ಪುತ್ತೂರು

ಕುಂದಾಪುರದ ಬಾಲಕನಿಗೆ ನೆರವಾದ ಪುತ್ತೂರಿನ ಲೋಕಸೇವಾ ಟ್ರಸ್ಟ್

ಪುತ್ತೂರು: ಕರ್ನಾಟಕ ಸಹಾಯಹಸ್ತ ಲೋಕ ಸೇವಾ ಟ್ರಸ್ಟ್, ನೊಂದವರ ಪಾಲಿಗೆ ಆಸರೆ ವತಿಯಿಂದ ಮಲ್ಪೆ ವಡಬಾಂಡೇಶ್ವರ ಪವಿತ್ರ ರಥೋತ್ಸವ ಸಂದರ್ಭ ಭವತಿ ಭಿಕ್ಷಾಂ ದೇಹಿ ಕಾರ್ಯಕ್ರಮ ಆಯೋಜಿಸಲಾಯಿತು. ಕುಂದಾಪುರ ತಾಲೂಕು ಕಟ್ ಬೆಲ್ತೂರು ಗ್ರಾಮದ ಗುರುಚರಣ್ ಶ್ಯಾಮಲಾ ದಂಪತಿಯ 4 ವರ್ಷದ ಪುತ್ರ ಪವನ್ ಕುಮಾರ್ ಎಂಬ ಬಾಲಕನ ಚಿಕಿತ್ಸೆಗಾಗಿ 40 ಲಕ್ಷ ರೂ. ಅಗತ್ಯವಿದ್ದು, ಹಣ ಸಂಗ್ರಹಿಸುವ ಉದ್ದೇಶದಿಂದ ಯೋಜನೆ ಹಮ್ಮಿಕೊಳ್ಳಲಾಯಿತು. ದಾನಿಗಳಿಂದ ಸಂಗ್ರಹವಾದ 40100 ರೂ.ವನ್ನು ಮಲ್ಪೆ ಪೊಲೀಸ್ ಠಾಣೆಯಲ್ಲಿ ಮಗುವಿಗೆ ಹಸ್ತಾಂತರಿಸಲಾಯಿತು. ಮಲ್ಪೆ ಠಾಣಾ ಪಿ.ಎಸ್.ಐ ಸುಷ್ಮಾ ಭಂಡಾರಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಈಶ್ವರ್ ಮಲ್ಪೆ […]

ಕುಂದಾಪುರದ ಬಾಲಕನಿಗೆ ನೆರವಾದ ಪುತ್ತೂರಿನ ಲೋಕಸೇವಾ ಟ್ರಸ್ಟ್ Read More »

ಸಂತ ಫಿಲೋಮಿನಾದ ದತ್ತು ಗ್ರಾಮ ಕೆದಂಬಾಡಿಯಲ್ಲಿ, ರಸ್ತೆ ದುರಸ್ಥಿ ಸ್ವಚ್ಛತೆ

ಪುತ್ತೂರು: ಕೆದಂಬಾಡಿ ಗ್ರಾಮವನ್ನು ದತ್ತು ಸ್ವೀಕರಿಸಿರುವ ಸಂತ ಫಿಲೋಮಿನಾ ಕಾಲೇಜಿನ ವತಿಯಿಂದ ಗ್ರಾಮದ ವಿವಿಧೆಡೆಗಳಲ್ಲಿ ರಸ್ತೆ ದುರಸ್ಥಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ನೇತೃತ್ವದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್ ನ ಸಹಕಾರದೊಂದಿಗೆ ದತ್ತು ಸ್ವೀಕಾರದ ಬಳಿಕ ಪ್ರಥಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತನ್ ರೈ ಮಾತನಾಡಿ, ಸ್ವಚ್ಛ ರಸ್ತೆ ಯಾವತ್ತೂ ಸುರಕ್ಷಿತ. ಈ ಹಿನ್ನೆಲೆಯಲ್ಲಿ ಸಂತ ಫಿಲೋಮಿನಾ

ಸಂತ ಫಿಲೋಮಿನಾದ ದತ್ತು ಗ್ರಾಮ ಕೆದಂಬಾಡಿಯಲ್ಲಿ, ರಸ್ತೆ ದುರಸ್ಥಿ ಸ್ವಚ್ಛತೆ Read More »

