ಪುತ್ತೂರು

ಹಣ ನೀಡಿದರೆ ಮಾತ್ರ ಕಾಂಗ್ರೆಸಿನಲ್ಲಿ ಅಭ್ಯರ್ಥಿ : ಮೋನಪ್ಪ ಭಂಡಾರಿ ಆರೋಪ | ರಾಜ್ಯದಲ್ಲಿ ಬಿಜೆಪಿಗೆ 130ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸ

ಪುತ್ತೂರು: ಹಣ ನೀಡಿದರೆ ಮಾತ್ರ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಯಾಗಲು ಸಾಧ್ಯ. ಹೀಗಿದ್ದರೂ ಬಿಜೆಪಿ ಸರಕಾರದ ಮೇಲೆ ಆರೋಪ ಮಾಡುವ ಕಾಂಗ್ರೆಸ್ ಬಳಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಕಾಂಗ್ರೆಸ್ ಪಕ್ಷ ಒಂದು ಮುಳುಗುವ ಹಡಗು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಆರೋಪಿಸಿದರು. ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಸ, ವಂಚನೆ, ಭ್ರಷ್ಟಾಚಾರ ಕಾಂಗ್ರೆಸ್ ನ ಜನ್ಮಸಿದ್ಧ ಹಕ್ಕು, ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಕಾಂಗ್ರೆಸ್ ಪಕ್ಷಕ್ಕೆ ಹಣ ಕೊಡಬೇಕು ಎಂದು ಅವರ ಪಕ್ಷದವರೇ ಬಹಿರಂಗವಾಗಿ ಆರೋಪ […]

ಹಣ ನೀಡಿದರೆ ಮಾತ್ರ ಕಾಂಗ್ರೆಸಿನಲ್ಲಿ ಅಭ್ಯರ್ಥಿ : ಮೋನಪ್ಪ ಭಂಡಾರಿ ಆರೋಪ | ರಾಜ್ಯದಲ್ಲಿ ಬಿಜೆಪಿಗೆ 130ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸ Read More »

ಸಂಘಟನೆಗಿಂತ ನಾನೇ ಮಿಗಿಲು ಎಂದವರನ್ನು ಸಂಘ ಸಾಕಷ್ಟು ನೋಡಿದೆ: ಭಜರಂಗದಳ | ಸಂಘಟನೆ ಹೋರಾಟಕ್ಕೆ ಬಿಜೆಪಿ ಸರಕಾರ ಧ್ವನಿ: ಮುರಳೀಕೃಷ್ಣ ಹಸಂತಡ್ಕ

ಪುತ್ತೂರು: ಸಂಘಟನೆಗಿಂತ ನಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು  ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದ್ದು, ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಸೇರಿಕೊಳ್ಳುತ್ತಾರೆ ಎಂದು ಭಜರಂಗ ದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿ ನಿರ್ಮಾಣ ಕಾರ್ಯವನ್ನು ಸಂಘ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಆದರೆ ಸಂಘದ ಚೌಕಟ್ಟನ್ನು ಮೀರಿ ಸಂಘದಿಂದ ಹೊರ ನಡೆದ ಹಲವಾರು ಮಹಾನ್ ನಾಯಕರು ದೇಶದಲ್ಲಿದ್ದಾರೆ. ಕಲ್ಯಾಣ್ ಸಿಂಗ್ ,

ಸಂಘಟನೆಗಿಂತ ನಾನೇ ಮಿಗಿಲು ಎಂದವರನ್ನು ಸಂಘ ಸಾಕಷ್ಟು ನೋಡಿದೆ: ಭಜರಂಗದಳ | ಸಂಘಟನೆ ಹೋರಾಟಕ್ಕೆ ಬಿಜೆಪಿ ಸರಕಾರ ಧ್ವನಿ: ಮುರಳೀಕೃಷ್ಣ ಹಸಂತಡ್ಕ Read More »

