ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶ ಪ್ರಕಟ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಶೇ.100 ಫಲಿತಾಂಶ
ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-ಶೇ. 100, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ಶೇ.100, ಡಾಟಾಸೈನ್ಸ್- ಶೇ.100, […]










