ಜು.12 : ರಾಷ್ಟ್ರೀಯ ಲೋಕ ಅದಾಲತ್ | ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ : ಪತ್ರಿಕಾಗೋಷ್ಠಿಯಲ್ಲಿ ಪ್ರಕೃತಿ ಕಲ್ಯಾಣ್ ಪುರ
ಪುತ್ತೂರು:, ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ ಎಂದು ತಾಲೂಕು ಕಾನೂನು ಸಮಿತಿ ಚೇರ್ಮೆನ್, ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದ ನ್ಯಾಯಧೀಶರಾದ ಪ್ರಕೃತಿ ಕಲ್ಯಾಣ್ ಪುರ ತಿಳಿಸಿದ್ದಾರೆ. ಅವರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನ್ನು ಪುತ್ತೂರು ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ನಡೆಯಲಿದ್ದು, ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು […]