ಪುತ್ತೂರು ಚುನಾವಣಾ ಆಖಾಡದಲ್ಲಿ ಹಿಂದುತ್ವ v/s ಹಿಂದುತ್ವ | ಮುಖಂಡರ ಮೌನದಿಂದ ಬಡವಾದೀತೆ ಬಿಜೆಪಿ

ಪುತ್ತೂರು: ಕಾಂಗ್ರೆಸಿನೊಳಗಡೆಯಿದ್ದ ಬಂಡಾಯ, ಕೆಸರೆರಚಾಟ ಈ ಬಾರಿ ಬಿಜೆಪಿಗೆ ಶಿಫ್ಟ್ ಆಗಿದೆ. ಶಿಸ್ತಿಗೆ ಹೆಸರಾಗಿದ್ದ ಪಕ್ಷ ಬಿಜೆಪಿ. ಇಲ್ಲಿ ಎಲ್ಲದಕ್ಕೂ ಒಂದು ಚೌಕಟ್ಟು ಇದೆ. ನಿಯಮ ಇದೆ. ಹೈಕಮಾಂಡ್ ಹೇಳಿದ್ದಕ್ಕೆ ಇಲ್ಲ ಎನ್ನುವವರೇ ಇಲ್ಲ. ಆದರೆ ಈ ಬಾರಿ ಬಿಜೆಪಿ ಲಂಗು ಲಗಾಮಿಲ್ಲದ ಕುದುರೆಯಂತಾಗಿದೆ. ಹೇಳುವವರು – ಕೇಳುವವರು ಯಾರೂ ಇಲ್ಲ ಎಂಬಂತಾಗಿದೆ. ಪ್ರತಿ ಬಾರಿಯೂ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದೊಳಗೆ ಕೆಸರೆರಚಾಟ ಸಾಮಾನ್ಯವಾಗಿತ್ತು. ಆದರೆ ಈ ಬಾರಿ ಒಗ್ಗಟ್ಟೇ ಒಗ್ಗಟ್ಟು. ತಳಮಟ್ಟದಲ್ಲೇ ಭಾರೀ ಪ್ರಚಾರ ನಡೆಯುತ್ತಿದೆ.

ಪುತ್ತೂರು ಚುನಾವಣಾ ಆಖಾಡದಲ್ಲಿ ಹಿಂದುತ್ವ v/s ಹಿಂದುತ್ವ | ಮುಖಂಡರ ಮೌನದಿಂದ ಬಡವಾದೀತೆ ಬಿಜೆಪಿ Read More »

ಕೊಂಬಾರಿನಲ್ಲಿ ಕಾಡಾನೆ ಮೃತದೇಹ ಪತ್ತೆ

ಪುತ್ತೂರು : ಅಸ್ವಸ್ಥಗೊಂಡ ಕಾಡಾನೆಯ ಮೃತದೇಹವೊಂದು ಕೊಂಬಾರು ಗ್ರಾಮದ ಬಗ್ಪುಣಿ ಎಂಬಲ್ಲಿ ಏ.28 ರಂದು ಪತ್ತೆಯಾಗಿದೆ. ಕೆಲ ದಿನಗಳಿಂದ ಸುಬ್ರಹ್ಮಣ್ಯ-ಗುಂಡ್ಯ ಹೆದ್ದಾರಿಯ ಚೇರು, ಎರ್ಮಾಯಿಲ್ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ಗಂಡು ಕಾಡಾನೆ ಗುರುವಾರ ಕೊಂಬಾರು ಗ್ರಾಮದ ಕೆಂಜಾಳ ಬಗ್ಪುಣಿ ಎಂಬಲ್ಲಿ ಹೊಳೆಯಲ್ಲಿ ಕಾಣಿಸಿಕೊಂಡಿತ್ತು. ಸಂಜೆ ವೇಳೆ ನೀರಿನಿಂದ ಮೇಲೆ ಬಂದು ಅರಣ್ಯದೊಳಗೆ ಸಂಚರಿಸಿತ್ತು. ಈ ಸಂದರ್ಭ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆನೆಯ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ನಡೆದಾಡಲು ಸಾಧ್ಯವಾಗದ ಆನೆ ಸ್ವಲ್ಪ ದೂರ ಚಲಿಸಿ

