ಪುತ್ತೂರು

ಕಬಕ ಗ್ರಾಮದಲ್ಲಿ ಮೇಳೈಸಿದ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮದ ಐದನೇ ಸರಣಿ  “ಸಾಹಿತ್ಯ ಸಂಭ್ರಮ”

ಪುತ್ತೂರು: ವರ್ಷದಲ್ಲಿ ಒಂದು ಬಾರಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನಲ್ಲಿರುವ ಎಲ್ಲಾ ಸಾಹಿತಿಗಳಿಗೆ ಮತ್ತು ಕಲಾವಿದರಿಗೆ ವೇದಿಕೆ ನೀಡಲು ಹಾಗೂ  ಸಾಧಕರನ್ನು  ಸನ್ಮಾನಿಸಲು  ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ  ಪುತ್ತೂರು ತಾಲೂಕಿನ 32 ಗ್ರಾಮದಲ್ಲೂ ತಿಂಗಳಿಗೆ ಒಂದರಂತೆ  ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮವನ್ನು ಏರ್ಪಡಿಸಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಹಾಗೂ ಸಾಧಕರನ್ನ ಗುರುತಿಸುವ  ಕಾರ್ಯವನ್ನು ಹಮ್ಮಿಕೊಂಡಿದ್ದೇವೆ ಎಂದು ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಹೇಳಿದರು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ […]

ಕಬಕ ಗ್ರಾಮದಲ್ಲಿ ಮೇಳೈಸಿದ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮದ ಐದನೇ ಸರಣಿ  “ಸಾಹಿತ್ಯ ಸಂಭ್ರಮ” Read More »

ಅಶಕ್ತರಿಗೆ ನೆರವಾಗಲು ನಿಧಿ ಸಂಗ್ರಹ ಅಭಿಯಾನ

ಪುತ್ತೂರು: ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ, ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್, ದ. ಕ ಕರ್ನಾಟಕ ಇವರ ನೇತೃತ್ವದಲ್ಲಿ ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಬ್ರಹ್ಮಕಲಶ ಸಂದರ್ಭದಲ್ಲಿ ಅಶಕ್ತರಿಗೆ ನೆರವಾಗಲು ನಿಧಿ ಸಂಗ್ರಹ ಅಭಿಯಾನ ನಡೆಸಲಾಯಿತು.  ಅಭಿಯಾನದಲ್ಲಿ ಒಟ್ಟಾದ ಮೊತ್ತ 20500 ರೂ.ವನ್ನು ಧರ್ಮಸ್ಥಳ ನಿಡ್ಲೆ ಗ್ರಾಮದ ದೀಪಿಕಾ ಅವರ ಚಿಕಿತ್ಸೆಗಾಗಿ ವಿತರಿಸಲಾಯಿತು.  ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಹಾಗೂ ಆಡಳಿತ ಮಂಡಳಿಯ ಚಂದ್ರಹಾಸ್ ಗುರಿಕಾರ, ಶಶೀಂದ್ರ ಜಂಕಲ ಹಾಗೂ ಟ್ರಸ್ಟಿನ ಗೌರವಾಧ್ಯಕ್ಷ ಉದಯ

ಅಶಕ್ತರಿಗೆ ನೆರವಾಗಲು ನಿಧಿ ಸಂಗ್ರಹ ಅಭಿಯಾನ Read More »

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು

ಮಂಗಳೂರು : ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ. 30 ರಂದು ದೈವಾರಾಧ‌ನೆ ನಡೆಯುತ್ತಿದ್ದ ಸಂದರ್ಭ, ದೈವ ನರ್ತಕರಾದ ಕಾಂತು ಅಜಿಲ ಸ್ಥಳದಲ್ಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದರು. ಅವರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂ. ಆರ್ಥಿಕ ನೆರವನ್ನು ಏ. 2 ರಂದು ಘೋಷಣೆ ಮಾಡಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು Read More »

ಏ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವಏ.ಮಾ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವ

ಪುತ್ತೂರು: ಹನುಮಗಿರಿ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ ಏ.4 ರಿಂದ 6 ರ ತನಕ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಏ.4 ರಂದು ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಉಗ್ರಾಣ ತುಂಬಿಸುವುದು, ರಾತ್ರಿ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ, ಪವಮಾನ ರಥೋತ್ಸವ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಏ.5 ರಂದು ಬೆಳಿಗ್ಗೆ ನಾಗತಂಬಿಲ, ಗಣಪತಿ ಹೋಮ, ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸಂಜೆ

ಏ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವಏ.ಮಾ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವ Read More »

ನಾಳೆ (ಮಾ.3) : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಏ.3 ರಂದು ವಿವಿಧ ವೈದಿಕ ಕಾರ್ಯಕ್ರ ಮಗಳೊಂದಿಗೆ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಹೊರೆಕಾಣಿಕೆ ಸಮರ್ಪಣೆ ಭಾನುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶಾಂತಿಗೋಡು ವಿಷ್ಣುಮೂರ್ತಿ ಭಜನಾ ಮಂದಿರದಿಂದ ಭಕ್ತಾದಿಗಳು ಸಮರ್ಪಿಸಿದ ಹೊರೆಕಾಣಿಕೆ ಮೆರವಣಿಗೆ ಸಾಗಿ ಶ್ರೀ ದೇವಸ್ಥಾನದಲ ಉಗ್ರಾಣದಲ್ಲಿ ಜಮಾವಣೆಗೊಂಡಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.

