ಶಿಸ್ತು, ನಾಯಕತ್ವ ಗುಣ ಬೆಳೆಸಿಕೊಳ್ಳುವುದಕ್ಕೆ ಎನ್‌ಎಸ್‌ಎಸ್ ಸಹಕಾರಿ | ಅಂಬಿಕಾ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟಿಸಿ ಸತ್ಯಜಿತ್ ಉಪಾಧ್ಯಾಯ
ಪುತ್ತೂರು: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳುವಂತೆ ಮಾಡಲು ಕಾಲೇಜು ಹಂತದಲ್ಲಿ ವಿವಿಧ ಯೋಜನೆಗಳಿರುವುದನ್ನು ಗಮನಿಸಬಹುದು. ಅಂತಹ ಆಲೋಚನೆಯೊಂದಿಗೆ ರೂಪುಗೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರಲ್ಲಿ ಶಿಸ್ತು, ಸ್ವಚ್ಛತೆ, ನಾಯಕತ್ವ ಗುಣ, ಸಮಯಪಾಲನೆ ಹಾಗೂ ಸಾಮಾಜಿಕ ಕಳಕಳಿಯನ್ನು ತುಂಬುವ ಕಾರ್ಯವನ್ನು ಮಾಡುತ್ತದೆ. ಶ್ರಮದಾನ, ವಿಶೇಷ ಶಿಬಿರಗಳಲ್ಲಿ ನಡೆಸುವ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದು ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಎಂ. ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟ್‌ನ ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ […]









