ಪುತ್ತೂರು

ಕೆ.ವಿ.ಜಿ.ಯಂತೆಯೇ ಎ.ವಿ.ಜಿ. ಬೆಳಗಲಿ | ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಈ ವರ್ಷ ಎಲ್.ಕೆ.ಜಿ.ಯಿಂದ ಪ್ರಾರಂಭಗೊಳ್ಳುತ್ತಿದೆ. ಗುಣಮಟ್ಟದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಿ, ಮಾದರಿ ಸಂಸ್ಥೆಯಾಗಿ ಮೂಡಿಬರಲಿ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬನ್ನೂರಿನ ಕೃಷ್ಣನಗರದಲ್ಲಿ ಅಲುಂಬುಡದಲ್ಲಿ ಎವಿಜಿ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶಪ್ರೇಮ ಇಲ್ಲದ ಶಿಕ್ಷಣ ಎಂದೂ ಯಶಸ್ವಿ ಆಗಲಾರದು. ದೇಶಪ್ರೇಮದ ಜೊತೆಗೆ ಶಿಕ್ಷಣ ಪಡೆದ ವ್ಯಕ್ತಿ ದೇಶದ ಸಂಪನ್ಮೂಲವಾಗಿ ಗುರುತಿಸಿಕೊಳ್ಳುತ್ತಾನೆ. ಇಂತಹ ದೇಶಪ್ರೇಮ, ಸಂಸ್ಕಾರಯುತ ಶಿಕ್ಷಣ ನೀಡುವ […]

ಕೆ.ವಿ.ಜಿ.ಯಂತೆಯೇ ಎ.ವಿ.ಜಿ. ಬೆಳಗಲಿ | ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ಮಾ.22 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರ,ಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮ ಮಾ.22 ಚಾಂದ್ರಮಾನ ಯುಗಾದಿಯಂದು ಬೆಳಿಗ್ಗೆ 8 ಕ್ಕೆ ನಡೆಯಲಿದೆ. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.22 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರ,ಮ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ಪೂರ್ವಭಾವಿಯಾಗಿ ಅನುಜ್ಞಾ ಕಲಶ ದೇವಸ್ಥಾನದ ಗರ್ಭಗುಡಿ ಎದುರು  ಪ್ರಾರ್ಥನೆಯೊಂದಿಗೆ ಶುಕ್ರವಾರ ನಡೆಯಿತು. ಕ್ಷೇ್ತ್ರದ  ವೇ.ಮೂ.ರವೀಶ ತಂತ್ರಿ ಅವರ ನೇತೃತ್ವದಲ್ಲಿ ವೇ.ಮೂ. ಗುರು ತಂತ್ರಿ ಶ್ರೀ ದೇವರಿಗೆ ಅನುಜ್ಞಾ ಕಲಶ ನೆರವೇರಿಸಿದರು. ಬಳಿಕ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿದರು. ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಗುರುವಾರ ಸಂಪನ್ನಗೊಂಡಿತು. ಜಾತ್ರೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ ಬಳಿಕ ಅನ್ನಸಂತರ್ಪಣೆ ಜರಗಿತು. ರಾತ್ರಿ ರಂಗಪೂಜೆ ದೈವದ ನೇಮೋತ್ಸವದೊಂದಿಗೆ ಜಾತ್ರೆ  ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಡಾ,ಎಂ.ಕೆ.ಪ್ರಸಾದ್, ವ್ಯವಸ್ಥಾಪನಾ

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ Read More »

ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ಡಾ.ಶ್ರೀಧರ್ ಎಚ್.ಜಿ.ಅವರಿಗೆ ಪ್ರಶಸ್ತಿ ಪ್ರದಾನ

ಪುತ್ತೂರು : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂದ್ದ  2021 ನೇ ಸಾಲಿನ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್ ಹೆಚ್.ಜಿಯವರ ಚಪಡ ಕಾದಂಬರಿಗೆ ವಸುದೇವ ಭೂಪಾಲಂ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿಡಾ. ನಿರಂಜನ ವಾನಳ್ಳಿ, ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ ರಾಯಪುರ,

ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ಡಾ.ಶ್ರೀಧರ್ ಎಚ್.ಜಿ.ಅವರಿಗೆ ಪ್ರಶಸ್ತಿ ಪ್ರದಾನ Read More »

ಮದನ ಪೂಜಾರಿ ನಿಧನ

ಪುತ್ತೂರು: ಕುದ್ಮಾರು ಹಿ.ಪ್ರಾ. ಶಾಲಾ ನಿವೃತ್ತ ಮುಖ್ಯಗುರು, ಕುದ್ಮಾರು ನಿವಾಸಿ ಮದನ ಪೂಜಾರಿ ಅವರು ಮಾ. 16ರಂದು ರಾತ್ರಿ ನಿಧನರಾದರು. ವಿವಿಧ ಸಂಘ – ಸಂಸ್ಥೆಗಳಲ್ಲಿ, ದೇವಸ್ಥಾನ – ದೈವಸ್ಥಾನಗಳಲ್ಲಿ, ಪುತ್ತೂರು ತಾಲೂಕು ಬಿಲ್ಲವ ಸಂಘದಲ್ಲಿ ಸಕ್ರೀಯವಾಗಿ ಕೆಲಸ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮದನ ಪೂಜಾರಿ ನಿಧನ Read More »

