ಪುತ್ತೂರು

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಭಾವಚಿತ್ರದ ಸ್ಟಿಕ್ಕರ್ ವಿತರಣೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆಯ ಹಿನ್ನೆಲೆಯಲ್ಲಿ ಮಹಾಸ್ವಾಮೀಜಿ ಅವರ ಭಾವಚಿತ್ರದ ಸ್ಟಿಕ್ಕರನ್ನು ಸವಣೂರು ಗ್ರಾಮದಲ್ಲಿ ವಿತರಿಸಲಾಯಿತು. ಇದರೊಂದಿಗೆ ಪ್ರತಿ ಮನೆಮನೆಗೆ ಆಮಂತ್ರಣವನ್ನು ನೀಡಿ, ಕಾರ್ಯಕ್ರಮಕ್ಕೆ ಸ್ವಾಗತಿಸಲಾಯಿತು

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಭಾವಚಿತ್ರದ ಸ್ಟಿಕ್ಕರ್ ವಿತರಣೆ Read More »

ಜ. 8, 9,10: ಕಾಡು ಬಯಲು ರಂಗಮಂದಿರದಲ್ಲಿ ಇಫಿಜೀನಿಯಾ, ಮುಕ್ತಧಾರಾ, ಲೀಕ್ ಔಟ್ ನಾಟಕ ಪ್ರದರ್ಶನ

ಪುತ್ತೂರು: ಇಲ್ಲಿನ ನೆಹರೂನಗರದ ಕಾಡು ಬಯಲು ರಂಗಮಂದಿರದಲ್ಲಿ ಜ. 8, 9, 10ರಂದು ನೀನಾಸಂ ತಂಡದ ಇಫಿಜೀನಿಯಾ, ಮುಕ್ತಧಾರಾ ಹಾಗೂ ಏಕವ್ಯಕ್ತಿ ನಾಟಕ ಲೀಕ್ ಔಟ್ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾಡು ಬಯಲು ರಂಗಮಂದಿರದ ನಿರ್ದೇಶಕ ರಾಘವೇಂದ್ರ ಎಚ್.ಎಂ. ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಡು ಬಯಲುರಂಗಮಂದಿರದಲ್ಲಿ ಪ್ರತಿ ವರ್ಷ ನಿರಂತರವಾಗಿ ರಂಗ ಚಟುವಟಿಕೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ನೀನಾಸಂ ನಾಟಕ ಕಳೆದ 30 ವರ್ಷಗಳಿಂದ ಕಾಡು ಬಯಲು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಕೋವಿಡ್ ಕಾರಣಗಳಿಂದ ಕಳೆದ 2 ವರ್ಷ

ಜ. 8, 9,10: ಕಾಡು ಬಯಲು ರಂಗಮಂದಿರದಲ್ಲಿ ಇಫಿಜೀನಿಯಾ, ಮುಕ್ತಧಾರಾ, ಲೀಕ್ ಔಟ್ ನಾಟಕ ಪ್ರದರ್ಶನ Read More »

ಚುಂಚಶ್ರೀ ಸಭಾಂಗಣದಲ್ಲಿ ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಸಿದ್ಧತಾ ಸಭೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜ. 5ರಂದು ತೆಂಕಿಲ ಒಕ್ಕಲಿಗ ಗೌಡ ಸೇವಾ ಸಂಘದ ಚುಂಚಶ್ರೀ ಸಭಾಂಗಣದಲ್ಲಿ ಸಭೆ ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣಾ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಸಂಘಟಿಸಿರುವುದೇ ನಮ್ಮೆಲ್ಲರ ಭಾಗ್ಯ. ರಾಜ್ಯದ ಕೇಂದ್ರವಾಗಿ ಪುತ್ತೂರಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಜನರೇ ಪುತ್ತೂರಿನತ್ತ ನೋಡಲಿದ್ದಾರೆ. ಆದ್ದರಿಂದ ಎಲ್ಲರೂ ಜೊತೆಯಾಗಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಆದಿಚುಂಚನಗಿರಿ

