ಪುತ್ತೂರು

ಫೆ.8 : ಮೆಸ್ಕಾಂ ಜನಸಂಪರ್ಕ ಸಭೆ

ಪುತ್ತೂರು : ಮೆಸ್ಕಾಂ ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಫೆ.8 ಬುಧವಾರ ಬೆಳಿಗ್ಗೆ 11 ರಿಂದ ನಡೆಯಲಿದೆ. ಮಂಗಳೂರು ವೃತ್ತ ಕಚೇರಿ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಗ್ರಾಹಕರು ತಮ್ಮ G-mail account ಮೂಲಕ Oo meet.google.com/vmc-jrey-tqq ಲಿಂಕ್ನಲ್ಲಿ ವೀಡಿಯೋ ಸಂವಾದ ಮತ್ತು ದೂರವಾಣಿ ಮೂಲಕ ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ.8 : ಮೆಸ್ಕಾಂ ಜನಸಂಪರ್ಕ ಸಭೆ Read More »

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಸಂಪನ್ನ

ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಶುಕ್ರವಾರ ಹಾಗೂ ಶನಿವಾರ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ಸಾಮೂಹಿಕ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆಯಾಯಿತು. ಮಧ್ಯಾಹ್ನ ಮಹಾಪೂಜೆ, ಪ್ರದಾದ ವಿತರಣೆಯಾಗಿ ರಾತ್ರಿ ಶ್ರೀ ದೇವರ ಬಲಿ ಹೊರಟು ಶ್ರೀ ಭೂತಬಲಿ ಉತ್ಸವ, ವಸಂತ ಕಟ್ಟೆಪೂಜೆ, ಭಜನಾ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಸಂಪನ್ನ Read More »

ಫೆ.೬ : ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು : ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಕಾರ್ಯಕ್ರಮ ಫೆ.೬ ಸೋಮವಾರ ಬೆಳಿಗ್ಗೆ ೯.೦೦ ಗಂಟೆಗೆ ೩೪ನೇ ನೆಕ್ಕಿಲಾಡಿಯ ಶಕ್ತಿನಗರದಲ್ಲಿ ನಡೆಯಲಿದೆ.ಸುಮಾರು ೧೨.೭೫ ಕೋಟಿ ರೂ. ಅನುದಾನ ಈ ರಸ್ತೆಯ ಅಭಿವೃದ್ಧಿಗೆ ಬಿಡುಗಡೆಗೊಳಿಸಲಾಗಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಫೆ.೬ : ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ Read More »

ಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ; ಅಸಮಾಧಾನ ವ್ಯಕ್ತಪಡಿಸಿದ ಶಾಲಾ ಎಸ್‌ಡಿಎಂಸಿ ಹಾಗೂ ಪೋಷಕರುಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ;

ಪುತ್ತೂರು : ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸದೆ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ಚಿಕ್ಕಮುಡ್ನೂರು ಬೀರ್ನಹಿತ್ಲು ಶಾಲೆಯ ಮೂರನೇ ಹಾಗೂ ಒಂದನೇ ತರಗತಿ ಮಕ್ಕಳನ್ನು ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸಿದೆ ಕರೆದುಕೊಂಡು ಹೋಗಿದ್ದು, ಈ ಕುರಿತು ಪೋಷಕರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಪತ್ರವೊಂದು ದೊರೆತಿದ್ದು, ಅದರಲ್ಲಿ ಪ್ರವಾಸಕ್ಕೆ ಹೋಗುವ ಸ್ಥಳಗಳನ್ನು ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಶಾಲೆಗೆ

ಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ; ಅಸಮಾಧಾನ ವ್ಯಕ್ತಪಡಿಸಿದ ಶಾಲಾ ಎಸ್‌ಡಿಎಂಸಿ ಹಾಗೂ ಪೋಷಕರುಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ; Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಭಾರತ ರಶ್ಮಿ ಕಾರ್ಯಕ್ರಮ