ಕೊಂಬಾರಿನಲ್ಲಿ ಕಾಡಾನೆ ಮೃತದೇಹ ಪತ್ತೆ Read More »

ಪುತ್ತೂರು ಬ್ಲಾಕ್ ಕಾಂಗ್ರೆಸ್ ನಗರ, ಗ್ರಾಮೀಣ ಪ್ರಚಾರ ಸಮಿತಿಗೆ ಆಯ್ಕೆ

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಪ್ರಚಾರ ಸಮಿತಿಗೆ ಸಂಚಾಲಕರು ಹಾಗೂ ಸಹಸಂಚಾಲಕರನ್ನು ನೇಮಕ ಮಾಡಲಾಗಿದೆ. ನಗರ ಸಮಿತಿ ಸಂಚಾಲಕರಾಗಿ ಪ್ರಸನ್ನ ಕುಮಾರ್ ಶೆಟ್ಟಿ, ಸಹಸಂಚಾಲಕರಾಗಿ ಶಿವನಾಥ ರೈ ಮೇಗಿನಗುತ್ತು ಹಾಗೂ ಹರ್ಷದ್ ದರ್ಬೆ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮೀಣ ಪ್ರಚಾರ ಸಮಿತಿ ಸಹಸಂಚಾಲಕರಾಗಿ ಶಶಿಕಿರಣ್ ರೈ ನೂಜಿಬೈಲು, ಬೂಡಿಯಾರ್ ಪುರುಷೋತ್ತಮ ರೈ ಅವರನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಪ್ರಚಾರ ಸಮಿತಿ ಅಧ್ಯಕ್ಷ ಭಾಸ್ಕರ ಗೌಡ ಕೋಡಿಂಬಾಳ

ಪುತ್ತೂರು ಬ್ಲಾಕ್ ಕಾಂಗ್ರೆಸ್ ನಗರ, ಗ್ರಾಮೀಣ ಪ್ರಚಾರ ಸಮಿತಿಗೆ ಆಯ್ಕೆ Read More »

ಮೇ 2 ರಿಂದ 4 : ನರೇಂದ್ರ ಪ.ಪೂ. ಕಾಲೇಜಿನಲ್ಲಿ ಉಚಿತ ವ್ಯಕ್ತಿತ್ವ ವಿಕಸನ ಶಿಬಿರ – ತರಂಗ-2023

ಪುತ್ತೂರು: ಪ್ರಥಮ ಪಿಯುಸಿಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಆಯ್ಕೆ ಮಾಡ ಬಯಸುವ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ವ್ಯಕ್ತಿತ್ವ ವಿಕಸನ ಶಿಬಿರ “ತರಂಗ-2023” ಮೇ2 ರಿಂದ 4 ರಂದು ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಮತ್ತು ಪ್ರತಿಭೆಯ ಅಭಿವ್ಯಕ್ತಿಗೆ ಪೂರಕವಾದ ವೇದಿಕೆಯನ್ನು ಕಲ್ಪಿಸುವುದೇ ಕಾರ್ಯಕ್ರಮದ ಉದ್ದೇಶವಾಗಿದೆ. 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದ ವಿದ್ಯಾರ್ಥಿಗಳಿಗೆ ಕಾರ್ಯಾಗಾರದಲ್ಲಿ ಅವಕಾಶವಿದೆ. ವಿದ್ಯಾರ್ಥಿಗಳ ಏಕಾಗ್ರತೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ಯೋಗ, ವಿದ್ಯಾರ್ಥಿಗಳ ಬೌದ್ಧಿಕ

ಮೇ 2 ರಿಂದ 4 : ನರೇಂದ್ರ ಪ.ಪೂ. ಕಾಲೇಜಿನಲ್ಲಿ ಉಚಿತ ವ್ಯಕ್ತಿತ್ವ ವಿಕಸನ ಶಿಬಿರ – ತರಂಗ-2023 Read More »

