ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ | ಏಕಕಾಲದಲ್ಲಿ ಎರಡೂ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಮೆರವಣಿಗೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಶನಿವಾರ ಹೊರೆಕಾಣಿಕೆ ಸಮರ್ಪಣೆಯಾಯಿತು. ಅಪರಾಹ್ನ 3.30ಕ್ಕೆ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ ಶ್ರಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಜಿ ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು. ಬಳಿಕ ಹೊರೆಕಾಣಿಕೆ ಮೆರವಣಿಗೆ ಕೊಂಬು, ಕಹಳೆ, […]










