ಪುತ್ತೂರು

ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ‌ ಗುರುವಾರ ಅಪರಾಧ ತಡೆ ಮಾಸಾಚರಣೆ ನಡೆಯಿತು. ಭಜನೆ, ಪ್ರಾರ್ಥನೆಗೆ ಮಹತ್ವವಿದೆ:ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ಮಾತನಾಡಿ, ಗಾಂಧೀಜಿ ಹೇಳಿರುವಂತೆ ಭಜನೆ ಹಾಗೂ ಪ್ರಾರ್ಥನೆಗೆ ಅದರದ್ದೆ ಆದ ಮಹತ್ವವಿದೆ. ನಮ್ಮ ಸಂಸ್ಕೃತಿ ಉಳಿವಿಗಾಗಿ ಭಜನಾ ಕಾರ್ಯ ಮಾಡುವುದು ಉತ್ತಮ ಕೆಲಸ. ಯಾವಾಗಲು ಅಪರಾಧ ಪ್ರಕರಣಗಳನ್ನು ದಾಖಲಿಸುವ ಠಾಣೆಯಲ್ಲಿ ಕಾರ್ಯಕರ್ತರು ಭಜನೆ ಮಾಡಿದ್ದು ತುಂಬಾ ಸಂತೋಷದ ವಿಷಯ ಎಂದರು.ಅಪರಾಧ ತಡೆಗಟುವಲ್ಲಿ ತಮ್ಮ ಸಹಕಾರ ಅತ್ಯಗತ್ಯ.ಮೊಬೈಲ್, ತಂತ್ರಜ್ಞಾನ ಅಭಿವೃದ್ಧಿ ಆಗುತ್ತಿದ್ದಂತೆ, ಅಪರಾಧಗಳು ಹೆಚ್ಚಾಗಿ ನಡೆಯುತ್ತವೆ. […]

ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ Read More »

ಕುವೆಂಪು ಜನ್ಮ ದಿನ ವಿಶ್ವ ಮಾನವ ದಿನಾಚರಣೆ

ಪುತ್ತೂರು: ರಾಷ್ಟ್ರಕವಿ ಕುವೆಂಪು ಅವರ ಹುಟ್ಟುಹಬ್ಬದ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುತ್ತಿದ್ದು, ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿಯಿಂದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ನಮ್ಮ ದೇಶ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದನ್ನು ತಿಳಿಸಿದವರು ಕುವೆಂಪು. ಈ ಮೂಲಕ ವಿಶ್ವ ಮಾನವ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್

ಕುವೆಂಪು ಜನ್ಮ ದಿನ ವಿಶ್ವ ಮಾನವ ದಿನಾಚರಣೆ Read More »

ಸಂತ ಫಿಲೋಮಿನಾ ಕಾಲೇಜಿನಿಂದ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಹಾಗೂ ಕೆದಂಬಾಡಿ ಗ್ರಾಮ ಪಂಚಾಯತ್‌ ಇವುಗಳ ನಡುವೆ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರದ ಒಡಂಬಡಿಕೆ ನಡೆಸಲಾಯಿತು.ಕೆದಂಬಾಡಿ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳು ಒಡಂಬಡಿಕೆಗೆ ಸಹಿ ಹಾಕಿದರು. ಸದರಿ ಒಡಂಬಡಿಕೆಯು 2027 ಡಿಸೆಂಬರ್‌ ತನಕ ಮಾನ್ಯವಾಗಿರುತ್ತದೆ. ಈ ಒಡಂಬಡಿಕೆಯನ್ನು ಕೆದಂಬಾಡಿ ಗ್ರಾಮದ ಸಾಮಾಜಿಕ ಉನ್ನತೀಕರಣ ಹಾಗೂ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ, ಪರಿಸರದ ಬಗ್ಗೆ ಕಾಳಜಿ ಹಾಗೂ ಸಾಮಾಜಿಕ

ಸಂತ ಫಿಲೋಮಿನಾ ಕಾಲೇಜಿನಿಂದ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರ Read More »

ಆರ್ಯಾಪು ಗ್ರಾ.ಪಂ. ಸದಸ್ಯ ಗಿರೀಶ್ ಗೌಡ ಅಸೌಖ್ಯದಿಂದ ನಿಧನ

ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಗೌಡ ಮರಿಕೆ ಎನ್ನುವವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಿ.29ರ ಬೆಳಗ್ಗಿನ ಜಾವ ನಿಧನರಾದರು. ಇವರಿಗೆ 34 ವರ್ಷ ವಯಸ್ಸಾಗಿತ್ತು. ಆರ್ಯಾಪು ಪಂಚಾಯತ್ ನ 4ನೇ ವಾರ್ಡಿನ ಕ್ರಿಯಾಶೀಲ ಬಿಜೆಪಿ ಬೆಂಬಲಿತ ಸದಸ್ಯರಾದ ಗಿರೀಶ್ ಗೌಡ ಮರಿಕೆ ಇವರು ಕೆಲ ಸಮಯದಿಂದ ಜಾಂಡಿಸ್ ಖಾಯಿಲೆಯಿಂದ ಬಳಲುತಿದ್ದರು. ಎರಡು ದಿನಗಳ ಹಿಂದೆಯಷ್ಟೇ ಹೊಟ್ಟೆ ನೋವು ಉಲ್ಬಣಿಸಿದ ಕಾರಣ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ