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ದೈವದ ವಾಲಸರಿ ನೇಮ

ಪುತ್ತೂರು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ ಶುಕ್ರವಾರ ನಡೆಯಿತು. ನೇಮೋತ್ಸವದ ಅಂಗವಾಗಿ ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಶ್ರೀ ದಂಡನಾಯಕ ದೈವದ ವಾಲಸರಿ ನೇಮ ನಡೆಯಿತು. ಮುಂಜಾನೆ 5 ಗಂಟೆಯಿಂದಲೇ ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಮಲ್ಲಿಗೆ, ಸೀಯಾಳ, ಸೀರೆ ಅರ್ಪಿಸಿದರು.

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ದೈವದ ವಾಲಸರಿ ನೇಮ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಬಸವ ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಬಸವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ದೈವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಧೇನು ಗೋ ಶಾಲೆಯಿಂದ ಬಸವ ನೀಡುವ ನಿರ್ಣಯ ಕೈಗೊಳ್ಳಲಾಯಿತು. ಅದರಂತೆ ದೇವಸ್ಥಾನದ ಗರ್ಭಗುಡಿ ಎದುರಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಿ.ಎಸ್.ಭಟ್ ನೇತೃತ್ವದಲ್ಲಿ ನಡೆಯಿತು.  ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಬಸವನನ್ನು ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಬಸವ ಸಮರ್ಪಣೆ Read More »

ಮೇ1 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

ಪುತ್ತೂರು; ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ1 ಸೋಮವಾರ ಸೀಯಾಳಾಭಿಷೇಕ ನಡೆಯಲಿದೆ. ಲೋಕಕಲ್ಯಾಣಾರ್ಥ ಹಾಗೂ ಮಳೆಗಾಗಿ ಸೀಯಾಳಾಭಿಷೇಕ ಬೆಳಿಗ್ಗೆ 9.30 ರಿಂದ 11 ರ ತನಕ ನಡೆಯಲಿದೆ. ಸೇವಾ ರೂಪದಲ್ಲಿ ಸೀಯಾಳ ತರುವವರು ಅದೇ ದಿನ ಬೆಳಿಗ್ಗೆ 9.30 ರೊಳಗೆ ತಂದೊಪ್ಪಿಸಿ ಶ್ರೀದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ವಿನಂತಿಸಿದ್ದಾರೆ.

ಮೇ1 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ Read More »

ಚೆಕ್ ಅಮಾನ್ಯ ಆರೋಪಿ ತೀರ್ಥರಾಮ ಬಂಧನ

ಪುತ್ತೂರು: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ದರ್ಬೆ ಕಾವೇರಿಕಟ್ಟೆ ನಿವಾಸಿ ಸದಾಶಿವ ಆಚಾರ್ಯ ಎಂಬವರ ಪುತ್ರ ತೀರ್ಥರಾಮ ಹೆಚ್.ಎಸ್. ಬಂಧಿತ ಆರೋಪಿ. ಕುಂದಾಪುರದಲ್ಲಿ ತಂಪು ಪಾನೀಯ ವ್ಯವಹಾರ ನಡೆಸುತ್ತಿದ್ದು ತೀರ್ಥರಾಮ ಅವರು ಏಳು ವರ್ಷಗಳ ಹಿಂದೆ ಪುತ್ತೂರಿನ ಕೆಲವು ಸಂಸ್ಥೆಗಳಿಂದ ಸಾಲ ಪಡೆದುಕೊಂಡು ಚೆಕ್ ನೀಡಿದ್ದರು. ಅದು ಅಮಾನ್ಯಗೊಂಡ ಪರಿಣಾಮ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ

ಚೆಕ್ ಅಮಾನ್ಯ ಆರೋಪಿ ತೀರ್ಥರಾಮ ಬಂಧನ Read More »

error: Content is protected !!
Scroll to Top