ಪುತ್ತೂರು

ನಾಳೆ (ಏ.21) : ಶ್ರೀ ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ ಏ.21 ಶುಕ್ರವಾರ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಉತ್ಸವದ ಅಂಗವಾಗಿ ಬೆಳಿಗ್ಗೆ 7.3೦ ರಿಂದ ಗಣಪತಿ ಹೋಮ, ಮಹಾಪೂಜೆ, ಪಾಷಾಣ ಮೂರ್ತಿಗೆ ತಂಬಿಲ, ನಾಗದೇವರಿಗೆ ತಂಬಿಲ, ಗುಳಿಗನಿಗೆ ತಂಬಿಲ ನಡೆಯಲಿದೆ. 11 ಗಂಟೆಗೆ ಮೂಡಾಯೂರು ಚಂದ್ರಶೇಖರ ಮತ್ತು ಬಳಗದವರಿಂದ ಸ್ಯಾಕ್ಸೋಫೋನ್ ವಾದನ, ಮಧ್ಯಾಹ್ನ 1230೦ ಕ್ಕೆ ಮಹಾಪೂಜೆ, ದೇವಿದರ್ಶನ, ಪ್ರಸಾದ ವಿತರಣೆ, 1.30 ರಿಂದ […]

ನಾಳೆ (ಏ.21) : ಶ್ರೀ ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ Read More »

ಶಾಸಕ ಸಂಜೀವ ಮಠಂದೂರು ಅವರ ಹಿಂದಿನ ಅಭಿವೃದ್ಧಿ ಕಾರ್ಯ ಆಶಾ ತಿಮ್ಮಪ್ಪರಿಗೆ ಶ್ರೀರಕ್ಷೆಯಾಗಲಿದೆಯೇ ? | ಅಭ್ಯರ್ಥಿ ಆಶಾ ತಿಮ್ಮಪ್ಪರೊಂದಿಗೆ ಫೀಲ್ಡಿಗಿಳಿದ ಸಂಜೀವ ಮಠಂದೂರು