ಒಕ್ಕಲಿಗ ಗೌಡ ಯುವ ಸಮುದಾಯದ ತಾ| ಮಟ್ಟದ ಕ್ರೀಡಾ ಸಂಭ್ರಮ

ಪುತ್ತೂರು: ತೆಂಕಿಲ ಯುವ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಡಿ. 26ರಂದು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿದರು. ಕ್ರೀಡಾ ಸಂಭ್ರಮವನ್ನು ಕೊಡಿಪ್ಪಾಡಿ ಊರ ಗೌಡರಾದ ಪಕ್ರು ಗೌಡ ನಂದನ ಉದ್ಘಾಟಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಮಾತನಾಡಿ, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ, ಅವಕಾಶ ಮಾಡಿಕೊಟ್ಟಾಗ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲು ಸಾಧ‍್ಯ. ಇಂತಹ ಕಾರ್ಯಗಳು ನಡೆದಾಗ ಸಮಾಜ ಗುರುತಿಸುವಂತೆ ಆಗುತ್ತದೆ. ಕ್ರೀಡೆಗೆ ಪ್ರಾಮುಖ್ಯತೆ ಕೊಟ್ಟು ಇಂತಹ ಕ್ರೀಡಾ ಸಂಭ್ರಮವನ್ನು ಆಯೋಜಿಸಿದಾಗ ಎಲ್ಲಾ ವಲಯದವರು ಪಾಲ್ಗೊಂಡು, ಸಮುದಾಯದಲ್ಲಿ ಒಗ್ಗಟ್ಟು

ಒಕ್ಕಲಿಗ ಗೌಡ ಯುವ ಸಮುದಾಯದ ತಾ| ಮಟ್ಟದ ಕ್ರೀಡಾ ಸಂಭ್ರಮ Read More »

ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವ ದಿ. 24ರಂದು ನಡೆಯಿತು. ಅಧ್ಯಕ್ಷತೆ ವಹಿಸಿದ್ಧ ಶಾಸಕ ಸಂಜೀವ ಮಠದೂರು ಮಾತನಾಡಿ,  364 ದಿನಗಳಲ್ಲಿ ಎಲ್ಲಾ ಸಿಗುವ ಒಂದು ದಿನವಂದರೆ ವಾರ್ಷಿಕೋತ್ಸವ. ಎಲ್ಲಾ ಮಕಳ ಪ್ರತಿಭೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ವರ್ಷದಲ್ಲಿ ಮಾಡಿರುವ ಸಾಧನೆಯನ್ನು, ಪ್ರತಿಭೆಯನ್ನು ಪ್ರದರ್ಶಿಸುವ ಅವಕಾಶ ವಾರ್ಷಿಕೋತ್ಸವದಲ್ಲಿ ಆಗುತ್ತದೆ.  ಒಂದು ಪಾರಂಪರಿಕ ಕಾಲೇಜು, 100 ವರ್ಷ ಇತಿಹಾಸ ಇರುವ ಕಾಲೇಜು, ಶಿವರಾಮ ಕಾರಂತರು ಓಡಾಡಿದ ನೆಲ, ಮೊಳಹಳ್ಳಿ ಶಿವರಾಯರ

ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ Read More »

ಮೌಲ್ಯಗಳು ಪ್ರತಿಯೊಬ್ಬನ ಬದುಕಿಗೂ ಆಧಾರ ಸ್ತಂಭ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಫ್ಯಾಕಲ್ಟಿ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಡಾ. ಗುರುರಾಜ ಕರಜಗಿ

