ಪುತ್ತೂರು

ಉಪನ್ಯಾಸಕ ಹುದ್ದೆ ಶಿಫ್ಟ್: ಜಿಡೆಕಲ್ಲು ವಿದ್ಯಾರ್ಥಿಗಳಿಂದ ಕಾಲೇಜು ಬಹಿಷ್ಕರಿಸಿ ಪ್ರತಿಭಟನೆ

ಪುತ್ತೂರು: ಎರಡು ಉಪನ್ಯಾಸಕ ಹುದ್ದೆಗಳನ್ನು ಶಿಫ್ಟ್ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ ರಕ್ಷಕ-ಶಿಕ್ಷಕ ಸಂಘದ ನೇತೃತ್ವದಲ್ಲಿ ಜಿಡೆಕಲ್ಲು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಕಾಲೇಜು ಭಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿ ನಾಯಕ ವಿನೀತ್ ಮಾತನಾಡಿ, ಕಾಲೇಜಿನಲ್ಲಿ 120 ವಿದ್ಯಾರ್ಥಿಗಳಿದ್ದಾರೆ. ಇನ್ನಷ್ಟು ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಆಗಬೇಕು ಎಂದು ಹೇಳುತ್ತಾರೆ. ಆದರೆ ಇರುವ ಉಪನ್ಯಾಸಕ ಹುದ್ದೆಯನ್ನೇ ಪಿರಿಯಾಪಟ್ಟಣಕ್ಕೆ ಶಿಫ್ಟ್ ಮಾಡುತ್ತಾರೆ. ಹೀಗಾದರೆ ಕಾಲೇಜು ಅಭಿವೃದ್ಧಿ ಆಗುವುದು ಹೇಗೆ? ಕಾಲೇಜಿಗೆ ಆಗಮಿಸಲು ಬಸ್ […]

ಉಪನ್ಯಾಸಕ ಹುದ್ದೆ ಶಿಫ್ಟ್: ಜಿಡೆಕಲ್ಲು ವಿದ್ಯಾರ್ಥಿಗಳಿಂದ ಕಾಲೇಜು ಬಹಿಷ್ಕರಿಸಿ ಪ್ರತಿಭಟನೆ Read More »

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ

ಮಂಗಳೂರು : ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ಮಾರ್ಚ್ 26 ರಂದು ನಡೆದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವಉದ್ಯೋಗ-ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವ ಎಸ್‌ ಅಂಗಾರ, ಮೀನುಗಾರಿಕೆ ಕ್ಷೇತ್ರ ಕಡಿಮೆ ಆದಾಯದಲ್ಲಿ ಹೆಚ್ಚು ಸಂಪಾದನೆ ಗಳಿಸಬಹುದಾದ ಕ್ಷೇತ್ರ. ಕೃತಕ ಹಾಗೂ ಒಳನಾಡು ಮೀನುಗಾರಿಕೆಗೆ ಆದ್ಯತೆ ನೀಡಲಾಗುವುದು. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕರ್ನಾಟಕಕ್ಕೆ ಪ್ರಾಯೋಗಿಕವಾಗಿ ಮತ್ಸ್ಯವಾಹಿನಿ ವಾಹನ

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದ ಕಟ್ಟೆ ಪುನರ್ ನಿರ್ಮಾಣಕ್ಕೆ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದಲ್ಲಿರುವ,  ಕೆರೆ ಆಯನ ನಡೆಯುವ ಶ್ರೀ ದೇವರ ಕಟ್ಟೆಯನ್ನು ಶಿಲಾಮಯ ಕಟ್ಟೆಯಾಗಿ ರೂಪುಗೊಳಿಸುವ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿ, ಜಾತ್ರೋತ್ಸವ ಸಂದರ್ಭ ಶ್ರೀ ಮಹಾಲಿಂಗೇಶ್ವರ  ದೇವಸ್ಥಾನದ ಜಾತ್ರೋತ್ಸವ ಸಂದರ್ಭದಲ್ಲಿ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದಲ್ಲಿರುವ , ದೇವರು ಕುಳಿತುಕೊಳ್ಳುವ, ಕೆರೆ ಆಯನ  ಮಾಡುವ ಕಟ್ಟೆಯನ್ನು ಶಿಲಾಮಯ ಕಟ್ಟೆಯನ್ನಾಗಿ  ನಿರ್ಮಾಣ ಮಾಡಿ ಅಲ್ಲಿರುವ ವರುಣನ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದ ಕಟ್ಟೆ ಪುನರ್ ನಿರ್ಮಾಣಕ್ಕೆ ಚಾಲನೆ Read More »

