ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ವಿಜ್ರಂಭಣೆಯಿಂದ ನೆರವೇರಲಿದೆ ಬ್ರಹ್ಮರಥೋತ್ಸವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಕಳೆದ ಎಂಟು ದಿನಗಳಿಂದ ವೈಭವದಿಂದ ನಡೆಯುತ್ತಿದ್ದು, ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು, ಬಳಿಕ ಶ್ರೀ ದೇವರು ರಥಬೀದಿಗೆ ಬರುವರು. ಆನಂತರ ಶ್ರೀ ಮಹಾಲಿಂಗೇಶ್ವರ ದೇವರು ರಥಾರೋಢರಾಗುವರು. ಈ ಹೊತ್ತಿನಲ್ಲಿ ಸಿಡಿಮದ್ದು ಪ್ರದರ್ಶನ ಪ್ರಾರಂಭಗೊಂಡು ಸುಮಾರು ಒಂದೂವರೆ ಗಂಟೆಗಳ ಕಾಲ ಸಿಡಿಮದ್ದು ಪ್ರದರ್ಶನ ನಡೆದ ಬಳಿಕ ಸಾವಿರಾರು ಭಕ್ತಾದಿಗಳ ಕೈಗಳ ಜಯಘೋಷಗಳೊಂದಿಗೆ ಬ್ರಹ್ಮರಥವನ್ನು ಎಳೆಯುತ್ತಾರೆ. […]

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ವಿಜ್ರಂಭಣೆಯಿಂದ ನೆರವೇರಲಿದೆ ಬ್ರಹ್ಮರಥೋತ್ಸವ Read More »

”ಥಿನ್ ಫಿಲ್ಮ್ಸ್: ಇಂದಿನ ತಂತ್ರಜ್ಞಾನದ ಚಲನೆ” ಕುರಿತು ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಕಾಲೇಜ್ ( ಸ್ವಾಯತ್ತ) ವತಿಯಿಂದ “ಥಿನ್ ಫಿಲ್ಮ್ಸ್: ಇಂದಿನ ತಂತ್ರಜ್ಞಾನದ ಚಲನೆ” ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಾಗಾರ ಬುಧವಾರ ಏರ್ಪಡಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ವಸ್ತು ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಮಂಜುನಾಥ ಪಟ್ಟಾಭಿ ಮುಖ್ಯ ಉಪನ್ಯಾಸ ನೀಡಿ, ಥಿನ್ ಫಿಲ್ಮ್ ತಂತ್ರಜ್ಞಾನಗಳ ಮಹತ್ವ, ಅಭಿವೃದ್ಧಿಗಳು ಹಾಗೂ ಇಂದಿನ ವಿಜ್ಞಾನ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ಇದರ ಅನ್ವಯಿತೆಯ ಬಗ್ಗೆ ಬೆಳಕು ಚೆಲ್ಲಿದರು. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯರ್ ಸಮಾರಂಭದ ಅಧ್ಯಕ್ಷತೆ

”ಥಿನ್ ಫಿಲ್ಮ್ಸ್: ಇಂದಿನ ತಂತ್ರಜ್ಞಾನದ ಚಲನೆ” ಕುರಿತು ಉಪನ್ಯಾಸ Read More »

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ

ಪುತ್ತೂರು: ಅಕ್ಷಯ    ಕಾಲೇಜಿನಲ್ಲಿ   ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು  ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ರ ಸಮಾರೋಪ ಸಮಾರಂಭದ  ಉದ್ಘಾಟನೆ ಯನ್ನು  ಶ್ರೀ  ಅರುಣ್ ನಾಗೇ ಗೌಡ  ಡಿ.ವೈ.ಎಸ್. ಪಿ  ಪುತ್ತೂರು  ವಿಭಾಗ  ಇವರು  ನಿರ್ವಹಿಸಿ  ವಿದ್ಯಾರ್ಥಿ ಜೀವನದ ಕರ್ತವ್ಯ ವನ್ನು ಸಮರ್ಪಕವಾಗಿ  ನಿಭಾಯಿಸಿ ತಮ್ಮ  ಪೋಷಕರಿಗೆ, ತಮಗೆ  ಶಿಕ್ಷಣ ನೀಡಿದ ಸಂಸ್ಥೆಗೆ ಕೀರ್ತಿಯನ್ನು ತರಬೇಕು. ಕಲಿಕೆ ಮತ್ತು ಕ್ರಮ ಬದ್ಧವಾದ  ಜೀವನ ಉತ್ತಮ ಸಂಸ್ಕಾರವನ್ನು ಕಲಿಸುತ್ತದೆ  ಮಾತ್ರವಲ್ಲ  ಸಮಾಜದಲ್ಲಿ

