ಪುತ್ತೂರು

ನೆಹರುನಗರ-ವಿವೇಕಾನಂದ ಸಂಪರ್ಕ ರಸ್ತೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಭಾನುವಾರ ಶಿಲಾನ್ಯಾಸ ನೆರವೇರಿಸಲಾಯಿತು.. ಶಾಸಕ ಸಂಜೀವ ಮಠಂದೂರು ತೆಂಗಿನ ಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನಮ್ಮ ಉದ್ದೇಶ ಇರುವುದು ಈ ರಸ್ತೆ ಮುಂದೆ ಚತುಷ್ಪತ ರಸ್ತೆಯಾಗಬೇಕು. ಈ ನಿಟ್ಟಿನಲ್ಲಿ ವಿವೇಕಾನಂದ ತೆಂಕಿಲದಲ್ಲಿ ಶಾಲೆಯ ಮುಂದಿರುವ ಚತುಷ್ಪತ ರಸ್ತೆಯಂತೆ ನೆಹರುನಗರ ದಿಂದ ವಿವೇಕಾನಂದ ಕಾಲೇಜು ಆಗಿ ಉಪ್ಪಿನಂಗಡಿ ಸಂಪರ್ಕಿಸುವ ಪಡೀಲು ತನಕ ಚತುಷ್ಪತ […]

ನೆಹರುನಗರ-ವಿವೇಕಾನಂದ ಸಂಪರ್ಕ ರಸ್ತೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ Read More »

ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ಪುರುಷರಾದ ಕೋಟಿ-ಚೆನ್ನಯ ನಾಮಕರಣ | ಸಮಾರಂಭ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಕೇವಲ ಒಂದು ಧರ್ಮಕ್ಕೆ ಸೀಮಿತ ಮಾಡದೇ ಹಿಂದೂ ಸಮಾಜಕ್ಕೆ ಸಂದೇಶ ನೀಡಿದ ಅವಳಿ ವೀರರು ಎಂದು ನಾವೆಲ್ಲರೂ ಪರಿಗಣಿಸಬೇಕಾದ ಅಗತ್ಯವಿದ್ದು, ತುಳುನಾಡಿನ ಅವಳಿವೀರ ಪುರುಷರಾದ ಕೋಟಿ-ಚೆನ್ನಯರ ಹೆಸರನ್ನು ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ನೀಡುವ ಮೂಲಕ ಪುತ್ತೂರಿನಲ್ಲಿ ಇತಿಹಾಸ ನಿರ್ಮಾಣ ಆಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಭಾನುವಾರ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ ಸಮಾರಂಭವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಶುರಾಮ

ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ಪುರುಷರಾದ ಕೋಟಿ-ಚೆನ್ನಯ ನಾಮಕರಣ | ಸಮಾರಂಭ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಶನಿವಾರ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಸಮರ್ಪಣೆಯಾಯಿತು. ಬೆಳಗ್ಗೆ ಶ್ರೀ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ ನಡೆದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹೊರೆಕಾಣಿಕೆಗೆ ಚಾಲನೆ ನೀಡಲಾಯಿತು. ಬಳಿಕ ಮೆರವಣಿಗೆ ಮುಖ್ಯರಸ್ತೆಯಿಂದ ಹೊರಟು ದರ್ಬೆ, ಬೆದ್ರಾಳ ಮೂಲಕ ದೇವಸ್ಥಾನವನ್ನು ತಲುಪಿತು. ಮಧ್ಯಾಹ್ನ 12 ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆಯಾಯಿತು. ಸಂಜೆ

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಹೊರೆಕಾಣಿಕೆ ಮೆರವಣಿಗೆ Read More »

