ಇತಿಹಾಸ ಪ್ರಸಿದ್ಧ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ | ಕರ್ನಾಟಕ-ಕೇರಳದ ಕಲಾತಂಡಗಳ ಆಕರ್ಷಣೀಯ ಪ್ರದರ್ಶನ.
ಪುತ್ತೂರು: ನವರಾತ್ರಿ ಉತ್ಸವದ ಹಿನ್ನಲೆಯಲ್ಲಿ ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ನಡೆಸಲಾಗುತ್ತಿರುವ 90 ನೇ ವರ್ಷದ ಶ್ರೀ ಶಾರದೋತ್ಸವದ ಅದ್ದೂರಿ ಶೋಭಾಯಾತ್ರೆಯು ಶನಿವಾರ ಸಂಜೆ ನಡೆಯಿತು. ಶೋಭಾಯಾತ್ರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕೇರಳದ ಕೇರಳದ ಪಂದಳಾಟಮ್, ಸಿಂಗಾರಿ ಕಾವಡಿ, ಕಥಕ್ಕಳಿ, ಮಹಿಳಾ ಸಿಂಗಾರಿ ಮೇಳಮ್, ತಿರಾಯಾಟ್ಟಮ್, ಸಿಂಗಾರಿ ಮೇಳ ಕಲಾತಂಡಗಳು ಭಾಗವಹಿಸಿತ್ತು. ಇದರೊಂದಿಗೆ ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಕಡೆಗಳ ಕಲಾತಂಡ ಭಜನಾ ತಂಡಗಳು ಪಾಲ್ಗೊಂಡಿತ್ತು, , ಮಹಿಳೆಯರಿಂದ ವೇದಘೋಷ, ಚೆಂಡೆ ಮೇಳ, ವಾದ್ಯಘೋಷ, […]