ಪುತ್ತೂರು

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್

ಮಂಗಳೂರು : ಕಾಂಗ್ರೆಸ್​​ನವರು ಧಮ್ಕಿ ಹಾಕಿ ನಾಮಪತ್ರ ವಾಪಸ್​ ಪಡೆಸಿದರು ಎಂದು ಉಳ್ಳಾಲದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಶುಕ್ರವಾರ ನಾನು ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ ಬರುತ್ತಿದ್ದೆ. ಆ ಸಂದರ್ಭ ಕಾಂಗ್ರೆಸ್​ನ ಉಸ್ಮಾನ್ ಕಲ್ಲಾಪು ಸೇರಿದಂತೆ ಹಲವರು ನನ್ನನ್ನು ಕರೆದುಕೊಂಡು ಹೋದರು. ಬೆದರಿಕೆ ಹಾಗೂ ಧಮ್ಕಿ ಹಾಕಿ ನಾಮಪತ್ರ ವಾಪಸ್ ತೆಗೆಯುವಂತೆ ಸಹಿ ಹಾಕಿಸಿಕೊಂಡಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ, ಕೇವಲ ಒತ್ತಡದಿಂದ ನಾಮಪತ್ರ […]

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್ Read More »

ಜೆಡಿಎಸ್ ಬಂಡಾಯ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಾಸ್

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ನ ಮಹಮ್ಮದ್ ಅಶ್ರಫ್ ಕಲ್ಲೇಗ ಹಾಗೂ ಎಸ್‍ಡಿಪಿಐಯಿಂದ ನಾಮಪತ್ರ ಸಲ್ಲಿಸಿದ ಪಿ.ಇಬ್ರಾಹಿಂ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಮೇ 10ರಂದು ನಡೆಯುವ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು 10 ಮಂದಿ ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ ಇಬ್ಬರು ಚುನಾವಣೆಯಿಂದ ಹಿಂದೆ ಸರಿದಂತಾಗಿದೆ. ಏ. 24ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದ್ದು, ಇಬ್ಬರು ಅಭ್ಯರ್ಥಿಗಳು ಸೋಮವಾರ ಖುದ್ದು ಚುನಾವಣಾಧಿಕಾರಿ ಕಚೇರಿಗೆ ಹಾಜರಾಗಿ ಉಮೇದುವಾರಿಕೆ ವಾಪಾಸು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್ ಬಂಡಾಯ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಾಸ್ Read More »

ಅಂಬಿಕಾ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ

ಪುತ್ತೂರು : ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಸ್ಮಾರ್ಟ್ ಬೋರ್ಡ್ ಅನಾವರಣ ಮಾಡಿ ಮಾತನಾಡಿ, ಪ್ರಸಕ್ತ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲಿ ಅತೀವವಾದ ಪೈಪೋಟಿಯಿದೆ. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆಗೆ ಹೊಸ ಹೊಸ ತಂತ್ರಜ್ಞಾನ ದ ಬಳಕೆಯ ಬಗ್ಗೆಯೂ ಅರಿವನ್ನು ಹೊಂದಿದ್ದರೆ ಮುಂದಿನ ದಾರಿ ಸುಗಮವಾಗುತ್ತದೆ ಎಂದರು ಸಂಸ್ಥೆಯ ಕಾರ್ಯದರ್ಶಿ

ಅಂಬಿಕಾ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ Read More »

ಏ.29 ರಿಂದ ಮೇ 7 : ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

ಪುತ್ತೂರು: ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾಷ್ಬಬಂಧ ಬ್ರಹ್ಮಕಲಶೋತ್ಸವ ಏ.29 ರಿಂದ ಮೇ 7 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಇರುವ ಶ್ರೀ ದೇವಸ್ಥಾನ ಸಂಪೂರ್ಣ ಜೀರ್ಣಾವಸ್ಥೆಯಲ್ಲಿದ್ದು, ಜೀರ್ಣೋದ್ಧಾರದ ಕುರಿತು ಸ್ವರ್ಣಪ್ರಶ್ನೆಯಲ್ಲಿ ಚಿಂತನೆ ನಡೆಸಲಾಯಿತು. ಅದಂತೆ ಇದೀಗ ಊರ, ಪರವೂರ ಭಕ್ತಾದಿಗಳು ಹಾಗೂ ಬೆಳ್ಳಿಪ್ಪಾಡಿ

