂದಿಸಿದ ಡಿ.ಆರ್.ಎಫ್.ಓ.: ಎಸಿಎಫ್ ಭರವಸೆ ಬಳಿಕ ಪ್ರತಿಭಟನೆ ಹಿಂದಕ್ಕೆ | ಠಾಣೆಯಲ್ಲಿ ದೂರು ದಾಖಲಿಸಿದ ಕಾರ್ಯಕರ್ತರು

ಪುತ್ತೂರು: ಭಜನೆಯನ್ನು ಹಾಗೂ ಭಜಕರನ್ನು ಅವಮಾನಿಸಿ ಹೇಳಿಕೆ ನೀಡಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಡಿದ ಬಳಿಕ ಹಿಂದೂ ಪರ ಸಂಘಟನೆಗಳು ಪ್ರತಿಭಟನೆಯನ್ನು ಹಿಂದೆಗೆದುಕೊಂಡವು. ಕೊಯಿಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರು ಭಜನೆಯ ಬಗ್ಗೆ ಅವಹೇಳನ ಮಾಡಿದ್ದಲ್ಲದೇ, ಭಜನೆಯಲ್ಲಿ ನಿರತರಾದವರನ್ನು ನಿಂದಿಸಿ ಫೇಸ್ ಬುಕ್ ನಲ್ಲಿ ಸಂದೇಶ ಬರೆದಿದ್ದರು. ಇದರಿಂದ ಆಕ್ರೋಶಗೊಂಡ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಬುಧವಾರ ಪುತ್ತೂರು

ಭಜನೆ, ಭಜಕರ ನಿಂದಿಸಿದ ಡಿ.ಆರ್.ಎಫ್.ಓ.: ಎಸಿಎಫ್ ಭರವಸೆ ಬಳಿಕ ಪ್ರತಿಭಟನೆ ಹಿಂದಕ್ಕೆ | ಠಾಣೆಯಲ್ಲಿ ದೂರು ದಾಖಲಿಸಿದ ಕಾರ್ಯಕರ್ತರು Read More »

ಚೀನಾದಲ್ಲಿ ಮತ್ತೆ ಕೊರೋನಾ ಉಲ್ಭಣ: ಮುಂಜಾಗ್ರತಾ ಕ್ರಮಕ್ಕಾಗಿ ಇಂದು ಸಂಜೆ ಸಿಎಂ ತುರ್ತು ಸಭೆ

ಪುತ್ತೂರು: ಚೀನಾದಲ್ಲಿ ಕೊರೋನಾ ಸೋಂಕು ಉಲ್ಭಣಗೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಇದರಿಂದಾಗಿ ಪಕ್ಕದ ದೇಶಗಳು ಜಾಗೃತಗೊಳ್ಳುತ್ತಿದ್ದು, ಕರ್ನಾಟಕದಲ್ಲೂ ಮುಂಜಾಗೃತಾ ಕ್ರಮ ಕೈಗೊಳ್ಳಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ತುರ್ತು ಸಭೆ ಕರೆದಿದ್ದಾರೆ. ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆ ನಡೆಸಿ, ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರುಗತಿಯಲ್ಲಿ ಇಲ್ಲದೇ ಇದ್ದರೂ, ಸೋಂಕು ಮತ್ತೆ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ಈ

ಚೀನಾದಲ್ಲಿ ಮತ್ತೆ ಕೊರೋನಾ ಉಲ್ಭಣ: ಮುಂಜಾಗ್ರತಾ ಕ್ರಮಕ್ಕಾಗಿ ಇಂದು ಸಂಜೆ ಸಿಎಂ ತುರ್ತು ಸಭೆ Read More »

ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ: ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಭಜನೆ ಹಾಡಿ ಪ್ರತಿಭಟನೆ

ಪುತ್ತೂರು: ಭಜನೆಯ  ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಪುತ್ತೂರು ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಸಂದರ್ಭ ಪ್ರತಿಭಟನಾಕಾರರು ಭಜನೆಯನ್ನು ಹಾಡಿ, ಅಧಿಕಾರಿಯ ಹೇಳಿಕೆಯನ್ನು ಖಂಡಿಸಿದರು. ವಲಯ ಅರಣ್ಯಾಧಿಕಾರಿಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನಿಸಲು ಪ್ರಯತ್ನಿಸಿದರೂ, ಫಲ ನೀಡಲಿಲ್ಲ. ಹೋರಾಟದಲ್ಲಿ ಪಮುಖರಾದ ಮುರಳಿಕೃಷ್ಣ ಹಸಂತಡ್ಕ, ಅಜಿತ್ ಹೊಸಮನೆ, ಶ್ರೀಧರ ತೆಂಕಿಲ, ಲತೀಶ್ ಕುಂಡ್ಯಾ, ನವೀನ್ ರೆಕ್ಯ, ಸಂತೋಷ್ ಕುಮಾರ್ ಕೈಕಾರ, ಕೃಷ್ಣ ಕುಮಾರ್

ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ: ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಭಜನೆ ಹಾಡಿ ಪ್ರತಿಭಟನೆ Read More »

error: Content is protected !!
Scroll to Top