ಆರ್ಯಾಪು ಗ್ರಾ.ಪಂ. ಸದಸ್ಯ ಗಿರೀಶ್ ಗೌಡ ಅಸೌಖ್ಯದಿಂದ ನಿಧನ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ, ಬಲಿ ಉತ್ಸವ, ನೃತ್ಯ ಬಲಿ ಸೇವೆ

ಪುತ್ತೂರು: ತಾಲೂಕಿನ ಕಾರಣಿಕ ದೇವಸ್ಥಾನವಾದ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಮಧ್ಯಾಹ್ನ ಕಿರುಷಷ್ಠಿ, ರಾತ್ರಿ ದೇವರ ಬಲಿ ಉತ್ಸವ ನಡೆದು, ನೃತ್ಯ ಬಲಿ ಸೇವೆ ಜರಗಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ಕಿರುಷಷ್ಠಿ ಉತ್ಸವ ನಡೆಯಿತು. ಬುಧವಾರ ಬೆಳಿಗ್ಗೆ ಗಣಪತಿ ಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪವಮಾನಭಿಷೇಕ, ನಾಗದೇವರಿಗೆ ಆಶ್ಲೇಷ ಹೋಮ, ಆಶ್ಲೇಷ ಬಲಿ, ಮಧ್ಯಾಹ್ನ ತುಲಾಭಾರ, ಮಹಾಪೂಜೆ, ಅನ್ನಸಂತರ್ಪಣೆ ಜರಗಿತು. ಸಂಜೆ 6.30ಕ್ಕೆ ದುರ್ಗಾಪೂಜೆ ನಡೆದು, ಬಳಿಕ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ, ಬಲಿ ಉತ್ಸವ, ನೃತ್ಯ ಬಲಿ ಸೇವೆ Read More »

ಪುತ್ತೂರಿನ ಬಿಂದು ಸಮೂಹ ಸಂಸ್ಥೆಗೆ ಅಟಲ್ ಸಾಧನಾ ಪುರಸ್ಕಾರ

ಪುತ್ತೂರು: 2022ನೇ ಸಾಲಿನ ಕೇಂದ್ರ ಸರ್ಕಾರದ ‘ಅಟಲ್ ಸಾಧನಾ ಪುರಸ್ಕಾರ’ಕ್ಕೆ ಪುತ್ತೂರಿನ ನರಿಮೊಗರು ಎಸ್.ಜಿ. ಕಾರ್ಪೊರೇಟ್ಸ್ ಸಮೂಹದ ಮೆಗಾ ಪ್ರೊಸೆಸಿಂಗ್ ನ ಬಿಂದು ಸಮೂಹ ಸಂಸ್ಥೆ ಆಯ್ಕೆಯಾಗಿದೆ. ಬಿಂದು ಸಮೂಹ ಸಂಸ್ಥೆ ಆಡಳಿತ ನಿರ್ದೇಶಕರಾದ ಸತ್ಯಶಂಕರ್ ಭಟ್ ಹಾಗೂ ರಂಜಿತಾ ಶಂಕರ್ ಅವರು ನವದೆಹಲಿ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಕೇಂದ್ರ ಉಕ್ಕು ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಫಗ್ಗನ್ ಕುಲಸ್ತೆ, ಬಿಜೆಪಿ ವಕ್ತಾರ ಶಾನವಾಜ್ ಹುಸೇನ್ ಪ್ರಶಸ್ತಿ ಪ್ರದಾನ ಮಾಡಿದರು.ಆಹಾರ ಉತ್ಪನ್ನ ತಯಾರಿಕ

ಪುತ್ತೂರಿನ ಬಿಂದು ಸಮೂಹ ಸಂಸ್ಥೆಗೆ ಅಟಲ್ ಸಾಧನಾ ಪುರಸ್ಕಾರ Read More »

ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ

ಪುತ್ತೂರು: ಶಾಂತಿಮೊಗರು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ. 28ರಂದು ಕಿರು ಷಷ್ಠಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಬೆಳಿಗ್ಗೆ 9ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಕಿರು ಷಷ್ಠಿ ಹಿನ್ನೆಲೆಯಲ್ಲಿ ನೂರಾರು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.

ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ Read More »

ಕಾರ್ಪಾಡಿ ದೇವಸ್ಥಾನದಲ್ಲಿ ಕರಸೇವೆ

ಪುತ್ತೂರು: ಜಾತ್ರೋತ್ಸವ ಸಂಭ್ರಮದಲ್ಲಿರುವ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕರಸೇವೆ ಮಾಡಿದ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಕುಂಜೂರುಪಂಜ ಒಕ್ಕೂಟದ ಸದಸ್ಯರಿಗೆ ದೇವಸ್ಥಾನದಲ್ಲಿ ಪ್ರಸಾದ ನೀಡಲಾಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧಾಕರ್ ರಾವ್ ಆರ್ಯಾಪು, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಲ್ನಾಡು ವಲಯದ ಮೇಲ್ವಿಚಾರಕ ಹರೀಶ್ ಕೆ., ಸೇವಾ ಪ್ರತಿನಿಧಿ ಆಶಾಲತಾ, ಶೌರ್ಯ ತಂಡದ ಪ್ರತಿನಿಧಿಗಳಾದ ವಿನಯ್ ಕೋಟ್ಲಾರ್, ಸದಸ್ಯರಾದ ಜಗದೀಶ್, ನವೀನ, ವಿನೋದ್, ಅರುಣ, ಸಂಧ್ಯಾ, ದಿವ್ಯಾ, ಧನ್ಯಾ, ಸ್ವಾತಿ,

ಕಾರ್ಪಾಡಿ ದೇವಸ್ಥಾನದಲ್ಲಿ ಕರಸೇವೆ Read More »

ಡಿ. ೨೯: ಅರಣ್ಯ ಇಲಾಖೆ ಅಧಿಕಾರಿ ವಜಾಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

೫ ಪೊಲೀಸ್ ಠಾಣೆ ಮುಂಭಾಗ ಏಕಕಾಲದಲ್ಲಿ ಪ್ರತಿಭಟನೆ ಪುತ್ತೂರು: ಭಜನೆ ಹಾಗೂ ಭಜಕರ ಹಾಗೂ ಹಿಂದೂ ದೇವರ ಬಗ್ಗೆ ನಿಂದನೆಯ ಪೋಸ್ಟ್ ಹಾಕುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಯನ್ನು ಅಮಾನತುಗೊಳಿಸದಿದ್ದರೆ ಡಿ. ೨೯ರಂದು ಬೆಳಿಗ್ಗೆ ೧೦ಕ್ಕೆ ಪುತ್ತೂರು ಜಿಲ್ಲಾ ವ್ಯಾಪ್ತಿಯ ಪುತ್ತೂರು ನಗರ, ಉಪ್ಪಿನಂಗಡಿ, ಬೆಳ್ಳಾರೆ, ಸುಳ್ಯ, ಕಡಬ, ಬೆಳ್ತಂಗಡಿ ಠಾಣಾ ಮುಂಭಾಗ ಏಕಕಾಲದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದು ಪರಿಷದ್, ಭಜರಂಗದಳ ಪುತ್ತೂರು ಜಿಲ್ಲೆ ಪ್ರಕಟಣೆ ನೀಡಿದೆ. ಅರಣ್ಯ ಇಲಾಖೆಯ ಅಧಿಕಾರಿ ಸಂಜೀವ ಅವರನ್ನು ಡಿ.

ಡಿ. ೨೯: ಅರಣ್ಯ ಇಲಾಖೆ ಅಧಿಕಾರಿ ವಜಾಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ Read More »

ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ: ಸತೀಶ್ ರಾವ್

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮೇಧಾನ್ವೇಷ- 2022′ ಉದ್ಘಾಟನೆ ಪುತ್ತೂರು: ,ಡಿ 28.ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ. ಮೆದುಳಿಗೆ ಶಿಕ್ಷಣ, ಶರೀರಕ್ಕೆ ಪೋಷಣೆ, ಹೃದಯಕ್ಕೆ ಸಂಸ್ಕಾರ ಎನ್ನುವ ಮಾತಿಗೆ ಪೂರಕವಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಈ ಎಲ್ಲಾ ಆಯಾಮಗಳಲ್ಲೂ ಸಮರ್ಥರನ್ನಾಗಿಸಲು ಹಲವು ವೇದಿಕೆಗಳ ಮುಖೇನ ಪ್ರಯತ್ನಿಸುತ್ತದೆ. ಅದೇ ರೀತಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿ ವಹಿಸುತ್ತಿ ರುವುದು ಶ್ಲಾಘನೀಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ

ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ: ಸತೀಶ್ ರಾವ್ Read More »

error: Content is protected !!
Scroll to Top