ಪುತ್ತೂರು: ಪುತ್ತೂರು ಬಿಜೆಪಿಗೆ ಈ ಬಾರಿ ಹಿಂದಿನ ಅವಧಿಯ ಅಭಿವೃದ್ಧಿ ಕಾರ್ಯಗಳೇ ಶ್ರೀ ರಕ್ಷೆಯಾಗಲಿದೆಯೇ ? ಹೀಗೊಂದು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಹಿಂದಿನ ಅವಧಿಯ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ತಂದ ಅನುದಾನ, ವಿಧಾನಸಭಾ ಕ್ಷೇತ್ರಾದ್ಯಂತ ಮಾಡಿದ ಅಭಿವೃದ್ಧಿ ಕಾರ್ಯಗಳು ಈ ಬಾರಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಕೈಹಿಡಿಯಲಿರುವುದು ಗ್ಯಾರಂಟಿ. ಹಿಂದಿನ ಅವಧಿಯಲ್ಲಿ ಸಂಜೀವ ಮಠಂದೂರು ಅವರು ರಸ್ತೆಗಳ ಅಭಿವೃದ್ಧಿ, ನೂತನ ರಸ್ತೆಗಳು, ಕಿಂಡಿ ಅಣೆಕಟ್ಟುಗಳು, ವಿವಿಧ ಇಲಾಖೆಗಳ ವಿಸ್ತೃತ ಕಟ್ಟಡ, ನೂತನ ಕಟ್ಟಡಗಳಿಗೆ ಶಿಲಾನ್ಯಾಸ, ಸರಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳು ಹೀಗೆ ಹತ್ತು ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ಈ ನಡುವೆ ಕ್ಷೇತ್ರದಿಂದ ಟಿಕೇಟ್ ಪಡೆಯುವಲ್ಲಿ ವಂಚಿತವಾದರೂ, ಪಕ್ಷದ ಹೈಕಮಾಂಡ್ ನ ಬದ್ಧತೆಗೆ ತಲೆಬಾಗಿ ತನ್ನ ಪ್ರಾಮಾಣಿಕತೆಯನ್ನು ಮೆರೆಯುವ ಮೂಲಕ ಜನಮಾನಸದಲ್ಲಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಅಭ್ಯರ್ಥಿ ಆಶಾ ತಿಮ್ಮಪ್ಪರ ಗೆಲುವಿಗಾಗಿ ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದು, ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿರುವುದು ಬಿಜೆಪಿಯ ಗೆಲುವಿನ ಪತಾಕೆ ಹಾರಿಸುವಲ್ಲೂ ಶಕ್ತಿಮೀರಿ ಕೆಲಸ ಮಾಡುತ್ತಿದ್ದಾರೆ. ಆಶಾ ತಿಮ್ಮಪ್ಪ ಅವರು ಈಗಾಗಲೇ ವಿವಿಧ ಧಾರ್ಮಿಕ ಕೇಂದ್ರಗಳು, ಮಠಾಧೀಶರು, ದೇವಸ್ಥಾನಗಳನ್ನು ಭೇಟಿ ಮಾಡಿ ಅಲ್ಲಿಯ ಸ್ವಾಮೀಜಿಗಳು, ಮಠಾಧೀಶರಿಂದ ಆಶೀರ್ವಚನ ಪಡೆದಿದ್ದಾರೆ. ತನ್ನ ಕಾರ್ಯಕ್ಷೇತ್ರದಲ್ಲಿ ದಣಿವರಿಯದೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು,, ಕಾರ್ಯಕರ್ತರು ಫೀಲ್ಡಿಗಿಳಿದು ಹುರುಪಿನಿಂದ ಆಶಾ ತಿಮ್ಮಪ್ಪ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.  ಒಟ್ಟಾರೆಯಾಗಿ  ಗ್ರಾಮೀಣ ಮಟ್ಟದಲ್ಲಿ ಭರಪೂರ ಬೆಂಬಲ ದೊರೆತಿದೆ. ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದಂದಿನಿಂದಲೇ ಆಶಾ ತಿಮ್ಮಪ್ಪ ಅವರು ಬಿಜೆಪಿಯ ಹಿರಿಯ ಮುಖಂಡರು, ಸಂಘ ಪರಿವಾರದ ಮುಖಂಡರುಗಳು ಸಹಿತ ಕ್ಷೇತ್ರಾದ್ಯಂತ ಕಾರ್ಯಕರ್ತರನ್ನು ಭೇಟಿ ಮಾಡುವ ಮೂಲಕ ಸಾಕಷ್ಟು ಚರ್ಚೆಗಳನ್ನು ಈಗಾಗಲೇ ಮಾಡಿದ್ದಾರೆ. ಮುಖ್ಯವಾಗಿ ಶಾಸಕ ಸಂಜೀವ ಮಠಂದೂರು ಅವರೇ ಸ್ವತಃ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಜತೆ ಫೀಲ್ಡಿಗಿಳಿದು ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಆಶಾ ತಿಮ್ಮಪ್ಪರಿಗೆ ಬಲ ಬರುವುದರ ಜತೆಗೆ ಶ್ರೀ ರಕ್ಷೆಯಾಗಲಿದೆ ಎಂಬ ಆಶಾಭಾವನೆಯನ್ನು ಹೊಂದಿದ್ದಾರೆ. ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯಕರ್ತರು ಹಾಗೂ ಮತದಾರರನ್ನು ಭೇಟಿ ಮಾಡುವ ಮೂಲಕ ಸದ್ದಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಶಾಸಕ ಸಂಜೀವ ಮಠಂದೂರು ಅವರ ಊರಾದ ಹಿರೇಬಂಡಾಡಿಗೆ ಸಂಜೀವ ಮಠಂದೂರು ಜತೆ ಇತ್ತೀಚೆಗೆ ಭೇಟಿ ನೀಡಿ ಅಲ್ಲಿನ ಕಾರ್ಯಕರ್ತರೊಂದಿಗೆ ಚರ್ಚಿಸಿದ್ದಾರೆ.

