ಭಜನೆ, ಭಜಕರ ನಿಂದಿಸಿದ ಡಿ.ಆರ್.ಎಫ್.ಓ.: ಎಸಿಎಫ್ ಭರವಸೆ ಬಳಿಕ ಪ್ರತಿಭಟನೆ ಹಿಂದಕ್ಕೆ | ಠಾಣೆಯಲ್ಲಿ ದೂರು ದಾಖಲಿಸಿದ ಕಾರ್ಯಕರ್ತರು
ಪುತ್ತೂರು: ಭಜನೆಯನ್ನು ಹಾಗೂ ಭಜಕರನ್ನು ಅವಮಾನಿಸಿ ಹೇಳಿಕೆ ನೀಡಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಡಿದ ಬಳಿಕ ಹಿಂದೂ ಪರ ಸಂಘಟನೆಗಳು ಪ್ರತಿಭಟನೆಯನ್ನು ಹಿಂದೆಗೆದುಕೊಂಡವು. ಕೊಯಿಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರು ಭಜನೆಯ ಬಗ್ಗೆ ಅವಹೇಳನ ಮಾಡಿದ್ದಲ್ಲದೇ, ಭಜನೆಯಲ್ಲಿ ನಿರತರಾದವರನ್ನು ನಿಂದಿಸಿ ಫೇಸ್ ಬುಕ್ ನಲ್ಲಿ ಸಂದೇಶ ಬರೆದಿದ್ದರು. ಇದರಿಂದ ಆಕ್ರೋಶಗೊಂಡ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಬುಧವಾರ ಪುತ್ತೂರು […]