ಸವಣೂರು : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಟ್ಟದ ‘ಭಾರತ ರಶ್ಮಿ’ ಕಾರ್ಯಕ್ರಮ ಶನಿವಾರ ನಡೆಯಿತು. ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರಶ್ಮಿ ಯಾವತ್ತೂ ಹೊಸತನಗಳಿಗೆ ತೆರೆದುಕೊಳ್ಳುವ ಪರಿಪಾಠವನ್ನು ಬೆಳೆಸಿಕೊಂಡಿದೆ. ಹಳ್ಳಿಯ ಮಕ್ಕಳಿಗೆ ಒಳಿತಾದರೆ ಅದುವೇ ನಮಗೆ ಸಂತೋಷ ಎಂದರು. ಪ್ರಾಂಶುಪಾಲ ಸೀತಾರಾಮ ಕೇವಳ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಅತ್ಯಾಧುನಿಕ ಸೌಲಭ್ಯಗಳ ವಿವರ ನೀಡಿ, ಒಟ್ಟಾರೆಯಾಗಿ ಸಮಗ್ರ ಮತ್ತು ಸಶಕ್ತ ಭಾರತ ನಿರ್ಮಾಣಕ್ಕೆ ವಿದ್ಯಾರಶ್ಮಿ ಸಣ್ಣದೊಂದು ಕೊಡುಗೆ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಭಾರತ ರಶ್ಮಿ ಕಾರ್ಯಕ್ರಮ Read More »

ವಿಶ್ವಕರ್ಮರು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಪುಂಡರೀಕಾಕ್ಷ ಬೆಳ್ಳೂರು :

ಕಾವು: ವಿಶ್ವಕರ್ಮರು ಬ್ರಾಹ್ಮಣರೇ, ಆದರೆ ಬ್ರಾಹ್ಮಣತ್ವದ ಆಚರಣೆಯಲ್ಲಿ ಹಿಂದುಳಿದಿದ್ದಾರೆ. ಯಜ್ಞೋಪವಿತವನ್ನು ಧರಿಸಿದ ವಿಶ್ವಕರ್ಮರು ಅದರ ಪಾವಿತ್ರತೆಯನ್ನು ಕಾಪಾಡಿಕೊಂಡು ಬರಬೇಕು ಅದಕ್ಕಾಗಿ ಸಚ್ಚಾರಿತ್ತ್ಯದ ಜೊತೆಗೆ ಆಚಾರ ವಿಚಾರಗಳನ್ನು ಜೀವನದುದ್ದಕ್ಕೂ ಪಾಲಿಸಿಕೊಂಡು,ಕಿರಿಯರಿಗೂ ಆ ಸಂಸ್ಕಾರವನ್ನು ಕಲಿಸಿಕೊಡಬೇಕು ಆಗ ಮಾತ್ರ ನಿಜವಾದ ಬ್ರಾಹ್ಮಣರಾಗಲು ಸಾಧ್ಯ ಎಂದು  ಯೋಗಾಚಾರ್ಯ ಪುಂಡರೀಕಾಕ್ಷ ಹೇಳಿದರು. ಅವರು ಶನಿವಾರ ಕಾವುನಲ್ಲಿ ನಡೆದ ವಿಶ್ವಕರ್ಮ ಸಮಾವೇಶದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ, ಜಲಚರ, ಭೂಚರ, ಅಮಲು ಪದಾರ್ಥಗಳ ಸೇವನೆಯುಳ್ಳವ ಬ್ರಾಹ್ಮಣನಾಗಲು ಸಾಧ್ಯವಿಲ್ಲ.ಪ್ರತಿದಿನ ಸಂಧ್ಯಾ ವಂದನೆ ಮತ್ತು ತಂದೆ ತಾಯಿಯ ಸೇವೆ

ವಿಶ್ವಕರ್ಮರು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಪುಂಡರೀಕಾಕ್ಷ ಬೆಳ್ಳೂರು : Read More »

ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ವರ್ಗಾವಣೆ : ಪ್ರಭಾರ ತಹಶೀಲ್ದಾರ್ ಆಗಿ ರಮೇಶ್ ಬಾಬು