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ Read More »

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ

ಹಿಂದಿನ ವರ್ಷಕ್ಕಿಂತ 9.94 ಕೋ.ರೂ. ಹೆಚ್ಚಳ ಸುಬ್ರಹ್ಮಣ್ಯ: ರಾಜ್ಯದಲ್ಲೇ ಅತಿಹೆಚ್ಚು ಆದಾಯವಿರುವ ಪುಣ್ಯಕ್ಷೇತ್ರವಾಗಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಕಳೆದ ಹಣಕಾಸು ಸಾಲಿನಲ್ಲೂ ಭಾರಿ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ.ಗೆ ಏರಿಕೆ ಆಗಿದೆ. ಹಿಂದಿನ ವರ್ಷದ ಆದಾಯ 146.01 ಕೋಟಿ ರೂ. ಆಗಿತ್ತು. ಹಿಂದಿನ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಪುನೀತರಾದ ಲಕ್ಷಾಂತರ ಭಕ್ತರು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಅತ್ಯಂತ ವೈಭವದಿಂದ ನಡೆಯುತ್ತಿದ್ದು, ಜಾತ್ರೋತ್ಸವದ ಅಂಗವಾಗಿ ಬುಧವಾರ ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಕಿರುವಾಳು ಭಂಡಾರ ಆಗಮನವಾಯಿತು. ಲಕ್ಷಾಂತರ ಭಕ್ತಾದಿಗಳು ಈ ಸಂದರ್ಭವನ್ನು ಕಣ್ತುಂಬಿಕೊಂಡರು. ಸಂಜೆ 6 ಗಂಟೆಗೆ ಸೂಟೆ ಬೆಳಕಿನೊಂದಿಗೆ ಹೊರಟ ಕಿರುವಾಳು ಬರುವ ದಾರಿಯುದ್ದಕ್ಕೂ ಅಲ್ಲಲ್ಲಿ ಸ್ಥಳೀಯರು ಪಾನೀಯ ವ್ಯವಸ್ಥೆಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಮಲ್ಲಿಗೆ ಅರ್ಪಿಸಿದರು. ರಾತ್ರಿ ಸುಮಾರು 10.30 ಗಂಟೆ ಹೊತ್ತಿಗೆ ಕಿರುವಾಳು ಶ್ರೀ ದೇವಸ್ಥಾನವನ್ನು ತಲುಪಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಪುನೀತರಾದ ಲಕ್ಷಾಂತರ ಭಕ್ತರು Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

ಬನ್ನೂರು: ಕೃಷ್ಣ ನಗರದ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ.16 ರಂದು ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ನಗರಸಭಾ ಪೂರ್ವದ್ಯಕ್ಷರಾದ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರ ಪ್ರಯತ್ನದ ಹಿಂದೆ ದೃಢ ನಿರ್ಧಾರ ಹಾಗೂ ಮುಂದೆ ಒಂದು ದೃಢವಾದ ಗುರಿ ಇರಬೇಕು. ಹಾಗಾದಾಗ ನಾವು ಜೀವನದಲ್ಲಿ ಮುಂದೆ ಬರಲು ಸಾಧ್ಯ. ಮಕ್ಕಳು ಎಳವೆಯಿಂದಲೇ ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ಅಂತಹ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ Read More »

ಪುತ್ತೂರು ಜಾತ್ರೆ ಗದ್ದೆಯಲ್ಲಿ ಮೊಬೈಲ್ ಸಿಸಿ ಕ್ಯಾಮರಾ ಕಣ್ಗಾವಲು | ಪ್ರವೇಶ ದ್ವಾರ ಸಹಿತ ಹಲವೆಡೆ 44 ಸಿಸಿ ಕ್ಯಾಮರಾ