ಸರಕಾರಿ ಆಸ್ಪತ್ರೆ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆಯಿಲ್ಲ : ಶಾಸಕ ಮಠಂದೂರು | ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸಿಸ್ ಘಟಕ, ಪ್ರಯೋಗ ಶಾಲಾ ಉಪಕರಣ ಉದ್ಘಾಟನೆ

ಪುತ್ತೂರು: ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸೀಸ್ ಘಟಕ ಮತ್ತು ಪ್ರಯೋಗ ಶಾಲಾ ಉಪಕರಣಗಳ ಉಧ್ಘಾಟನೆ ಸೋಮವಾರ ಬೆಳಿಗ್ಗೆ ನಡೆಯಿತು. ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಸರಕಾರಿ ಆಸ್ಪತ್ರೆಗಳು ಯಾವುದೇ ಖಾಸಾಗಿ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಶಾಸಕರ ಪ್ರದೇಶಾಭಿವೃಧ್ಧಿ ಯೋಜನೆಯ ಅನುದಾನದ ಮೂಲಕ ಒದಗಿಸಲಾಗಿದೆ. ರೋಟರಿ ಸಂಸ್ಥೆಯ ಕೊಡುಗೆಯೂ ಇಲ್ಲಿ ಸ್ಮರಣೀಯ . ಜನೌಷಧಿ ಕೇಂದ್ರದ ಮೂಲಕ ಕಡಿಮೆ ವೆಚ್ಚದಲ್ಲಿ ಔಷಧಿಗಳನ್ನು ನೀಡುವ ಕೆಲಸ ಕಾರ್ಯಗಳು

ಸರಕಾರಿ ಆಸ್ಪತ್ರೆ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆಯಿಲ್ಲ : ಶಾಸಕ ಮಠಂದೂರು | ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸಿಸ್ ಘಟಕ, ಪ್ರಯೋಗ ಶಾಲಾ ಉಪಕರಣ ಉದ್ಘಾಟನೆ Read More »

ಹದಿಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಸ್ವಾಮಿ ವಿವೇಕಾನಂದ ಯೂಥ್ ಮೂಮೆನ್ಟ್  ಮತ್ತು  ಪ್ರಗತಿ  ಪಾರಾ ಮೆಡಿಕಲ್ ಕಾಲೇಜು  ವತಿಯಿಂದ ಹದಿ ಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ ಪ್ರಗತಿ ಪಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು. ಪ್ರೋಗ್ರಾಮಿಂಗ್ ಅಧಿಕಾರಿ  ರವಿ ರೈ ಮಾಹಿತಿ ನೀಡಿ, ಏಡ್ಸ್ ರೋಗ ನಿರ್ಮೂಲನೆಗೆ ಸರಕಾರ ಕೈಗೊಂಡಿರುವ ಕಾರ್ಯಕ್ರಮಗಳು,  ರೊಗ ಪತ್ತೆಯಾದರೆ ವ್ಯಕ್ತಿ ಅನುಸರಿಸಬೇಕಾದ ಕ್ರಮಗಳನ್ನು ವಿವರಿಸಿದರು, ಏಡ್ಸ್ ರೋಗಿಗೆ ಆತ್ಮಸ್ಥೈರ್ಯವನ್ನು ಹೆಚ್ಚುಮಾಡುವ ಕೆಲಸ ಮಾಡಬೇಕು ಎಂದರು. ಕ್ಷೇತ್ರ ಸಂಯೋಜಕಿ ಚೈತ್ರ ಸಹಕರಿಸಿದರು. ಕಾಲೇಜಿನ ಉಪನ್ಯಾಸಕಿ ಮನಸಾ

ಹದಿಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ Read More »

ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ರ್ಯಾಲಿ

ಪುತ್ತೂರು : ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಮಂಜೂರು ಮಾಡಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಹಮ್ಮಿಕೊಂಡ ಬೈಕ್ ಜಾಥಾದ ಅಂಗವಾಗಿ ಕಲ್ಲೇಗ ಸಭಾ ವೇದಿಕೆಯಲ್ಲಿ ನಡೆದ ಜಾಥಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕ್ರೀಡೆಗೆ ಪೂರಕವಾಗಿ ಪುತ್ತೂರಿನ ತೆಂಕಿದಲ್ಲಿ ಈಗಾಲೇ ಜಾಗ ಖರೀದಿ ಮಾಡಲಾಗಿದೆ ಎಂದ ಅವರು, ಪುತ್ತೂರಿನಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂದೇಶವನ್ನು ಬೈಕ್ ಜಾಥಾ ಮೂಲಕ ಆಯೋಜಿಸಿದ ಯುವ

ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ರ್ಯಾಲಿ Read More »

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ

ಬಂಟ್ವಾಳ : ಮಾ.26 ರಂದು ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ. ವಾಹನದಲ್ಲಿ ಹಿಂಸಾತ್ಮಕ ವಾಗಿ ಕಟ್ಟಿಹಾಕಲಾಗಿದ್ದ ಎರಡು ಕರು ಸಹಿತ ಪಿಕಪ್ ವಾಹನ ಸೇರಿ ಒಟ್ಟು ಸುಮಾರು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಟ್ವಾಳ ಗ್ರಾಮಾಂತರ

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ Read More »

ಯೋಜನೆಗಳ ಅನುಷ್ಠಾನ ಡಬಲ್ ಇಂಜಿನ್ ಸರಕಾರದಿಂದ ಸಾಧ್ಯವಾಗಿದೆ : ಶಾಸಕ ಮಠಂದೂರು | ಎಪಿಎಂಸಿ ಬಳಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ

ಪುತ್ತೂರು: ಹಲವು ವರ್ಷಗಳ ಬೇಡಿಕೆಯಾದ ಪುತ್ತೂರು – ಎಪಿಎಂಸಿ – ಉಪ್ಪಿನಂಗಡಿ ಸಂಪರ್ಕ ರಸ್ತೆಯ ಎಪಿಎಂಸಿ ಬಳಿಯ ರಸ್ತೆಯ ರೈಲ್ವೇ ಕ್ರಾಸಿಂಗ್ ಬಳಿ ರೂ. 12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರೈಲ್ವೇ ಅಂಡರ್‌ಪಾಸ್‌ನ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಬಹು ವರ್ಷಗಳ ಬೇಡಿಕೆಯಾದ ಈ ರಸ್ತೆ ರೈತರು ಸೇರಿದಂತೆ ಜನಸಾಮಾನ್ಯರಿಗೆ ಹಾಗೂ ತುರ್ತು ನಗರಕ್ಕೆ ಬರುವವರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ

ಯೋಜನೆಗಳ ಅನುಷ್ಠಾನ ಡಬಲ್ ಇಂಜಿನ್ ಸರಕಾರದಿಂದ ಸಾಧ್ಯವಾಗಿದೆ : ಶಾಸಕ ಮಠಂದೂರು | ಎಪಿಎಂಸಿ ಬಳಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ Read More »

ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತುರ್ತು ಸೇವಾ ಯೋಜನೆಯ ಚೆಕ್ ಹಸ್ತಾಂತರ

ಪುತ್ತೂರು: ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಸರೆ 2 ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ತುಳುನಾಡಿನ ಸಮಾಜ ಸೇವೆಯಲ್ಲಿ ನಿರತರಾಗಿರುವ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಹಾಗೂ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ್ನು ಗುರುತಿಸಿ ಸಂಸ್ಥೆಗೆ ಗೌರಾವರ್ಪಣೆ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಮನೆಯ ಫಲಾನುಭವಿ ಗಿರಿಜಾ ಮೊಗೇರ್ತಿ ತುರ್ತು ಸೇವಾ ಯೋಜನೆಯಾಗಿ 5 ಸಾವಿರ ರೂ. ಚೆಕ್ಕನ್ನು ಸಹಾಯಹಸ್ತ ಟ್ರಸ್ಟಿನ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಅರ್ಜುನ್ ಭಂಡಾರ್ಕರ್, ಗೋವಿಂದ ಬಾಬು

ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತುರ್ತು ಸೇವಾ ಯೋಜನೆಯ ಚೆಕ್ ಹಸ್ತಾಂತರ Read More »

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪುತ್ತೂರು:ಯುವಕನೋರ್ವ ಪಾಣೆಮಂಗಳೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಕೆಮ್ಮಿಂಜೆ ಗ್ರಾಮದ ಲಕ್ಷ್ಮೀ ವೆಂಕಟರಮಣ ಲೇಔಟ್ ನಿವಾಸಿ ವಿಠ್ಠಲ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಅಂಗಡಿ ಹೊಂದಿದ್ದು, ಅಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ Read More »

error: Content is protected !!
Scroll to Top