ಶಾಸಕ ಸಂಜೀವ ಮಠಂದೂರು ಅವರ ಹಿಂದಿನ ಅಭಿವೃದ್ಧಿ ಕಾರ್ಯ ಆಶಾ ತಿಮ್ಮಪ್ಪರಿಗೆ ಶ್ರೀರಕ್ಷೆಯಾಗಲಿದೆಯೇ ? | ಅಭ್ಯರ್ಥಿ ಆಶಾ ತಿಮ್ಮಪ್ಪರೊಂದಿಗೆ ಫೀಲ್ಡಿಗಿಳಿದ ಸಂಜೀವ ಮಠಂದೂರು Read More »

ನಾಳೆ (ಏ.20) ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ | ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ಚಿತ್ರನಟಿ ಶೃತಿ ಪಾಲ್ಗೊಳ್ಳುವಿಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಒಂದು ಅಭೂತಪೂರ್ವ ಕಾರ್ಯಕ್ರಮವಾಗಲಿದ್ದು, ಗ್ರಾಮ ಮಟ್ಟದಿಂದ ಸುಮಾರು 10 ರಿಂದ 15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ನಾಮಪತ್ರ ಪ್ರಕ್ರಿಯೆಗೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದರು. ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು.

ನಾಳೆ (ಏ.20) ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ | ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ಚಿತ್ರನಟಿ ಶೃತಿ ಪಾಲ್ಗೊಳ್ಳುವಿಕೆ Read More »

ಗಂಗಾ ಪಾದೇಕಲ್‌ರವರಿಗೆ “ನಿರಂಜನ ಪ್ರಶಸ್ತಿ ಪ್ರದಾನ”

ಪುತ್ತೂರು: ಸಾಹಿತ್ಯ ಎಂಬುವುದು ಎಲ್ಲರದ್ದಲ್ಲ ನಾವು ಅದನ್ನು ಅಪ್ಪಿಕೊಳ್ಳಬೇಕು, ಹಾಗೆಯೇ ನಮ್ಮದು ಎಂದು ಒಪ್ಪಿಕೊಳ್ಳಬೇಕು. ಯಾವುದೇ ಏರು ಪೇರುಗಳನ್ನು ಎದುರಿಸಿದರು, ಮನಸ್ಸು ಮುದುಡಿಹೋದರೂ, ಜೀವನವೇ ಬೇಡ ಎಂದು ನಿರ್ಧಾರವಾದರೂ ನಾವು ನಮ್ಮ ಮನಸನ್ನು ಗಟ್ಟಿಮಾಡಿಕೊಳ್ಳಬೇಕು ಎಂದು ಹಿರಿಯ ಸಾಹಿತಿ, ವಿದ್ವಾಂಸ ಪ್ರೊ. ವಿ ಬಿ ಅರ್ತಿಕಜೆ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಪುತ್ತೂರು ವಿವೇಕಾನಂದ ಸಂಶೋಧನ ಕೇಂದ್ರ ಹಾಗೂ ಶಿವರಾಮ ಕಾರಂತ ಅಧ್ಯಯನ ಕೇಂದ್ರ ಮತ್ತು ಕನ್ನಡ ಸಂಘದ  ಸಹಯೋಗದಲ್ಲಿ ನಡೆದ

ಗಂಗಾ ಪಾದೇಕಲ್‌ರವರಿಗೆ “ನಿರಂಜನ ಪ್ರಶಸ್ತಿ ಪ್ರದಾನ” Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬುಧವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ನ ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ. ಉಪಸ್ಥಿತರಿದ್ದರು.