ಪುತ್ತೂರು: ಬುದ್ಧಿಗೆ ಬೋಧಕವಾದ ವಿಚಾರಗಳು ಅಲ್ಪ ಸಮಯ ಮಾತ್ರ ಉಳಿದುಕೊಳ್ಳುತ್ತವೆ. ಆದರೆ ಮನಸ್ಸಿಗೆ ಬೋಧಕವಾದ ವಿಚಾರ ಶಾಶ್ವತವಾಗಿ ಉಳಿದುಕೊಳ್ಳುತ್ತವೆ. ಆದ್ದರಿಂದ ಮನಸ್ಸಿನಲ್ಲಿ ಅಚ್ಚೊತ್ತಬಹುದಾದ ಜೀವನ ಮೌಲ್ಯಗಳು ಪ್ರತಿಯೊಬ್ಬನಿಗೂ ಅತ್ಯಂತ ಅಗತ್ಯ. ಎಲ್ಲರ ಜೀವನದಲ್ಲೂ ಮೌಲ್ಯಗಳು ಮಹತ್ವದ ಪಾತ್ರ ವಹಿಸುತ್ತದೆ. ಅವುಗಳೇ ಬದುಕಿಗೆ ಆಧಾರ ಸ್ತಂಭಗಳಾಗಿವೆ. ನುಡಿದಂತೆ ನಡೆಯುವ, ನಡೆವಂತೆ ನುಡಿಯುವ ವ್ಯಕ್ತಿತ್ವ ಎಲ್ಲರಿಂದಲೂ ಗೌರವಕ್ಕೆ ಪಾತ್ರವಾಗುತ್ತದೆ ಎಂದು ಶಿಕ್ಷಣ ತಜ್ಞ, ಹಿರಿಯ ಪ್ರಾಧ್ಯಾಪಕ ಡಾ. ಗುರುರಾಜ ಕರಜಗಿ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟಿನ ಬಪ್ಪಳಿಗೆ ಅಂಬಿಕಾ ಸಿ.ಬಿ.ಎಸ್.ಇ

ಮೌಲ್ಯಗಳು ಪ್ರತಿಯೊಬ್ಬನ ಬದುಕಿಗೂ ಆಧಾರ ಸ್ತಂಭ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಫ್ಯಾಕಲ್ಟಿ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಡಾ. ಗುರುರಾಜ ಕರಜಗಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

ಪುತ್ತೂರು: ಭಾರತದ ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್‌ ಅವರ ಜನ್ಮದಿನವನ್ನು ಡಿ. 22ರಂದು ರಾಷ್ಟ್ರೀಯ ಗಣಿತ ಶಾಸ್ತ್ರ ದಿನವಾಗಿ ಆಚರಿಸುತ್ತಿದ್ದು, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಗಣಿತ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ರಾಮಾನುಜನ್‌ ರವರ ವ್ಯಕ್ತಿತ್ವ ಹಾಗೂ ಸಾಧನೆಗಳ ಬಗ್ಗೆ ಉಪನ್ಯಾಸ, ವಿದ್ಯಾರ್ಥಿಗಳಿಗಾಗಿ ಸೆಮಿನಾರ್‌, ರಸಪ್ರಶ್ನೆ ಸ್ಪರ್ಧೆ ಕಾಲೇಜಿನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ವಂ| ಲಾರೆನ್ಸ್‌ ಮಸ್ಕರೇಞಸ್‌ ಮಾತನಾಡಿ, ವಿದ್ಯಾರ್ಥಿಗಳು ಗಣಿತದಲ್ಲಿ ಮಹತ್ವದ ಸಾಧನೆಯನ್ನು ಮಾಡುವಂತೆ ಪ್ರೇರೇಪಿಸಿದರು. ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಘನ ತ್ಯಾಜ್ಯ ವಿಲೇವಾರಿ ಘಟಕದ ಶಿಲಾನ್ಯಾಸ ಕಾರ್ಯಕ್ರಮ ಡಿ. 24ರಂದು ದೇವಳದ ಆವರಣದಲ್ಲಿ ನಡೆಯಿತು. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಭಾರತವನ್ನು ಕೃಷಿ ಪ್ರಧಾನ ರಾಷ್ಟ್ರವನ್ನಾಗಿ ಮಾಡಬೇಕೆಂದು ಮಹಾತ್ಮಾ ಗಾಂಧೀಜಿ ಕನಸು ಕಂಡಿದ್ದರು. ಆ ಕೆಲಸವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿದ್ದಾರೆ. ಮೋದಿ ಅವರು ಸ್ವಚ್ಛ ಭಾರತ ಅಭಿಯಾನವನ್ನು ಶುರು ಮಾಡಿ, ಇಂದು ಸತ್ಯಮೇವ ಜಯತೇ ಧ್ಯೇಯವಾಕ್ಯದಂತೆ ಸ್ವಚ್ಛ ಭಾರತ ಅಭಿಯಾನ ಶುರು ಮಾಡಿದ್ದಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಶಾಸಕರಿಂದ ಶಿಲಾನ್ಯಾಸ Read More »