ಏ.29 ರಿಂದ ಮೇ 7 : ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ Read More »

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್‍ ಶಿಬಿರಕ್ಕೆ ಚಾಲನೆ

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಗೊಂಡಿತು. ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ. ರಾಧ ಶಿಬಿರ ಉದ್ಘಾಟಿಸಿ ಮಾತನಾಡಿ, “ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಇನ್ನಷ್ಟು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವಲ್ಲಿ ಸಹಕಾರಿಯಾಗಿದೆ. ಈ ಶಾಲೆಗೆ ಒಂದು ವಾರದ ಶಿಬಿರದಲ್ಲಿ ಪಾಲ್ಗೊಳ್ಳಲು ಬಂದ ತಾವೆಲ್ಲರೂ ಅತ್ಯುತ್ತಮ ಜೀವನ ಪಾಠಗಳನ್ನು ಕಲಿತು ಹೋಗಬೇಕು” ಎಂದರು. ಜಿಡೆಕಲ್ಲು ಕಾಲೇಜಿನ ಪ್ರಾಂಶುಪಾಲ ಪ್ರೊ.ಅಪ್ಪು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿದ್ಯಾರ್ಥಿ

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್‍ ಶಿಬಿರಕ್ಕೆ ಚಾಲನೆ Read More »

ಸುಳ್ಯದ ತನ್ವಿ ಮನುಜೇಶ್ “ಯುವಿಕಾ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಸ್ರೋ ಸಂಸ್ಥೆಯ ಯುವ ವಿಜ್ಞಾನಿಯಾಗಿ ಆಯ್ಕೆ

ಪುತ್ತೂರು: 2023ರ ಶೈಕ್ಷಣಿಕ ವರ್ಷದ ಯುವಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸುಳ್ಯದ ತನ್ವಿ ಮನುಜೇಶ್ ಅವರನ್ನು ಇಸ್ರೋ ಸಂಸ್ಥೆ ಯುವ ವಿಜ್ಞಾನಿಯಾಗಿ ಆಯ್ಕೆ ಮಾಡಿದೆ. ಶಾಲಾ ಮಕ್ಕಳಿಗಾಗಿ ಇರುವ ಯುವ ವಿಜ್ಞಾನಿ ಪುರಸ್ಕಾರ “ಯುವಿಕಾ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದು, ಇದು ಯುವ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ, ಇತರ ಉದಯೋನ್ಮುಖ ಪ್ರವೃತ್ತಿಗಳಲ್ಲಿ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ತಂತ್ರಜ್ಞಾನ, ವಿಜ್ಞಾನ, ಅಪ್ಲಿಕೇಶನ್ ಗಳ ಕುರಿತು ಮೂಲಭೂತ ತಂತ್ರಜ್ಞಾನವನ್ನು ನೀಡುತ್ತದೆ. ಈ ಕಾರ್ಯಕ್ರಮವನ್ನು “ಕ್ಯಾಚ್ ದೆಮ್ ಯಂಗ್ “

ಸುಳ್ಯದ ತನ್ವಿ ಮನುಜೇಶ್ “ಯುವಿಕಾ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಸ್ರೋ ಸಂಸ್ಥೆಯ ಯುವ ವಿಜ್ಞಾನಿಯಾಗಿ ಆಯ್ಕೆ Read More »

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ Read More »

ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯಧನ ವಿತರಣೆ

ಪುತ್ತೂರು: ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಸುಮಾರು 5 ವರ್ಷಗಳಿಂದ ದಾನಿಗಳ ಸಹಕಾರದಲ್ಲಿ ಹಲವಾರು ಬಡ ಜನರ ಕಷ್ಟಕ್ಕೆ ನೇರವಾಗುತ್ತಿದ್ದು, 14 ವರ್ಷದ ಬಾಲಕನ ಚಿಕಿತ್ಸೆಗೆ ಸಹಾಯಧನ ಚೆಕ್ಕನ್ನು ಸೋಮವಾರ ವಿತರಿಸಲಾಯಿತು. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿದಾನದಲ್ಲಿ ಕರುಳು ಸಂಬತೀತ ಖಾಯಿಲೆಯಿಂದ ಬಳಲುತ್ತಿರುವ ಮಂಗಳೂರಿನ ಗೌರವ್ 14 ವರ್ಷದ ಬಾಲಕನ ಚಿಕಿತ್ಸೆಗೆ 17,259 ರೂಪಾಯಿಯ ಚೆಕ್ಕನ್ನು ಶಶಿoದ್ರ ಜಂಕಲ ಅವರ ಸಹಕಾರದಲ್ಲಿ ಬರಿಮಾರ್  ಶ್ರೀ ಕಾಳಿಕಾಂಬಾ ಗೊಂಬೆ ಬಳಗದ ಮಾಲಕ ರಜನೀಶ್ ವಿತರಿಸಿದರು

ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯಧನ ವಿತರಣೆ Read More »

ಬಿಜೆಪಿ ಚುನಾವಣಾ ಪೂರ್ವಭಾವಿ ಸಭೆ

ಪುತ್ತೂರು: ಶಾಂತಿಗೋಡು ಭಾರತೀಯ ಜನತಾ ಪಾರ್ಟಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ ಭಾನುವಾರ ಸಂಜೆ ಪಾರ್ವತಿ ಕರ್ಪುತ್ತಮೂಳೆ ಅವರ ಮನೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸುವ ನಿಟ್ಟಿನಲ್ಲಿ ಕಾರ್ಯಕರ್ತೆರ ಶ್ರಮ ಅಗತ್ಯವಾಗಿದೆ. ಹಿಂದಿನ ಅವಧಿಯಲ್ಲಿ ಸುಮಾರು 20 ಕೋಟಿಗೂ ಮಿಕ್ಕಿ ಅನುದಾನ ಶಾಂತಿಗೋಡು ಗ್ರಾಮಕ್ಕೆ ಬಂದಿದ್ದು, ಕೃಷಿಕರಿಗೆ ಅನುಕೂಲವಾಗುವ  ಕಿಂಡಿ ಅಣೆಕಟ್ಟು, ಏತ ನೀರಾವರಿ ಯೋಜನೆ ಹಾಗೂ ರಸ್ತೆಗಳಿಗೆ ಹಲವಾರು ಅನುದಾನಗಳನ್ನು ನೀಡಲಾಗಿದೆ.. ಮುಂಬರುವ ಚುನಾವಣೆಗೆ ಈ ಅಭಿವೃದ್ಧಿ ಪೂರಕವಾಗಲಿದ್ದು,

ಬಿಜೆಪಿ ಚುನಾವಣಾ ಪೂರ್ವಭಾವಿ ಸಭೆ Read More »

ಏ.26 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಪೂರ್ವಭಾವಿ ಸಭೆ

ಪುತ್ತೂರು : ಏ.26 ರಂದು ಪುತ್ತೂರಿನಲ್ಲಿ ಜೈನಭವನದಲ್ಲಿ ನಡೆಯಲಿರುವ ಬಿಜೆಪಿ ಮಹಿಳಾ ಸಮಾವೇಶದ ಪೂರ್ವಭಾವಿ ಸಭೆ ಭಾನುವಾರ ಬಿಜೆಪಿ ಚುನಾವಣಾ ಕಚೇರಿಯಲ್ಲಿ ನಡೆಯಿತು. ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಸಭೆಯನ್ನುದ್ದೇಶಿಸಿ ಮಾತನಾಡಿ, ಸಮಾವೇಶದಲ್ಲಿ ರಾಜ್ಯ ಆರೋಗ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಸೇರಿದಂತೆ ಮತ್ತಿತರ ಮಹಿಳಾ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಅವರು ವಿನಂತಿಸಿದರು. ಸಭೆಯಲ್ಲಿ ಮಹಿಳಾ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷೆ ಜ್ಯೋತಿ ಪಾಂಡೆ, ಮಹಿಳಾ ಆಯೋಗದ ಮಾಜಿ ಸದಸ್ಯೆ, ಮಹಿಳಾ

ಏ.26 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಪೂರ್ವಭಾವಿ ಸಭೆ Read More »

error: Content is protected !!
Scroll to Top