ಕಿಶೋರ್ ನಿಧನ

ಪುತ್ತೂರು: ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ ದಿ. ಪೂವಣ್ಣಿ ಗೌಡರ ಪುತ್ರ, ಕೃಷಿಕ ಕಿಶೋರ್ (38) ಮಾ. 25ರಂದು ಬೆಳಿಗ್ಗೆ ಅಸೌಖ್ಯದಿಂದ ಮಂಗಳೂರಿನ‌ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಸಹೋದರ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಕಿಶೋರ್ ನಿಧನ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಮುಡ್ನೂರು ಆದಿಲಕ್ಷ್ಮೀ ಸಂಘ ಉದ್ಘಾಟನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರೇಸ್ಟ್ ಪುತ್ತೂರು.ಚಿಕ್ಕಮುಡ್ನೂರು ಕಾರ್ಯಕ್ಷೇತ್ರದ ಆದಿಲಕ್ಷ್ಮೀ ಸಂಘವನ್ನು ಶನಿವಾರ ಉದ್ಘಾಟಿಸಲಾಯಿತು. ಯೋಜನೆಯ ಪುತ್ತೂರು ಯೋಜನಾಧಿಕಾರಿ ಆನಂದ ಕೆ. ಸಂಘ ಉದ್ಘಾಟಿಸಿ ಶುಭ ಹಾರೈಸಿದರು. ಸಂಘದ ಪ್ರಬಂಧಕರಾಗಿ ಗೀತಾ, ಸಂಯೋಜಕರಾಗಿ ಮಾಲಿನಿ, ಕೋಶಾಧಿಕಾರಿಯಾಗಿ ಯಶೋದಾ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಚಿಕ್ಕಮುಡ್ನೂರು ಒಕ್ಕೂಟದ ಉಪಾಧ್ಯಕ್ಷೆ ಪೂರ್ಣಿಮಾ, ಚಿಕ್ಕಮುಡ್ನೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಚಂದ್ರಿಕಾ, ಕೇಪುಲು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ವೀಣಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಮುಡ್ನೂರು ಆದಿಲಕ್ಷ್ಮೀ ಸಂಘ ಉದ್ಘಾಟನೆ Read More »

ರಾಧಾಕೃಷ್ಣ ರಾವ್ ನಿಧನ

ಪುತ್ತೂರು: ಕೊಂಬೆಟ್ಟು ನಿವಾಸಿ ರಾಧಾಕೃಷ್ಣ ರಾವ್ (61) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಸಹೋದರು, ಸಹೋದರಿಯರನ್ನು ಅಗಲಿದ್ದಾರೆ.

ರಾಧಾಕೃಷ್ಣ ರಾವ್ ನಿಧನ Read More »

ಬಂಗಾರ್ ಕಾಯರ್ ಕಟ್ಟೆಯ ಪುನರ್ ನವೀಕರಣಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಕಟ್ಟೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಂಗಾರ್ ಕಾಯರ್ ಕಟ್ಟೆಯ ನವೀಕರಣ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು. ದೇವಳದ ಪ್ರಧಾನ ಅರ್ಚಕರೂ, ಸಮಿತಿ ಸದಸ್ಯರೂ ಆಗಿರುವ ವೇ. ಮೂ. ವಿ.ಎಸ್. ಭಟ್ ಅವರು ಪೂಜಾ ವಿಧಿವಿಧಾನ ನೆರವೇರಿಸಿ, ಪ್ರಾರ್ಥನೆ ಸಲ್ಲಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮದಾಸ್ ಗೌಡ ಅವರು ಕಾಮಗಾರಿಗೆ ಚಾಲನೆ ನೀಡಿದರು. ಇಂಜಿನಿಯರ್ ಹಾಗೂ ಗುತ್ತಿಗೆದಾರ ಶಂಕರ ಭಟ್ಟ್, ಚಾಕರಿಯವರ ಕುಟುಂಬ, ನೆರೆಕರೆಯ ಭಕ್ತರು, ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬಂಗಾರ್ ಕಾಯರ್ ಕಟ್ಟೆಯ ಪುನರ್ ನವೀಕರಣಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಕಟ್ಟೆ Read More »