ಡಿ. 25: ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಯುವ ಕ್ರೀಡಾ ಸಂಭ್ರಮ

ಪುತ್ತೂರು: ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸಮುದಾಯದ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಡಿ. 25ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿ ಸಂಚಾಲಕ ಎ.ವಿ. ನಾರಾಯಣ ಹೇಳಿದರು. ಪ್ರೆಸ್ ಕ್ಲಬ್ಬಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 25ರಂದು ಇಡೀ ದಿನ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9  ಗಂಟೆಗೆ ಕ್ರೀಡಾಕೂಟವನ್ನು ಊರ ಗೌಡರಾದ ಕೊಡಿಪ್ಪಾಡಿಯ

ಡಿ. 25: ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಯುವ ಕ್ರೀಡಾ ಸಂಭ್ರಮ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ. 23ರಂದು ವಿದ್ಯಾಚೇತನ ಆಡಿಟೋರಿಯಂನಲ್ಲಿನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು ಮಾತನಾಡಿ, ಕಲಿತ ಶಾಲೆಗೆ ಕೊಡುಗೆ ನೀಡುವುದರಿಂದ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದಂತಾಗುತ್ತದೆ. ಅಲ್ಲದೇ, ಹಿರಿಯ ವಿದ್ಯಾರ್ಥಿಗಳು ಶಾಲೆಗೆ ಮತ್ತೊಮ್ಮೆ ಬಂದು, ಕಾರ್ಯಕ್ರಮ ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದಂತಾಗುತ್ತದೆ ಎಂದರು.ಇದೇ ಸಂದರ್ಭ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧ್ರುವ ಮುಂದೋಡಿ, ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ Read More »

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹುದ್ದೆ ಖಾಲಿಗೆ ಸದನದಲ್ಲಿ ಉತ್ತರ | ಶಾಸಕರ ಪ್ರಯತ್ನಕ್ಕೆ ಉನ್ನತ ಶಿಕ್ಷಣ ಸಚಿವರಿಂದ ಪರಿಹಾರದ ಭರವಸೆ

ಪುತ್ತೂರು: ಇಲ್ಲಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೊನೆಗೂ ಸಚಿವರು ಅಧಿವೇಶನದಲ್ಲಿ ಅಸ್ತು ಎಂದಿದ್ದಾರೆ. ಶಾಸಕ ಸಂಜೀವ ಮಠಂದೂರು ಅವರು ಕೇಳಿರುವ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಉತ್ತರ ನೀಡಿದ್ದರು. ಆದರೆ ಉತ್ತರ ತೃಪ್ತಿಕರವಾಗಿರದೇ ಇದ್ದುದರಿಂದ, ಸದನದಲ್ಲಿ ಮಾತನಾಡಲು ಅವಕಾಶ ಸಿಕ್ಕಾಗ, ಸಭಾಧ್ಯಕ್ಷರ ಗಮನ ಸೆಳೆದು, ಸಮಸ್ಯೆಗೆ ಪರಿಹಾರ ನೀಡುವಲ್ಲಿ ಶಾಸಕ ಸಂಜೀವ ಮಠಂದೂರು ಯಶಸ್ವಿಯಾಗಿದ್ದಾರೆ. ಹಳೆ ತಾಲೂಕು ಕಚೇರಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ಸರಕಾರಿ ಮಹಿಳಾ ಪ್ರಥಮ

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹುದ್ದೆ ಖಾಲಿಗೆ ಸದನದಲ್ಲಿ ಉತ್ತರ | ಶಾಸಕರ ಪ್ರಯತ್ನಕ್ಕೆ ಉನ್ನತ ಶಿಕ್ಷಣ ಸಚಿವರಿಂದ ಪರಿಹಾರದ ಭರವಸೆ Read More »

error: Content is protected !!
Scroll to Top