ಬಾಲಗಂಗಾಧರನಾಥ ಸ್ವಾಮೀಜಿಗೆ ಅವರೇ ಸಾಟಿ: ಧರ್ಮಪಾಲನಾಥ ಸ್ವಾಮೀಜಿ | ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ೭೮ನೇ ಜಯಂತ್ಯೋತ್ಸವ ಪೂರ್ವಭಾವಿ ಸಭೆ
ಪುತ್ತೂರು: ಸುಧೀರ್ಘ ಇತಿಹಾಸ ಹಾಗೂ ಪರಂಪರೆ ಹೊಂದಿರುವ ನಾಥ ಪರಂಪರೆಯ ೭೨ ಜಗದ್ಗುರುಗಳನ್ನು ಕಂಡಿರುವ ಆದಿಚುಂಚನಗಿರಿ ಧರ್ಮ ಪೀಠಾಧ್ಯಕ್ಷರಾಗಿದ್ದ, ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಸಾಧನೆಗೆ ಅವರೇ ಸಾಟಿ ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನುಡಿದರು.ಡಿಸೆಂಬರ್ ೨೨ರಂದು ನಡೆಯಲಿರುವ ಆದಿಚುಂಚನಗಿರಿ ಮಠದ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಆಶೀರ್ವಚನ ನೀಡಿದರು.ಶುಕ್ರವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜರಗಿದ ಸಭೆಯಲ್ಲಿ ಮಾತನಾಡಿದ ಅವರು, […]