ಪುತ್ತೂರು

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ

ಪುತ್ತೂರು: ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ ದೇವಾಲಯ ಸಂವರ್ಧನ ಸಮಿತಿ ಶ್ರೀ ಪಾರ್ವತಿ ಬಳಗದಿಂದ ನೆರವೇರಿಸಲಾಯಿತು. ಎಡನೀರು ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಯವರು ಉಪಸ್ಥಿತರಿದ್ದರು. 25 ಮಂದಿ ಮಹಿಳೆಯರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಕೃಷ್ಣ ವೇಣಿ ಪ್ರಸಾದ್ ಮುಳಿಯ ಅವರು ದೇವಿ ಅಪರಾಧ ಕ್ಷಮಾಪಣ ಸ್ತೋತ್ರವನ್ನು ಹೇಳಿಕೊಡುವುದರೊಂದಿಗೆ, ಅರ್ಚನೆಯ ವಿಷೇಶತೆಯನ್ನು ತಿಳಿಸಿದರು, ಪ್ರಭಾವತಿ ಕಾರ್ಯಕ್ರಮ ನಿರ್ವಹಣೆ ಮಾಡಿದರು,  […]

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ Read More »

ಶ್ರೀ ರಾಘವೇಂದ್ರ ಸ್ಟೋರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ನೂತನ ವ್ಯವಸ್ಥೆ ಆರಂಭ

ಪುತ್ತೂರು: ಕಳೆದ 35 ವರ್ಷಗಳಿಂದ ಪೈಂಟ್ ಗಳ ಸೇವೆಯಲ್ಲಿ ಮನೆ ಮಾತಾಗಿರುವ ಏಳ್ಮುಡಿಯಲ್ಲಿರುವ ಶ್ರೀ ರಾಘವೇಂದ್ರ ಸ್ಟೋ ರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ಎಂಬ ವಿನೂತನ ವ್ಯವಸ್ಥೆ ಗುರುವಾರ ಪ್ರಾರಂಭಗೊಂಡಿತು. ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಬದಲಾದ ಕಾಲ ಘಟ್ಟದಲ್ಲಿ ಜನರ ಬಳಿಗೆ ಸೇವೆಯನ್ನು ಜನರ ಬಳಿಗೆ ವಿಸ್ತರಿಸಬೇಕಾಗಿರುವುದೇ ಇಂದಿನ ಮಾರುಕಟ್ಟೆಯ ತಂತ್ರವಾಗಿದೆ. ಯಾವುದೇ ಸಾಮಾಗ್ರಿಗಳು ಮನೆ ಬಾಗಿಲಿಗೆ

ಶ್ರೀ ರಾಘವೇಂದ್ರ ಸ್ಟೋರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ನೂತನ ವ್ಯವಸ್ಥೆ ಆರಂಭ Read More »

ಪತ್ನಿಯ ಸೀಮಂತದಂದೇ ಕುಸಿದು ಬಿದ್ದು ಪತಿ ಮೃತ್ಯು

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್‍ (33) ಮೃತಪಟ್ಟವರು. ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

ಪತ್ನಿಯ ಸೀಮಂತದಂದೇ ಕುಸಿದು ಬಿದ್ದು ಪತಿ ಮೃತ್ಯು Read More »

ಜೂ.1 : ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಮಹಾ ಅಧಿವೇಶನ, ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರುಗಳ ಪ್ರಥಮ ಮಹಾ ಅಧಿವೇಶನ ಹಾಗೂ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ಜೂ.1 ಭಾನುವಾರ ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ 2024 ರ ಆಗಸ್ಟ್ ನಲ್ಲಿ ನೋಂದಾವಣೆಗೊಂಡು ಅಸ್ತಿತ್ವಕ್ಕೆ ಬಂದಿದೆ. ನೋಂದಾವಣೆಗೊಂಡು ಒಂದು ವರ್ಷದ

ಜೂ.1 : ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಮಹಾ ಅಧಿವೇಶನ, ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ Read More »

ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಾಧವ ರೈ ಕುಂಬ್ರ ನಿಧನ

ಪುತ್ತೂರು: ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ ಪ್ರಸ್ತುತ ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷರಾಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ ಕುರಿಯ ಮಾಡಾವು ಏಳ್ನಾಡುಗುತ್ತು ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪಬ್ಲಿಕ್ ಸ್ಕೂಲ್

ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಾಧವ ರೈ ಕುಂಬ್ರ ನಿಧನ Read More »

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆ “ಸ್ವರ್ಣಧಾರಾ” ಉದ್ಘಾಟನೆ

ಪುತ್ತೂರು: ಸ್ವರ್ಣಧಾರಾ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆಯನ್ನು ಪುತ್ತೂರಿನ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಗುರುವಾರ ಉದ್ಘಾಟಿಸಲಾಯಿತು. ಸ್ವರ್ಣಧಾರಾ ಯೋಜನೆಯ ಬಗ್ಗೆ ಮಾತನಾಡಿದ ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯ, ಸ್ವರ್ಣಧಾರಾ ಯೋಜನೆಗೆ ಗ್ರಾಹಕರಿಂದ ಉತ್ತಮ ಬೇಡಿಕೆ ಇದೆ. ಹಾಗಾಗಿ ಗ್ರಾಹಕರಿಗೆ ಇನ್ನಷ್ಟು ಅನುಕೂಲತೆ ಆಗುವಂತೆ ಯೋಜನೆಯನ್ನು ಒಂದಷ್ಡು ಬದಲಾವಣೆಯೊಂದಿಗೆ ಹೊಸತನ್ನು  ಪರಿಚಯಿಸುತ್ತಿದ್ದೇವೆ. ಇಂದು ಉದ್ಘಾಟನೆಗೊಂಡ ಹೊಸ ಸ್ಕೀಂನಲ್ಲಿ ಗ್ರಾಹಕರು ಪ್ರತಿ ತಿಂಗಳು ಹೂಡಿಕೆ ಮಾಡುವ ಮೊತ್ತದ ಚಿನ್ನವನ್ನು ತೆಗೆದಿಡಲಾಗುವುದು. ಅಂದರೆ ಇಂದು ಹೂಡಿಕೆ ಮಾಡಿದರೆ, ಇಂದಿನ ಚಿನ್ನದ ಧಾರಣೆಯಲ್ಲೇ

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆ “ಸ್ವರ್ಣಧಾರಾ” ಉದ್ಘಾಟನೆ Read More »

ಕೋಣೆಯಲ್ಲಿ ಕೂಡಿ ಹಾಕಿ ಹಿಂದೂ ಮಹಿಳೆಯ ದಿಗ್ಭಂಧನ | ಪೊಲೀಸರಿಂದ ಮಹಿಳೆಯ ರಕ್ಷಣೆ

ಪುತ್ತೂರು: ನಗರದ ಪರ್ಲಡ್ಕದಲ್ಲಿ ಹಿಂದೂ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಮಾಡಿದ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಾಹಿತಿ ತಿಳಿಸಿದ ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪರ್ಲಡ್ಕ ಎಂಬಲ್ಲಿ  ವ್ಯಕ್ತಿಯೊಬ್ಬ ದಿಗ್ಭಂಧನ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೈಶ್ಯಾವಾಟಿಕೆ ಶಂಕೆ ವ್ಯಕ್ತವಾಗಿದೆ. ಪುತ್ತೂರು ನಗರ ಪೋಲೀಸರು ಮಹಿಳೆಯ ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕೋಣೆಯಲ್ಲಿ ಕೂಡಿ ಹಾಕಿ ಹಿಂದೂ ಮಹಿಳೆಯ ದಿಗ್ಭಂಧನ | ಪೊಲೀಸರಿಂದ ಮಹಿಳೆಯ ರಕ್ಷಣೆ Read More »

