ಮಹಿಳೆಯರ ಆತ್ಮವಿಶ್ವಾಸ, ಕೌಶಲ್ಯ ಹೆಚ್ಚಿಸಲು ತರಬೇತಿ | ಸಾಂಘಿಕ ನಡೆ ಸಮೃದ್ಧಿಯ ಕಡೆ ತರಬೇತಿಯಲ್ಲಿ ಸುಕನ್ಯಾ
ಪುತ್ತೂರು: ಮಹಿಳೆಯರ ಆತ್ಮವಿಶ್ವಾಸ ಮತ್ತು ಕೌಶಲ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾಯಿತ ಮಹಿಳಾ ಪ್ರತಿನಿಧಿಗಳಿಗೆ ವಿಶೇಷ ತರಬೇತಿಗಳನ್ನು ಆಯೋಜಿಸುತ್ತಿದೆ ಎಂದು ತಾ.ಪಂ. ಯೋಜನಾಧಿಕಾರಿ ಸುಕನ್ಯಾ ಹೇಳಿದರು.ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಂಘಿಕ ನಡೆ ಸಮೃದ್ಧಿಯ ಕಡೆ ಮುಖಾಮುಖಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 1989ರಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯು, ಪಂಚಾಯತ್ ರಾಜ್ ಸಂಸ್ಥೆಗಳನ್ನು ಪ್ರತಿನಿಧಿಸುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತಿಗಳ ಪ್ರತಿನಿಧಿಗಳ ಸಾಮರ್ಥ್ಯವನ್ನು […]