ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿ ಬದುಕು ಕಟ್ಟಿಕೊಳ್ಳಿ | ಶ್ರೀರಾಮ್ ಫೈನಾನ್ಸ್ ಪ್ರಾಯೋಜಕತ್ವದ ವಿದ್ಯಾರ್ಥಿ ವೇತನ ವಿತರಿಸಿ ಶಾಸಕ ಸಂಜೀವ ಮಠಂದೂರು
ಪುತ್ತೂರು: ಜಗತ್ತು ಸ್ಪರ್ಧೆಯ ಮೇಲೆ ನಿಂತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಧಿ ನೀಡುವ ಮೂಲಕ ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾಗಿ ಬೆಳೆಸುವಂತಹ ಕಾರ್ಯವನ್ನು ಶ್ರೀ ರಾಮ್ ಫೈನಾನ್ಸ್ ಮಾಡುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‍ನ ಪುತ್ತೂರು ಶಾಖೆ ಆಶ್ರಯದಲ್ಲಿ ಪುತ್ತೂರು ಟೌನ್ ಬ್ಯಾಂಕ್ ಹಾಲ್‍ನಲ್ಲಿ ಶುಕ್ರವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಿಧಿ ವಿತರಿಸಿ ಮಾತನಾಡಿದರು. ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಇಂದೇ ತೀರ್ಮಾನ ಮಾಡಬೇಕು. ಹಾಗಾದಾಗ ಮಾತ್ರ ಭವಿಷ್ಯವನ್ನು ಸುಭದ್ರವಾಗಿ ರೂಪಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು […]