ನಾಳೆ (ಮಾ.3) : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ Read More »

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ

ಗಾದಿ ತೋರಿಸಿ ಆಸೆ ಜೀವಂತವಾಗಿರಿಸಿ ಗೆಲ್ಲುವ ತಂತ್ರ ಪುತ್ತೂರು : ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಆದರೆ ಚುನಾವಣಾ ಪ್ರಕ್ರಿಯೆ ನಿರ್ಣಾಯಕ ಹಂತಕ್ಕೆ ಬಂದು ತಲುಪಿದ್ದರೂ ಮತದಾರರಿಗೆ ಈ ಸಲ ಮುಖ್ಯಮಂತ್ರಿ ಯಾರಾಗಬಹುದು ಎಂಬ ಒಂದು ಸಣ್ಣ ಅಂದಾಜು ಕೂಡ ಸಿಗುತ್ತಿಲ್ಲ. ಪಕ್ಷಗಳಲ್ಲೇ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ನಿರ್ಧಾರ ಇನ್ನೂ ಆಗಿಲ್ಲ. ಜೆಡಿಎಸ್‌ನಲ್ಲಿ ಮಾತ್ರ ಈ ಗೊಂದಲ ಇಲ್ಲ. ಏಕೆಂದರೆ

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ Read More »

ಶೈಕ್ಷಣಿಕ ಅವಧಿ ಮೇ 29ರಿಂದ ಆರಂಭ | ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ | 2023-24ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ

ಪುತ್ತೂರು: 2023-24ನೇ ಸಾಲಿನ ಶೈಕ್ಷಣಿಕ ಅವಧಿ ಮೇ.29 ರಿಂದ ಆರಂಭವಾಗಲಿದೆ. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಆಯುಕ್ತರು ಸೂಚನೆ ನೀಡಿದ್ದು, ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಕೆಗಳು ಮಾ.29 ರಿಂದ ಆರಂಭಗೊಳ್ಳುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. 2023-24ನೇ ಮೊದಲ ಶೈಕ್ಷಣಿಕ ಅವಧಿ ಮೇ. 29ರಿಂದ ಅಕ್ಟೋಬರ್ 7 ರ ತನಕ,

ಶೈಕ್ಷಣಿಕ ಅವಧಿ ಮೇ 29ರಿಂದ ಆರಂಭ | ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ | 2023-24ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ Read More »

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಏ. 1 ರಂದು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಎಂಬಾತನೇ ಬಂಧಿತ ಆರೋಪಿ. ಆರೋಪಿಯನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 30ರಂದು ಇಚ್ಲಂಪಾಡಿ ಗ್ರಾಮದ ಮೊಂಟೆತಡ್ಕ ಎಂಬಲ್ಲಿ ಸಂಭವಿಸಿದೆ. ರೆನೀಶ ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರ ತಮ್ಮ ಎರಡು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಮನೆಯಲ್ಲಿ ರೆನೀಶನು ಒಬ್ಬರೇ ವಾಸವಾಗಿದ್ದರು. ಇಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದು, ಮಾ. 30 ರಂದು ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದು, ರಾತ್ರಿ ಸುಮಾರು 12.00 ಗಂಟೆಯ ಸಮಯಕ್ಕೆ ಚಿಕ್ಕಪ್ಪನ ಮಗ ಜಿತಿನ್ ಗೆ ದೂರವಾಣಿ ಮೂಲಕ, ನನ್ನ ಮರಣಕ್ಕೆ ನಾನೆ

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »

ಶಿಕ್ಷಕ ವೆಂಕಟೇಶ್ ಪ್ರಸಾದ್ ಗೆ ರಾಷ್ಟ್ರಮಟ್ಟದ ಅಥ್ಲೆಟಿಕ್ಟ್ ನಲ್ಲಿ ಕಂಚಿನ ಪದಕ

ಪುತ್ತೂರು: ಕರ್ನಾಟಕ ಮಾಸ್ಟರ್ಸ್ ಆತ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್  27ರಿಂದ 30ರವರೆಗೆ ನಡೆದ  42ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ಪುತ್ತೂರು ತಾಲೂಕು, ದರ್ಬೆತ್ತಡ್ಕದ  ವೆಂಕಟೇಶ್ ಪ್ರಸಾದ್  45ರ ವಯೋಮಾನದ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಗಳಿಸಿರುತ್ತಾರೆ. ಅವರು ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜು ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದಾರೆ.

ಶಿಕ್ಷಕ ವೆಂಕಟೇಶ್ ಪ್ರಸಾದ್ ಗೆ ರಾಷ್ಟ್ರಮಟ್ಟದ ಅಥ್ಲೆಟಿಕ್ಟ್ ನಲ್ಲಿ ಕಂಚಿನ ಪದಕ Read More »

error: Content is protected !!
Scroll to Top