ವಿಕಲಚೇತನ ಹಾಗೂ ಹಿರಿಯ ನಾಗರಿಕರಿಗೆ ವಾಹನ ವಿತರಣೆ | ವಾಹನ ಸಹಿತ ಸಲಕರಣೆ ವಿತರಿಸಿದ ಶಾಸಕ ಸಂಜೀವ ಮಠಂದೂರು
ಪುತ್ತೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದ.ಕ.ಜಿಲ್ಲಾ ಪಂಚಾಯಿತಿ, ಹಾಗೂ ಪುತ್ತೂರು ತಾಲೂಕು ಪಂಚಾಯಿತಿ ಆಶ್ರಯದಲ್ಲಿ ವಿಕಲ ಚೇತನರಿಗೆ ವಾಹನ ವಿತರಣೆ ಕಾರ್ಯಕ್ರಮ ಮಾ 13 ರಂದು ಪುತ್ತೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಿಕಲಚೇತನರಿಗೆ ಸಾಂಕೇತಿಕವಾಗಿ ವಾಹನ ವಿತರಿಸಿ ಮಾತನಾಡಿ, ವಿಕಲ ಚೇತನರ ದೈನಂದಿನ ಚಟುವಟಿಕೆಗಳಿಗೆ ಪೂರಕವಾಗಿ ವಾಹನ ಸಹಿತ ವಿವಿಧ ಸಲಕರಣೆಗಳನ್ನು ವಿತರಿಸುವ ಕೆಲಸ ಆಗಿದೆ ಎಂದರು. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮಪ್ಪ […]