ಸವಣೂರು ಸ.ಪ.ಪೂ. ಕಾಲೇಜಿನ ನೂತನ ಗೇಟ್ ಉದ್ಘಾಟಿಸಿದ ಸವಣೂರು ಸೀತಾರಾಮ ರೈ

ಪುತ್ತೂರು: ಸ್ವಾತಂತ್ರ್ಯ ಸೇನಾನಿ, ಶಿಕ್ಷಕ ಶೀಂಟೂರು ದಿ.ನಾರಾಯಣ ರೈ ಸ್ಮರಣಾರ್ಥ ಅವರ ಪುತ್ರ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರು ಸವಣೂರು ಸ.ಪ.ಪೂ. ಕಾಲೇಜಿಗೆ ಕೊಡುಗೆಯಾಗಿ ನೀಡಿದ ನೂತನ ಗೇಟ್ ಇದರ ಉದ್ಘಾಟನೆ ಮಾ. 24ರಂದು ನಡೆಯಿತು. ಗೇಟ್‌ ಉದ್ಘಾಟಿಸಿ ಮಾತನಾಡಿದ ಸವಣೂರು ಕೆ. ಸೀತಾರಾಮ ರೈ, ಸುತ್ತಮುತ್ತಲಿನ 8 ಗ್ರಾಮಗಳ ಸರಕಾರಿ ಶಾಲೆಗಳಿಗೆ ಅನೇಕ ಕೊಡುಗೆಗಳನ್ನು ನೀಡುತ್ತಾ ಬಂದಿದ್ದೇನೆ. ಈ ಮೂಲಕ ನನ್ನದೇ ಶಿಕ್ಷಣ ಸಂಸ್ಥೆಯ ಜೊತೆಗೆ ಸರಕಾರಿ

ಸವಣೂರು ಸ.ಪ.ಪೂ. ಕಾಲೇಜಿನ ನೂತನ ಗೇಟ್ ಉದ್ಘಾಟಿಸಿದ ಸವಣೂರು ಸೀತಾರಾಮ ರೈ Read More »

ನಾಳೆ (ಮಾ.26) : ಪುತ್ತೂರು ಕೆಎಸ್‍ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ ಸಮಾರಂಭ ಮಾ.26 ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕರ್ನಾಟಕ ಸರಕಾರದ ಸಾರಿಗೆ ಸಚಿವ ಬಿ.ಶ್ರೀರಾಮುಲು ನಾಮಫಲಕ ಅನಾವರಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಸಚಿವರಾದ ಎಸ್.ಅಂಗಾರ, ಕೋಟಿ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ನಾಳೆ (ಮಾ.26) : ಪುತ್ತೂರು ಕೆಎಸ್‍ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ Read More »

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ, ಗುರುನಮನ ಕಾರ್ಯಕ್ರಮ

ಪುತ್ತೂರು: ಸ್ವ ಗ್ರಾಮದ ಶಾಲೆಗಳಲ್ಲಿ ಅದರಲ್ಲೂ ಮಾತೃ ಭಾಷೆಯಲ್ಲಿ ಕಲಿತ ಶಿಕ್ಷಣದಿಂದ ಮಾತ್ರ ಪರಿಪೂರ್ಣತೆ ಪಡೆಯಲು ಸಾಧ್ಯ ಎ೦ದು ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿಶ್ವೇಶ್ವರ ವಿ.ಕೆ. ಹೇಳಿದರು. ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ ಜಿ ಅವರ ನಿವೃತ್ತಿ ಹಿನ್ನೆಲೆಯಲ್ಲಿ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅವರು ದೇಶದ ಅಮೃತ ಮಹೋತ್ಸವದ

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ, ಗುರುನಮನ ಕಾರ್ಯಕ್ರಮ Read More »

error: Content is protected !!
Scroll to Top