ಚುಂಚಶ್ರೀ ಸಭಾಂಗಣದಲ್ಲಿ ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಸಿದ್ಧತಾ ಸಭೆ Read More »

ಪುತ್ತೂರಿನಲ್ಲಿ ಮಹಿಳಾ ಮತದಾರರೇ ಅಧಿಕ | ಒಟ್ಟು 208272 ಮತದಾರರ ಪೈಕಿ 105363 ಮಹಿಳೆಯರು

ಪುತ್ತೂರು: ಇದುವರೆಗೆ ದಾಖಲಾಗಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧವಾಗಿದ್ದು, 208272 ಮತದಾರರ ಹೆಸರು ಹಕ್ಕು ಚಲಾಯಿಸುವ ಕಾರ್ಯಕ್ಕೆ ಅಂತಿಮಗೊಂಡಿದೆ. ಇದರಲ್ಲಿ 105363 ಮಂದಿ ಮಹಿಳೆಯರೇ ಎನ್ನುವುದು ವಿಶೇಷ. ಪುತ್ತೂರು ತಾಲೂಕು ಕಚೇರಿಯ ಲೆಕ್ಕಾಚಾರದಂತೆ, ಇದುವರೆಗೆ 208272 ಮಂದಿ ಮತದಾರರ ಪಟ್ಟಿ ಸಿದ್ಧವಾಗಿದೆ. ಅಂದರೆ ಇದೇ ಅಂತಿಮವಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ, ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಘೋಷಣೆ ಮಾಡುವ ದಿನದವರೆಗೂ ಮತದಾರರ ಪಟ್ಟಿಗೆ ಹೆಸರು ನೀಡಲು ಅವಕಾಶವಿದೆ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾಹಿತಿ ನೀಡಿದರು.

ಪುತ್ತೂರಿನಲ್ಲಿ ಮಹಿಳಾ ಮತದಾರರೇ ಅಧಿಕ | ಒಟ್ಟು 208272 ಮತದಾರರ ಪೈಕಿ 105363 ಮಹಿಳೆಯರು Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥಿಸಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ | ಸವಣೂರಿನಲ್ಲಿ ಪೂರ್ವಸಿದ್ಧತಾ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸವಣೂರಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಮನೆಮನೆಗೆ ಆಮಂತ್ರಣ ಪತ್ರ ತಲುಪಿಸುವ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ, ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಭಾವಚಿತ್ರವುಳ್ಳ ಸ್ಟಿಕ್ಕರನ್ನು ಪ್ರತಿ ಮನೆಮನೆಗೆ ತಲುಪಿಸಿ, ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಲಾಯಿತು.

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ | ಸವಣೂರಿನಲ್ಲಿ ಪೂರ್ವಸಿದ್ಧತಾ ಸಭೆ Read More »

ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ ಕೊಠಡಿ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ಸಾರ್ವಜನಿಕ ಉದ್ಯಾನವನಕ್ಕೆ ಶಿಲಾನ್ಯಾಸ ನಡೆಸಲಾಯಿತು. ಬಳಿಕ ಮಾತನಾಡಿದ ಶಾಸಕರು, ಅಮೃತ ಗ್ರಾಮ ಯೋಜನೆಯಡಿ ಒಟ್ಟು 27 ಲಕ್ಷದ 25 ಸಾವಿರ ರೂ. ಮಂಜೂರಾಗಿದ್ದು, ಇದರಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣ ಆಗಲಿದೆ. ಈ ಮೂಲಕ ಆಧುನಿಕತೆಗೆ ಗ್ರಂಥಾಲಯದ ಸ್ಪರ್ಶ ನೀಡುವ ಕೆಲಸ ಇಲ್ಲಿ ನಡೆಯುತ್ತಿದೆ. ಸಾಮಾಜಿಕ ಜಾಲತಾಣ, ಮೊಬೈಲ್

ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ Read More »

ಜ. 5, 6: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರಸ್ವಾಮಿ, ಧರ್ಮದೈವಗಳ ಪುನಶ್ಚೈತನ್ಯ ಕಲಶಾಭಿಷೇಕ, ನೇಮೊತ್ಸವ

ಪುತ್ತೂರು: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರಸ್ವಾಮಿ ಹಾಗೂ ಧರ್ಮದೈವಗಳ ಪುನಶ್ಚೈತನ್ಯ ಕಲಶಾಭಿಷೇಕ ಹಾಗೂ ನೇಮೊತ್ಸವ ಜ. 5ರಿಂದ ನಡೆಯಲಿದೆ. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ, ಶೇವಿರೆ ಕೃಷ್ಣ ಮಡಪುಳಿತ್ತಾಯರವರ ಪೌರೋಹಿತ್ಯದಲ್ಲಿ ವೈದಿಕ ಕಾರ್ಯಕ್ರಮ ನಡೆಯಲಿದೆ. ಜ. 5ರಂದು ಬೆಳಿಗ್ಗೆ 6.30ಕ್ಕೆ ಕಲ್ಲೇಗ ಗುತ್ತಿನ ಭಂಡಾರ ಚಾವಡಿಯಿಂದ ಭಂಡಾರ ಹೊರಡಲಿದೆ. ಬೆಳಿಗ್ಗೆ 7ರಿಂದ ಮಹಾಗಣಪತಿ ಹೋಮ, ಪ್ರತಿಷ್ಠಾ ಹೋಮ, ಪಂಚವಿಂಶತಿ, ಕಲಶ ಪೂಜೆ, ಬೆಳಿಗ್ಗೆ 10.28ಕ್ಕೆ ನಾಗಪ್ರತಿಷ್ಠೆ, ಪಂಚಾಮೃತ ಅಭಿಷೇಕ, ತಂಬಿಲಸೇವೆ, ಶ್ರೀ ಪುಣ್ಯಕುಮಾರ, ಶ್ರೀ ಅಣ್ಣಪ್ಪ

ಜ. 5, 6: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರಸ್ವಾಮಿ, ಧರ್ಮದೈವಗಳ ಪುನಶ್ಚೈತನ್ಯ ಕಲಶಾಭಿಷೇಕ, ನೇಮೊತ್ಸವ Read More »

ಜ. 5, 6: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ. 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, 5ರಂದು ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸುವರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧು ನರಿಯೂರು ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭ ವೆಂಕಟ್ರಮಣ ನಕ್ಷತ್ರಿತ್ತಾಯ, ಅರಣ್ ರೈ ಡಿಂಬ್ರಿ, ನವೀನ್ ಕಿನ್ನಿಮಜಲು, ಗೀತಾ, ರಾಮಣ್ಣ ಪಡ್ಪು ಅವರನ್ನು ಸನ್ಮಾನಿಸಲಾಗುವುದು. ಬಳಿಕ ಹನುಮಗಿರಿ ಶ್ರೀ

ಜ. 5, 6: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ

ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ವಿಶ್ವಕರ್ಮ ಸಮಾಜದ ವಟುಗಳಿಗಾಗಿ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಜ. 8ರಂದು ಬೆಳಿಗ್ಗೆ 10.15ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಲಿದೆ. ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಪುರೋಹಿತ್ ಕೆ. ರಮೇಶ ಆಚಾರ್ಯ ಗೇರುಕಟ್ಟೆ ಅವರ ಆಚಾರ್ಯತ್ವದಲ್ಲಿ ಸಾಮೂಹಿಕ ಬ್ರಹ್ಮೋಪದೇಶ ನಡೆಯಲಿದೆ. ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಈ ಸಲ 8ನೇ ಬಾರಿ

ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ Read More »

error: Content is protected !!
Scroll to Top