ಪುತ್ತೂರು : 2023 ರ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಸರ್ಗಪ್ರಿಯ ಜೆ. ಅವರನ್ನು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಪುತ್ತೂರು ತಹಶೀಲ್ದಾರ್ ಆಗಿ ಪ್ರಸ್ತುತ ಕಡಬ ತಹಶೀಲ್ದಾರ್ ಆಗಿರುವ ರಮೇಶ್ ಬಾಬು ಅವರು ಪುತ್ತೂರು ಪ್ರಭಾರ ತಹಶೀಲ್ದಾರ್ ಆಗಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸಲಿದ್ದಾರೆ. ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ಅವರಿಗೆ ಜ.30 ರಂದೇ ವರ್ಗಾವಣೆ ಆದೇಶ ಬಂದಿತ್ತಾದರೂ ಆದೇಶದಲ್ಲಿ ಗ್ರೇಡ್-2 ಕೊಟ್ಟೂರು ತಾಲೂಕು ವಿಜಯನಗರ ಜಿಲ್ಲೆ ಎಂದು

ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ವರ್ಗಾವಣೆ : ಪ್ರಭಾರ ತಹಶೀಲ್ದಾರ್ ಆಗಿ ರಮೇಶ್ ಬಾಬು Read More »

ಫೆ.17-18 ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ದೇವಸ್ಥಾನದ ಜಾತ್ರೋತ್ಸವ

ಫೆ.19 : ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಪುತ್ತೂರು : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಫೆ.17 ಹಾಗೂ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಫೆ.19 ರಂದು ನಡೆಯಲಿದೆ. ಶ್ರೀ ಅನ್ನಪೂರ್ಣೇಶ್ವರಿ ಕ್ಷೇತರದ ಧರ್ಮದರ್ಶಿ ಕುಕ್ಕಾಡಿ ತಂತ್ರಿ ಪ್ರೀತಮ್ ಪುತ್ತೂರಾಯ ಅವರ ನೇತೃತ್ವದಲ್ಲಿ  ಫೆ.17 ರಂದು ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 7 ಕ್ಕೆ ಗಣಪತಿ ಹವನ, ಕಲಶಪೂಜೆ, ಕಲಶಾಭಿಷೇಕ, ನಾಗಮಂಡಲ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 12.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ,

ಫೆ.17-18 ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ದೇವಸ್ಥಾನದ ಜಾತ್ರೋತ್ಸವ Read More »

ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡಲು ಒತ್ತಾಯ

ಆಯೋಗಕ್ಕೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್‌ರಿಂದ ಒತ್ತಾಯ ಪುತ್ತೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಹಾಗೂ ಹಿಂದುಳಿದ ವರ್ಗಗಳ ವಿವಿಧ ಜಾತಿ ಜನಾಂಗಗಳಿಂದ ಸಲ್ಲಿಸಿರುವ ಮನವಿಗಳ ಕುರಿತ ಬಹಿರಂಗ ವಿಚಾರಣೆಯಲ್ಲಿ ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡುವಂತೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ಎ. ಆಯೋಗವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನ ದಿ.ದೇವರಾಜು ಅರಸು ಅಡಿಟೋರಿಯಮ್‌ನಲ್ಲಿ ನಡೆದ ವಿಚಾರಣೆ ವೇಳೆ ಕರ್ನಾಟಕ ರಾಜ್ಯದ ಏಳು

ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡಲು ಒತ್ತಾಯ Read More »

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ

ಪುತ್ತೂರು : ನೆಹರೂನಗರದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ. ವಾರ್ಷಿಕ ಜಾತ್ರೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ಕಾರ್ಜಾಲುಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ, 11 ಗಂಟೆಗೆ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ ನಡೆಯಿತು.ಮಧ್ಯಾಹ್ನ ದೈವಸ್ಥಾನದ ಭಂಡಾರದ ವತಿಯಿಂದ‌ ನೆರೆದಿದ್ದ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷ ಅಜಿತ್ ಕುಮಾರ್ ಕಲ್ಲೇಗ, ಸದಸ್ಯರು, ನಗರಸಭೆ ಅಧ್ಯಕ್ಷ

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ Read More »

error: Content is protected !!
Scroll to Top