ಗಾಂಜಾ ಮಾರಾಟ ಯತ್ನ : ಆರೋಪಿಯ ಬಂಧನ

ಪುತ್ತೂರು : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದು ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆಯೊಂದರಲ್ಲಿ ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಬಂಧಿಸಿ ಆತನಿಂದ 40 ಸಾವಿರ ರೂ. ಮೌಲ್ಯದ 1.020 ಕೆ.ಜಿ.ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಯಾನೆ ಇಕ್ಕು (35) ಬಂಧಿತ ಆರೋಪಿ. ಆರೋಪಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮುಕ್ರಂಪಾಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ. ಖಚಿತ ಮಾಹಿತಿ

ಗಾಂಜಾ ಮಾರಾಟ ಯತ್ನ : ಆರೋಪಿಯ ಬಂಧನ Read More »

ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು : ಶಾಸಕ ಸಂಜೀವ ಮಠಂದೂರು ಪರಿಶೀಲನೆ

ಪುತ್ತೂರು: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಮಾರ್ಚ್ 26ರಂದು ನಾಮಕರಣ ಮಾಡುವ ಹಿನ್ನೆಲೆಯಲ್ಲಿ ಪೂರ್ವತಯಾರಿಯಾಗಿ ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಜೊತೆಗಿದ್ದ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡುತ್ತಾ, ಕೋಟಿ – ಚೆನ್ನಯರ ನಾಮಫಲಕವನ್ನು ಪುತ್ತೂರು ಪೇಟೆಗೆ ಕಾಣಿಸುವಂತೆ ಸರಿಯಾಗಿ ಅಳವಡಿಸಲು ಸೂಚನೆ ನೀಡಿದರು. ನಾಮಕರಣದ ದಿನದಂದು ಕಾರ್ಯಕ್ರಮ ಸುಸೂತ್ರವಾಗಿ ನಡೆಸಲು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಕಿವಿಮಾತು ಹೇಳಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ

ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು : ಶಾಸಕ ಸಂಜೀವ ಮಠಂದೂರು ಪರಿಶೀಲನೆ Read More »

ಪಾಣಾಜೆ ಆರೋಗ್ಯ ಕೇಂದ್ರ ಇನ್ನು ಸಮುದಾಯ ಆರೋಗ್ಯ ಕೇಂದ್ರ | ಮೇಲ್ದರ್ಜೆಗೇರಲಿರುವ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರ

ಪುತ್ತೂರು: ಗ್ರಾಮೀಣ ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೇಲ್ದರ್ಜೆಯ ಭಾಗ್ಯ ಒದಗಿ ಬಂದಿದೆ. ಇನ್ನು ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರವಾಗಿ ಆಸ್ಪತ್ರೆಯ ಕೆಲಸವನ್ನು ನಿರ್ವಹಿಸಲಿದೆ. ಪುತ್ತೂರು ತಾಲೂಕು ಸರಕಾರಿ ಆಸ್ಪತ್ರೆ 300 ಬೆಡ್‍ಗಳಿಗೆ ಏರಬೇಕು ಎನ್ನುವ ನಿಟ್ಟಿನಲ್ಲಿ ಶಾಸಕ ಸಂಜೀವ ಮಠಂದೂರು ಪ್ರಯತ್ನ ಮುಂದುವರಿಸುತ್ತಿದ್ದಾರೆ. ಇದರ ನಡುವೆ ಪಾಣಾಜೆಗೆ ಸಮುದಾಯ ಆರೋಗ್ಯ ಕೇಂದ್ರದ ಮಾನ್ಯತೆ ನೀಡುವಲ್ಲಿಯೂ ಯಶಸ್ವಿಯಾಗಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ ಇಲ್ಲ ಎನ್ನುವ ಕೊರಗನ್ನು ಸಮುದಾಯ ಆಸ್ಪತ್ರೆ ನೀಗಲಿದೆ.

ಪಾಣಾಜೆ ಆರೋಗ್ಯ ಕೇಂದ್ರ ಇನ್ನು ಸಮುದಾಯ ಆರೋಗ್ಯ ಕೇಂದ್ರ | ಮೇಲ್ದರ್ಜೆಗೇರಲಿರುವ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರ Read More »

ನಗರಸಭೆ ಸದಸ್ಯ ಶಿವರಾಮ ಸಫಲ್ಯ ಆತ್ಮಹತ್ಯೆ

ಪುತ್ತೂರು: ನಗರಸಭೆ ಸದಸ್ಯ ಶಿವರಾಮ ಸಫಲ್ಯ ಗುರುವಾರ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವರಾಮ ಸಪಲ್ಯರು ಒಂದನೇ ವಾರ್ಡ್ ನ ಸದಸ್ಯರಾಗಿದ್ದಾರೆ. ನಗರದ ಹೊರವಲಯದ ಸಾಲ್ಮರ ಸಮೀಪದ ಉರಮಾಲ್ ನಲ್ಲಿ ವಾಸವಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಗುರುವಾರ ಪತ್ನಿ ಹೊರಗೆ ಹೋಗಿದ್ದು, ಪತಿಗೆ ಫೋನ್ ಕರೆ ಮಾಡಿದರೂ ತೆಗೆಯದ ಹಿನ್ನಲೆಯಲ್ಲಿ ಪಕ್ಕದ ಮನೆಯವರಲ್ಲಿ ಮನೆಕಡೆ ಹೋಗುವಂತೆ ತಿಳಿಸಿದ್ದರು. ಪಕ್ಕದ ಮನೆಯವರು ಮನೆಯತ್ತ ಹೋಗಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು

ನಗರಸಭೆ ಸದಸ್ಯ ಶಿವರಾಮ ಸಫಲ್ಯ ಆತ್ಮಹತ್ಯೆ Read More »

error: Content is protected !!
Scroll to Top