ದುಡಿಮೆಯ ಒಂದು ಭಾಗ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬಳಸಿ : ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದಂಗಳವರು | ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ ಕಾರ್ಯಕ್ರಮ
ಪುತ್ತೂರು: ಹಿಂದೂ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರ ಮಾಡಬೇಕಾದ್ದು ನಮ್ಮ ಕರ್ತವ್ಯವಾಗಿದ್ದು, ಇದಕ್ಕಾಗಿ ನಮ್ಮ ದುಡಿಮೆಯ ಒಂದು ಭಾಗವನ್ನು ಅರ್ಪಣೆ ಮಾಡಬೇಕು. ಹೀಗಾದಲ್ಲಿ ದೇವಸ್ಥಾನಗಳಿಗೆ ಚೈತನ್ಯ ಬರುವ ಜತೆಗೆ ನಮ್ಮ ಜೀವನವೂ ನೆಮ್ಮದಿಯಿಂದಿರಲು ಸಾಧ್ಯ ಎಂದು ಮಂಗಳೂರು ಕುಳಾಯಿ ಚಿತ್ರಾಪುರ ಮಠದ ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು. ಅವರು ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪಳೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು. 800 ವರ್ಷ ಇತಿಹಾಸ ಇರುವ […]










