ಪುತ್ತೂರು

ವರದಿಗಾರರು ಬೇಕಾಗಿದ್ದಾರೆ

ಪುತ್ತೂರು :ಹೊಸದಾಗಿ ಆರಂಭಗೊಂಡ ನ್ಯೂಸ್ ಪುತ್ತೂರು ವೆಬ್‍ಸೈಟ್‍ಗೆ ವರದಿಗಾರರು ಬೇಕಾಗಿದ್ದಾರೆ. ಅರ್ಹತೆ : ಬರವಣಿಗೆಯ ಆಸಕ್ತಿ. ಫ್ರೆಷರ್ಸ್ / ಅನುಭವಿಗಳಿಗೆ ಆದ್ಯತೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ : 9108382821

ವರದಿಗಾರರು ಬೇಕಾಗಿದ್ದಾರೆ Read More »

ಹಿಂದೂ ಧರ್ಮದ ಶಕ್ತಿ ಪ್ರದರ್ಶಿಸಿದ ಒಕ್ಕಲಿಗ ಸಮಾವೇಶ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮ ಧರ್ಮದ ಶಕ್ತಿಯನ್ನು ಅನಾವರಣ ಮಾಡಿ, ಮಾದರಿ ಸಮಾರಂಭ ಎಂಬ ಪ್ರಶಂಸೆಗೆ ಪಾತ್ರವಾಗಿದೆ. ಎಲ್ಲಾ ಪಕ್ಷ ಮುಖಂಡರೂ ಭಾಗವಹಿಸಿದ್ದು ಪಕ್ಷಾತೀತ ಎಂದು ಸಾಬೀತಾದರೆ, ಎಲ್ಲಾ ಸಮುದಾಯದವರು ಭಾಗವಹಿಸುವ ಮೂಲಕ ಆದಿಚುಂಚನಗಿರಿ ಮಹಾಸಂಸ್ಥಾನ ಇಡೀ ಸಮಾಜಕ್ಕೆ ಮಾರ್ಗದರ್ಶಕ ಎನ್ನುವುದನ್ನು ರುಜುವಾತು ಪಡಿಸಿತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತಪಡಿಸಿ, ಸಂದೇಶ ರವಾನೆ ಆಗುತ್ತಿತ್ತು. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ

ಹಿಂದೂ ಧರ್ಮದ ಶಕ್ತಿ ಪ್ರದರ್ಶಿಸಿದ ಒಕ್ಕಲಿಗ ಸಮಾವೇಶ Read More »

 ವೈಭವಕ್ಕೆ ಸಾಕ್ಷಿಯಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ, ಗುರುವಂದನೆ, ತುಲಾಭಾರ, ಗ್ರಂಥ ಬಿಡುಗಡೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಹಾಗೂ ಗುರುವಂದನೆ, ತುಲಾಭಾರ ಸಮಾರಂಭ ವೈಭವದಿಂದ ಜರಗಿತು. ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯತಿವರೇಣ್ಯರ ಉಪಸ್ಥಿತಿಯಲ್ಲಿ ನಡೆದ ಸಮಾರಂಭಕ್ಕೆ ಸಾವಿರಾರು ಮಂದಿ ಭಕ್ತರು ಸಾಕ್ಷಿಯಾದರು. ರಾಜಕೀಯ ನಾಯಕರ ಸಹಿತ, ಅನೇಕ ಗಣ್ಯರು ಆಗಮಿಸಿ ಗುರುಗಳ ಆಶೀರ್ವಾದ ಸ್ವೀಕರಿಸಿದರು. ಬೆಳಿಗ್ಗೆ ಪೆರಿಯಡ್ಕದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ದರ್ಬೆಯಿಂದ ಭವ್ಯ ಶೋಭಾಯಾತ್ರೆ ನಡೆಯಿತು. ಶ್ರೀಗಳ ಉಪಸ್ಥಿತಿಯಲ್ಲಿ ಗಣ್ಯರು ಚೆಂಡೆ,

 ವೈಭವಕ್ಕೆ ಸಾಕ್ಷಿಯಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ, ಗುರುವಂದನೆ, ತುಲಾಭಾರ, ಗ್ರಂಥ ಬಿಡುಗಡೆ Read More »