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ Read More »

ಧ್ವಜಾವರೋಹಣದೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಸಂಪನ್ನ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಬುಧವಾರ ಬೆಳಿಗ್ಗೆ ಧ್ವಜಾವರೋಹಣದೊಂದಿಗೆ ಸಂಪನ್ನಗೊಂಡಿತು. ಮಂಗಳವಾರ ಸಂಜೆ ಶ್ರೀ ದೇವರು ದೂರದ ವೀರಮಂಗಲಕ್ಕೆ ಜಳಕಕ್ಕೆ ತೆರಳಿ ಬುಧವಾರ ಮುಂಜಾನೆ ಕುಮಾರಧಾರ ನದಿಯಲ್ಲಿ ಜಳಕಗೊಂಡು ಅಲ್ಲಿಂದ ಪುನಃ ಶ್ರೀ ದೇವಸ್ಥಾನಕ್ಕೆ ಆಗಮಿಸಿದರು. ಸಂಪ್ರದಾಯದಂತೆ ದೇವಸ್ಥಾನದಲ್ಲಿ ಶ್ರೀ ದೇವರನ್ನು ಬರಮಾಡಿಕೊಂಡು ಬಳಿಕ ಶ್ರೀ ದೇವರು ಗರ್ಭಗುಡಿ ಪ್ರವೇಶಿಸಿದರು. ಶ್ರೀ ಮಹಾಲಿಂಗೇಶ್ವರನಿಗೆ ಆರತಿ ಬೆಳಗಲಾಯಿತು. ಬಳಿಕ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ಧ್ವಜಾವರೋಹಣ ನಡೆಯುವ ಮೂಲಕ ಒಂಭತ್ತು ದಿನಗಳ ಜಾತ್ರೆ

ಧ್ವಜಾವರೋಹಣದೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಸಂಪನ್ನ Read More »

ಮೆರವಣಿಗೆಯಲ್ಲಿ ಸಾಗಿ ಬಂದ ಕಾಂಗ್ರೆಸ್‍ ಅಭ್ಯರ್ಥಿ ಅಶೋಕ್ ಕುಮಾರ್ ರೈ | ಇಂದು ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಸಾಗಿ ಬಂದರು. ದರ್ಬೆ ವೃತ್ತದಿಂದ ಹೊರ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಅಭ್ಯರ್ಥಿ ಅಶೋಕ್ ಕುಮಾರ್ ದರ್ಬೆ‍ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಕೊಂಬು, ಕಹಳ, ಕಲ್ಲಡ್ಕ ಬೊಂಬೆ, ನಾಸಿಕ್ ಬ್ಯಾಂಡ್, ಹುಲಿವೇಷ ಮೆರವಣಿಗೆಗೆ ಮೆರುಗು ನೀಡಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಬ್ಲಾಕ್

ಮೆರವಣಿಗೆಯಲ್ಲಿ ಸಾಗಿ ಬಂದ ಕಾಂಗ್ರೆಸ್‍ ಅಭ್ಯರ್ಥಿ ಅಶೋಕ್ ಕುಮಾರ್ ರೈ | ಇಂದು ನಾಮಪತ್ರ ಸಲ್ಲಿಕೆ Read More »

ಗೋಪಾಲಕೃಷ್ಣ ಭಟ್ ಕಾನಾವು ನಿಧನ

ಪುತ್ತೂರು: ಮುಕ್ಕೂರು ಹಾಲುತ್ಪಾದಕರ ಸಹಕಾರ ಸಂಘದ ಮಾಜಿ ನಿರ್ದೇಶಕ ಗೋಪಾಲಕೃಷ್ಣ ಭಟ್ ಕಾನಾವು (79) ಮಂಗಳವಾರ ರಾತ್ರಿ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿ, ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಗೋಪಾಲಕೃಷ್ಣ ಭಟ್ ಕಾನಾವು ನಿಧನ Read More »

ವೀರಮಂಗಲದ ಕುಮಾರಧಾರದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ |  ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ

ಪುತ್ತೂರು:  ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ  ದೂರದ ವೀರಮಂಗಲದಲ್ಲಿ ಶ್ರೀ ದೇವರ ಅವಭೃತ ಸ್ನಾನ ಬುಧವಾರ ಬೆಳಿಗ್ಗೆ 6.45 ಸುಮಾರಿಗೆ ನಡೆಯಿತು. ಮಂಗಳವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ಬಳಿಕ ಹೊರಟ ಶ್ರೀ ದೇವರು ವೀರಮಂಗಲದ ತೆರಳುವ ದಾರಿಯುದ್ದಕ್ಕೂ ಕಟ್ಟೆಪೂಜೆ ಗೊಂಡು ಬುಧವಾರ ಮುಂಜಾನೆ ಹೊತ್ತಿಗೆ ತಲುಪಿದರು. ಈ ಸಂದರ್ಭದಲ್ಲಿ ದಾರಿಯುದ್ದಕ್ಕೂ ಭಕ್ತಾದಿಗಳು ತಳಿರು ತೋರಣಗಳಿಂದ ಸಿಂಗರಿಸಿ ಶ್ರೀ ದೇವರಿಗೆ ಹಣ್ಣುಕಾಯಿ, ಕಾಣಿಕೆ ಅರ್ಪಿಸಿದರು. ಶ್ರೀ ದೇವರ ಜತೆ

ವೀರಮಂಗಲದ ಕುಮಾರಧಾರದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ |  ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ Read More »

ನ್ಯಾಯವಾದಿ ಕೃಷ್ಣಮೂರ್ತಿ ಮೇಲೆ ಗುಂಡಿನ ದಾಳಿ : ಪತ್ತೆಹಚ್ಚಲು ಕ್ರಮಕ್ಕಾಗಿ ಒತ್ತಾಯ | ಹಿಂದೂ ಜನಜಾಗೃತಿ ಮನವಿ

ಪುತ್ತೂರು: ಗೌರಿ ಲಂಕೇಶ್ ಪ್ರಕರಣವನ್ನು ಕೈಗೆತ್ತಿಕೊಂಡಿರುವ ನ್ಯಾಯವಾದಿ ಕೃಷ್ಣಮೂರ್ತಿ ಅವರ ಮೇಲೆ ಗುಂಡಿನ ದಾಳಿ ನಡೆಸಿದವರನ್ನು ತಕ್ಷಣ ಪತ್ತೆಹಚ್ಚಲು ಸರಕಾರ ಕ್ರಮಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಪು್ತ್ತೂರು ತಹಶೀಲ್ದಾರ್  ಶಿವಶಂಕರ್ ಗೆ ಮನವಿ ಸಲ್ಲಿಸಿದರು. ಗೌರಿ ಲಂಕೇಶ್ ಪ್ರಕರಣ ನಡೆಸುತ್ತಿರುವ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಗುಂಡಿನ ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳಿದ್ದಾರೆಯೇ ಎಂದು ಪತ್ತೆ ಹಚ್ಚಬೇಕು ಎಂದು ಮನವಿಯಲ್ಲಿ ಸಮಿತಿ ಆಗ್ರಹಿಸಿದೆ. ಈ ಸಂದರ್ಭದಲ್ಲಿ ಸಮಿತಿಯ ಧರ್ಮಪ್ರೇಮಿಗಳಾದ ದಿವಾಕರ್ ರೈ,, ಸುಧಾಕರ್ ನಾಯಕ್,  ಧರ್ಮಶಿಕ್ಷಣದ

ನ್ಯಾಯವಾದಿ ಕೃಷ್ಣಮೂರ್ತಿ ಮೇಲೆ ಗುಂಡಿನ ದಾಳಿ : ಪತ್ತೆಹಚ್ಚಲು ಕ್ರಮಕ್ಕಾಗಿ ಒತ್ತಾಯ | ಹಿಂದೂ ಜನಜಾಗೃತಿ ಮನವಿ Read More »

error: Content is protected !!
Scroll to Top