ಪುತ್ತೂರು: ಲಕ್ಷಾಂತರ ಮಂದಿ ಸೇರುವ, ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಸಂದರ್ಭದಲ್ಲಿ ಜಾತ್ರೆ ಗದ್ದೆಯಲ್ಲಿ ಪೊಲೀಸ್ ಬಂದೋಬಸ್ತ್ ಜೊತೆಗೆ ಮೊಬೈಲ್ ಸಿಸಿ ಕ್ಯಾಮರಾ ಕಣ್ಗಾವಲು ಕೂಡಾ ಇರಲಿದೆ. ಈಗಾಗಲೇ 44 ಸಿಸಿಕ್ಯಾಮರಾಗಳನ್ನು ಅಳವಡಿಸಲಾಗಿದೆ. ಶೇಟ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ನಿರ್ವಹಣೆ ನಡೆಯುತ್ತಿದೆ. ಭದ್ರತೆಗೆ ಹೆಚ್ಚು ಅನುಕೂಲಕರವಾಗುವ ಚಲಿಸುವ ವಾಹನದಲ್ಲಿ ಸಿಸಿ ಟಿವಿ (CC TV Control Room on Wheels) ಎಂಬ ಹೊಸ ಪ್ರಯೋಗವನ್ನು ದಕ್ಷಿಣ ಕನ್ನಡ

ಪುತ್ತೂರು ಜಾತ್ರೆ ಗದ್ದೆಯಲ್ಲಿ ಮೊಬೈಲ್ ಸಿಸಿ ಕ್ಯಾಮರಾ ಕಣ್ಗಾವಲು | ಪ್ರವೇಶ ದ್ವಾರ ಸಹಿತ ಹಲವೆಡೆ 44 ಸಿಸಿ ಕ್ಯಾಮರಾ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಇಂದು ರಾತ್ರಿ ಆಗಮಿಸಲಿದೆ. ಕಿರುವಾಳು ಆಗಮನದ ಅಂಗವಾಗಿ ಇಂದು ಬೆಳಿಗ್ಗೆಯಿಂದಲೇ ಶ್ರೀ ಉಳ್ಳಾಲ್ತಿಗೆ ಮಲ್ಲಿಗೆ ಅರ್ಪಿಸಲು ಅವಕಾಶ ನೀಡಲಾಗಿತ್ತು. ಇದಕ್ಕೂ ಮುಂಚೆ ಶ್ರೀ ದೈವಸ್ಥಾನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆ ಹಾಗೂ ಸಂಜೆ 3 ಗಂಟೆ ತನಕ ಮಲ್ಲಿಗೆ ಅರ್ಪಿಸಲು ಅವಕಾಶ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಕಟ್ಟೆಯಲ್ಲಿ ಭಕ್ತಾದಿಗಳು ಸರತಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ Read More »

ಬಿಸು ಆಚರಣೆ- ಭಜನೆ, ಆಟೋಟ ಸ್ಪರ್ಧೆಗಳೊಂದಿಗೆ ರಂಗೇರಿದ ಸವಣೂರಿನ ತುಳಸೀಪುರಂ

ಪುತ್ತೂರು: ಸವಣೂರು ಗ್ರಾಮದ ಪರಣೆ- ತುಳಸಿಪುರಂನಲ್ಲಿ ಶ್ರೀ ದೇವಿ ಸೇವಾ ಸಮಿತಿಯ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಏ. 14 ರಂದು ಬಿಸು ಆಚರಣೆ ನಡೆಯಿತು. ಬೆಳಿಗ್ಗೆ ಬಿಸು ಕಣಿ ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಹಿರಿಯರ ಆಶೀರ್ವಾದವನ್ನು ಪಡೆದ ಬಳಿಕ ವಿವಿಧ ಭಜನಾ ತಂಡಗಳಿಂದ ಭಜನೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಧ್ಯಾಹ್ನ ಬಿಸು ಪರ್ಬದ ವಿಶೇಷ ಸಹಭೋಜನ ನಡೆಯಿತು. ತುಳಸಿಪುರಂ ಶ್ರೀ ದೇವಿ ಸೇವಾ ಸಮಿತಿಯ ಸಂಚಾಲಕ ಪದ್ಮಯ್ಯ ಗೌಡ ಪರಣೆ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬಿಸು ಆಚರಣೆ- ಭಜನೆ, ಆಟೋಟ ಸ್ಪರ್ಧೆಗಳೊಂದಿಗೆ ರಂಗೇರಿದ ಸವಣೂರಿನ ತುಳಸೀಪುರಂ Read More »

56ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 56ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.17 ಗುರುವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. ಪುತ್ತೂರು ಜಾತ್ರೆಯ ಜೊತೆಯಲ್ಲಿ ಸೀನಿಪ್ರಿಯರಿಗೆ ಭಾವ ತೀರ ಯಾನ ನೋಡುವ ಅವಕಾಶವಿದೆ.

56ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

error: Content is protected !!
Scroll to Top