ಜಯಂತ್ಯೋತ್ಸವ ಸಂಸ್ಮರಣೆಯ ವೈಭವದ ಶೋಭಾಯಾತ್ರೆ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಮೊದಲು ವೈಭವದ ಶೋಭಾಯಾತ್ರೆ ನಡೆಯಿತು. ದರ್ಬೆ ವೃತ್ತದಿಂದ ಹೊರಟ ಶೋಭಾಯಾತ್ರೆ ಪುತ್ತೂರು ಪೇಟೆ ಮೂಲಕ ಸಾಗಿ ಸಭಾಂಗಣದ ಬಳಿ ಸಮಾಪನಗೊಂಡಿತು. ಮುಂಭಾಗದಿಂದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪುತ್ಥಳಿ ಸಾಗಿದರೆ, ಅದನ್ನು ಅನುಸರಿಸಿ ಹಾಗೂ ಚೆಂಡೆ, ಕೊಂಬು ವಾದ್ಯಗಳ ಸ್ವರದೊಂದಿಗೆ ಸ್ವಾಮೀಜಿಗಳು, ಪ್ರಮುಖರು ಸಾಗಿದರು. ಇದರ ಹಿಂದೆ ಸಾಗಿ ಬಂದ ಟ್ಯಾಬ್ಲೋಗಳು ಆಕರ್ಷಕವಾಗಿತ್ತು.

ಜಯಂತ್ಯೋತ್ಸವ ಸಂಸ್ಮರಣೆಯ ವೈಭವದ ಶೋಭಾಯಾತ್ರೆ Read More »

ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ

ಪುತ್ತೂರು: ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಜ. 22ರಂದು ಬೆಳಿಗ್ಗೆ ಉಪ್ಪಿನಂಗಡಿಯ ಪೆರಿಯಡ್ಕ ಬಿಜಿಎಸ್ ಶಾಲಾ ಆವರಣದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಮೀನುಗಾರಿಕಾ ಇಲಾಖೆಯ ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು ಮೊದಲಾದವರು ಉಪಸ್ಥಿತರಿದ್ದರು.

ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ Read More »

ರಾಜ್ಯ ಕಾನೂನು ವಿ.ವಿ ಮಟ್ಟದ ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಸ್ಪರ್ಧೆ: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಥಮ

ಪುತ್ತೂರು: ಸರಕಾರಿ ಕಾನೂನು ಮಹಾವಿದ್ಯಾಲಯದಲ್ಲಿ ಜ. 21ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳಾ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ತಂಡ ಭಾಗವಹಿಸಿದ್ದು, ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಜೊತೆಗೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆರು ವಿದ್ಯಾರ್ಥಿಗಳು ಮುಂದೆ ನಡೆಯಲಿರುವ ಅಖಿಲ ಭಾರತೀಯ ದಕ್ಷಿಣ ಪ್ರಾಂತ ಅಂತರ್ ವಿಶ್ವವಿದ್ಯಾಲಯ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಅರ್ಹತೆ ಪಡೆದಿದ್ದು, ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪುರುಷರ

ರಾಜ್ಯ ಕಾನೂನು ವಿ.ವಿ ಮಟ್ಟದ ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಸ್ಪರ್ಧೆ: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಥಮ Read More »

ಸ್ವಾಮಿ ವಿವೇಕಾನಂದರು ಯುವಶಕ್ತಿಯ ಪ್ರತೀಕ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕ ಸಪ್ತಾಹ-2023ಕ್ಕೆ ಚಾಲನೆ ನೀಡಿ ಡಾ. ಬಿ.ಎ. ಕುಮಾರಹೆಗ್ಡೆ

ಪುತ್ತೂರು: ಸ್ವಾಮಿ ವಿವೇಕಾನಂದರು ಭಾರತದ ಯುವ ಶಕ್ತಿಗೆ ಪ್ರೇರಣೆ ಮತ್ತು ಪ್ರತೀಕ. ಈ ಮೂಲಕ ಯುವ ಭಾರತವನ್ನು ಜಗತ್ತಿಗೆ ಪರಿಚಯಿಸಿದರು. ಸ್ವಾಮಿ ವಿವೇಕಾನಂದರು ಜಗತ್ತಿನ ಎಲ್ಲ ಯುವ ಸಮುದಾಯದ ಪ್ರೇರಕ ಶಕ್ತಿ. ಅವರ ವಿಚಾರದಾರೆಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ಸಾರ್ಥಕತೆ ತರಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಡಾ. ಬಿ ಎ ಕುಮಾರಹೆಗ್ಡೆ ಕರೆ ನೀಡಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಘಟಕದ ವತಿಯಿಂದ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ

ಸ್ವಾಮಿ ವಿವೇಕಾನಂದರು ಯುವಶಕ್ತಿಯ ಪ್ರತೀಕ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕ ಸಪ್ತಾಹ-2023ಕ್ಕೆ ಚಾಲನೆ ನೀಡಿ ಡಾ. ಬಿ.ಎ. ಕುಮಾರಹೆಗ್ಡೆ Read More »

ಜಯಂತ್ಯೋತ್ಸವ ಸಂಸ್ಮರಣೆಗೆ ಹೊರೆಕಾಣಿಕೆ ಸಮರ್ಪಣೆ | ದರ್ಬೆಯಲ್ಲಿ ಭವ್ಯ ಮೆರವಣಿಗೆಗೆ ಚಾಲನೆ

ಪುತ್ತೂರು: ಹೊರೆಕಾಣಿಕೆ ಮೆರವಣಿಗೆ ಆರಂಭವಾಗುವ ಮೂಲಕ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಚಾಲನೆ ಸಿಕ್ಕಿದೆ. ದರ್ಬೆ ವೃತ್ತದ ಬಳಿ ಹೊರೆಕಾಣಿಕೆ ಮೆರವಣಿಗೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು‌ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ತೆಂಗಿನಕಾಯಿ ಒಡೆದು ಉದ್ಘಾಟಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ

ಜಯಂತ್ಯೋತ್ಸವ ಸಂಸ್ಮರಣೆಗೆ ಹೊರೆಕಾಣಿಕೆ ಸಮರ್ಪಣೆ | ದರ್ಬೆಯಲ್ಲಿ ಭವ್ಯ ಮೆರವಣಿಗೆಗೆ ಚಾಲನೆ Read More »

ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳಿಗೆ ಅಂತಿಮ ಸ್ಪರ್ಶ

ಪುತ್ತೂರು: ರಾಜ್ಯದ ಕೇಂದ್ರಬಿಂದುವಾಗಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78ನೇ ವರ್ಷದ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳು ಪೂರ್ಣಗೊಳ್ಳುತ್ತಿವೆ. ಸಮಾರಂಭಕ್ಕೆ ವೇದಿಕೆ, ಸಭಾಂಗಣ ಸಿದ್ಧಗೊಳ್ಳುತ್ತಿದ್ದು, ಅಂತಿಮ ಸ್ಪರ್ಶವಷ್ಟೇ ಬಾಕಿ ಉಳಿದಿವೆ. ಜ. 22ರಂದು ಬೆಳಿಗ್ಗೆ 8 ಗಂಟೆಗೆ ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಶಂಕುಸ್ಥಾಪನೆ ಸಮಾರಂಭದ ಮೂಲಕ ಇಡೀ ದಿನದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ. ಇಂದು ಸಂಜೆಯೇ ಆಗಮಿಸಲಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ

ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳಿಗೆ ಅಂತಿಮ ಸ್ಪರ್ಶ Read More »

ಫೆ. 10 – 12: 5ನೇ ಕೃಷಿಯಂತ್ರ ಮೇಳ 2023, ಕನಸಿನ ಮನೆ ಬೃಹತ್ ಪ್ರದರ್ಶನ

ಪುತ್ತೂರು: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಕ್ಯಾಂಪ್ಕೋ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಇದರ ಆಶ್ರಯದಲ್ಲಿ ‘5ನೇ ಕೃಷಿ ಯಂತ್ರ ಮೇಳ-2023 ಹಾಗೂ ಕನಸಿನ ಮನೆ’ ಬೃಹತ್ ಪ್ರದರ್ಶನ ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಫೆ. 10ರಿಂದ 12ರವರೆಗೆ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ನಾಲ್ಕು ಯಂತ್ರಮೇಳಗಳು ಈ ವಿದ್ಯಾ

ಫೆ. 10 – 12: 5ನೇ ಕೃಷಿಯಂತ್ರ ಮೇಳ 2023, ಕನಸಿನ ಮನೆ ಬೃಹತ್ ಪ್ರದರ್ಶನ Read More »

error: Content is protected !!
Scroll to Top