ಟೆಂಪೊ ಟ್ರಾವೆಲರ್‌  – ಕಾರು ನಡುವೆ   ಢಿಕ್ಕಿ | ಪ್ರಾಣಾಪಾಯದಿಂದ ಪಾರು

ಪುತ್ತೂರು : ಟೆಂಪೊ ಟ್ರಾವೆಲರ್‌ ವಾಹನ ಮತ್ತು ಕಾರಿನ ನಡುವೆ ಢಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಬೊಳುವಾರು ಸಮೀಪದಲ್ಲಿ ನಡೆದಿದೆ.  ಈ ಘಟನೆ ತಡ ರಾತ್ರಿ ವೇಳೆ ನಡೆದಿದ್ದು,  ಅದೃಷ್ಟವಶಾತ್‍ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿದ್ದ ಟೆಂಪೊ ಟ್ರಾವೆಲರ್‌ ಮತ್ತು ಪುತ್ತೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಲೇನೋ ಕಾರು ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನ ಬೈಪಾಸ್‌ ರಸ್ತೆಯ ಅಪಾಯಕಾರಿ

ಟೆಂಪೊ ಟ್ರಾವೆಲರ್‌  – ಕಾರು ನಡುವೆ   ಢಿಕ್ಕಿ | ಪ್ರಾಣಾಪಾಯದಿಂದ ಪಾರು Read More »

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನ | ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಅವರಿಂದ ಭವನ ನಿರ್ಮಾಣ ಕಾರ್ಯ ವೀಕ್ಷಣೆ

ಕಡಬ : ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನಕ್ಕೆ, ಶಿಕ್ಷಣ ಕ್ರಾಂತಿಯ ಹರಿಕಾರರಾದ ದಿ. ಕುರುಂಜಿ ವೆಂಕಟರಮಣ ಗೌಡ ಅವರ ಸುಪುತ್ರರಾದ ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಆಗಮಿಸಿ, ಸಮುದಾಯ ಭವನ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಕೆ.ವಿ.ಜಿ ಕುಟುಂಬದ ಹೆಸರು ನಮ್ಮ ಸಮುದಾಯ ಭವನದಲ್ಲಿ ಅಚ್ಚಳಿಯದೆ ಉಳಿಯುವಂತಹ, ನಮ್ಮ  ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಬೇಡಿಕೆಯನ್ನು ನೆರೆವೇರಿಸುವ ಸಂಪೂರ್ಣ ಭರವಸೆ ಈ

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನ | ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಅವರಿಂದ ಭವನ ನಿರ್ಮಾಣ ಕಾರ್ಯ ವೀಕ್ಷಣೆ Read More »

ಹಿಟ್‍ ಆಂಡ್ ರನ್‍ | ಗಾಯಗೊಂಡ ಅರಿಯಡ್ಕ ಗ್ರಾಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್‍.

ಪುತ್ತೂರು: ಹಿಟ್ ಆಂಡ್ ರನ್‌ ನಲ್ಲಿ ಅರಿಯಡ್ಕ ಗ್ರಾ. ಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್.ರವರು ಗಾಯಗೊಂಡ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 275 ರ ಕುಂಬ್ರ ಸಮೀಪದ ಶೇಖಮಲೆಯಲ್ಲಿ ನಡೆದಿದೆ. ಸವಿತಾರವರು ಚಲಾಯಿಸುತ್ತಿದ್ದ ಸ್ಕೂಟರ್‌ ಶೇಖಮಲೆ ಮಸೀದಿ ಹತ್ತಿರ ಟೆಂಪೋ ಟ್ರಾವೆಲ್ಲರ್‌ ವೊಂದು ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸುವ ಭರದಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಪಲ್ಟಿಯಾಗಿದ್ದು ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಾಯಾಳುವನ್ನು ತಕ್ಷಣವೇ ಕುಂಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕ

ಹಿಟ್‍ ಆಂಡ್ ರನ್‍ | ಗಾಯಗೊಂಡ ಅರಿಯಡ್ಕ ಗ್ರಾಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್‍. Read More »

error: Content is protected !!
Scroll to Top