ಧಾರ್ಮಿಕ

ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ವಾರ್ಷಿಕೋತ್ಸವ | ಶ್ರೀ ಸತ್ಯದತ್ತ ವೃತ ಪೂಜೆ

ಪುತ್ತೂರು : ಮನುಷ್ಯನಿಗೆ ಬದುಕಿನ ತಳಪಾಯ ಧರ್ಮ. ಅನುಷ್ಠಾನದಿಂದ ಮಾತ್ರ ಧರ್ಮದ ಸಂರಕ್ಷಣೆ ಸಾಧ್ಯ. ಧರ್ಮ ರಕ್ಷಣೆಯಾಗದಿದ್ದಲ್ಲಿ ಸಮಾಜದಲ್ಲಿ ದ್ವೇಷ ಹುಟ್ಟಿಕೊಳ್ಳುತ್ತದೆ. ಇದಕ್ಕೆ ಧರ್ಮ ಪ್ರಜ್ಞೆಯ ಕೊರತೆ ಕಾರಣ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಗುಣಾತ್ಮಕ ವಿಷಯ ನಂಬಬೇಕಾದ ಅಗತ್ಯವಿದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಮಂಗಳವಾರ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಶ್ರೀ ವಜ್ರಮಾತಾ ಮಹಿಳಾ ಮಂಡಳಿ, ಒಡಿಯೂರು ಶ್ರೀ ವಿವಿಧೋದ್ಧೇಶ ಸಹಕಾರ ಸಂಘದ ಆಶ್ರಯದಲ್ಲಿ […]

ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ವಾರ್ಷಿಕೋತ್ಸವ | ಶ್ರೀ ಸತ್ಯದತ್ತ ವೃತ ಪೂಜೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಅನಾವರಣ

ಕಾಣಿಯೂರು: ಶ್ರೀ ಕ್ಷೇತ್ರ ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಜೂ.4 ರಂದು ನಡೆಯಿತು. ಜೂ 10ರಂದು  ಶ್ರೀ ಕ್ಷೇತ್ರದಲ್ಲಿ ಶಿ ಲಾನ್ಯಾಸ ಕಾರ್ಯಕ್ರಮದ ನಡೆಯಲಿದ್ದು,. ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಅನಾವರಣ Read More »

ಜೂ.10 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ

ಪುತ್ತೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಜೂ.10 ರಂದು ನಡೆಯಲಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನ ಶಿಥಿಲಾವಸ್ಥೆಯಲ್ಲಿದ್ದು, ಜೀರ್ಣೋದ್ಧಾರಗೊಳಿಸು ಸಂಕಲ್ಪವನ್ನು ಈಗಾಗಲೇ ಮಾಡಲಾಗಿದ್ದು., ಜೂ.10 ರಂದು ಬೆಳಿಗ್ಗೆ 6.58 ರ ಮುಹೂರ್ತದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಶಿಲಾನ್ಯಾಸಕ್ಕೆ ಚಾಲನೆ ನೀಡಲಾಗುವುದು. ಈ ದೇವಸ್ಥಾನವು ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕಾರಣಿಕ ತೀರ್ಥ ಕ್ಷೇತ್ರವಾಗಿದೆ.

ಜೂ.10 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ Read More »

ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆವರಣ ಗೋಡೆ ಕುಸಿತ

ಸವಣೂರು: ಬುಧವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆವರಣ ಗೋಡೆ ಕುಸಿದು ಬಿದ್ದಿದೆ. ಕಳೆದ  ಜಾತ್ರೋತ್ಸವ ಸಮಯದಲ್ಲಿ ದೇವಸ್ಥಾನಕ್ಕೆ ಆವರಣಗೋಡೆ ನಿರ್ಮಿಸಲಾಗಿತ್ತು. ಇದೀಗ ಮಳೆಯಿಂದಾಗಿ ಆವರಣ ಗೋಡೆ ಕುಸಿದು ಬಿದ್ದಿದೆ. ಆವರಣ ಗೋಡೆ ಕುಸಿತದಿಂದ ಹಾನಿ ಸಂಭವಿಸಿದೆ.

ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆವರಣ ಗೋಡೆ ಕುಸಿತ Read More »

ಜೂನ್ 11-13: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ, ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪುತ್ತೂರು: ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಜೂನ್ 11ರಿಂದ 13ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಜೂನ್ 11ರಂದು ಬೆಳಿಗ್ಗೆ 10.30ಕ್ಕೆ ಹೊರೆಕಾಣಿಕೆ ಸಂಗ್ರಹ, ಸಂಜೆ 4.30ಕ್ಕೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಿಂದ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಮತ್ತು ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಸಂಜೆ 5ಕ್ಕೆ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ, 5.30ರಿಂದ ಪ್ರಾಸಾದ ಪರಿಗ್ರಹ, ಪ್ರಾರ್ಥನೆ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ,

ಜೂನ್ 11-13: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ, ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಧರ್ಮಸ್ಥಳದ ಜನಮಂಗಳ ಯೋಜನೆಯಡಿ ವೀಲ್ ಚೇರ್ ಕೊಡುಗೆ

ಪುತ್ತೂರು: ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಆರ್ಯಾಪು ಗ್ರಾಮದ ಕೋಟ್ಲಾರು ನಿವಾಸಿ ಚನಿಯಪ್ಪ ನಾಯ್ಕ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ನೀಡಲಾಯಿತು. ತಾಲೂಕು ಯೋಜನಾಧಿಕಾರಿ ಶಶಿಧರ್ ವೀಲ್ ಚೇರ್ ವಿತರಿಸಿದರು. ಸೇವಾಪ್ರತಿನಿಧಿ ಆಶಾಲತಾ, ಶೌರ್ಯ ಘಟಕದ ಬಲ್ನಾಡು ಪ್ರತಿನಿಧಿ ವಿನಯ ನಾಯ್ಕ ಮತ್ತು ಮನೆಯವರು ಉಪಸ್ಥಿತರಿದ್ದರು.

ಧರ್ಮಸ್ಥಳದ ಜನಮಂಗಳ ಯೋಜನೆಯಡಿ ವೀಲ್ ಚೇರ್ ಕೊಡುಗೆ Read More »

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ

ಕಡಬ: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜೂ ೧೧ರಿಂದ ಜೂ ೧೩ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಕ್ಷೇತ್ರದಲ್ಲಿ ಸುದರ್ಶನ ಹೋಮ ಹಾಗೂ ಉಚ್ಚಾಟನ ಹೋಮ  ನಡೆಯಿತು. ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬಳ್ಳುಕ್ಕುರಾಯ ಇವರ ನೇತೃತ್ವದಲ್ಲಿ ವೈದಿಕ ವಿಧಿವಿಧಾನ ನೆರವೇರಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಆಡಳಿತ ಮೊಕ್ತೇಸರ

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ Read More »

ಪುರಾತನ ದೇವಳದ ಗರ್ಭಗುಡಿಯೊಳಗೆ ರಕ್ತ, ಮಾಂಸದ ಕೋಡಿ | ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

ಚಿಕ್ಕಬಳ್ಳಾಪುರ: ಪುರಾತನ ದೇವಾಲಯದ ಒಳಗಡೆ ರಕ್ತ ಹಾಗೂ ಮಾಂಸ ಹಾಕಿ, ಅಪವಿತ್ರಗೊಳಿಸಿದ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಿಂದ ವರದಿಯಾಗಿದೆ. ರಕ್ತದ ಕೋಡಿ ದೇವರ ಮೂರ್ತಿಯ ಪಾದದವರೆಗೂ ಚೆಲ್ಲಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಬ್ಯಾಟರಾಯ ಸ್ವಾಮಿ ದೇವಸ್ಥಾನದ ಕಿಟಕಿಯಿಂದ ರಕ್ತ, ಮಾಂಸವನ್ನು ಚೆಲ್ಲಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ, ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪುರಾತನ ದೇವಳದ ಗರ್ಭಗುಡಿಯೊಳಗೆ ರಕ್ತ, ಮಾಂಸದ ಕೋಡಿ | ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ Read More »

ಮೇ 27 – ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ, ಧಾರ್ಮಿಕ ಸಭೆ

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್, ಸ್ವಸಹಾಯ ಸಂಘಗಳ ಒಕ್ಕೂಟ ಬೆಳಂದೂರು ಇದರ ಆಶ್ರಯದಲ್ಲಿ ಶ್ರೀ ಸದಾಶಿವ ದೇವಸ್ಥಾನ ಅಗಳಿ ಇದರ ಸಹಕಾರದೊಂದಿಗೆ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮವು ಮೇ 27ರಂದು ಅಗಳಿ ಶ್ರೀ ಸದಾಶಿವ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ ಶ್ರೀ ಕಲ್ಪೋಕ್ತ ಶನೈಶ್ಚರ ಪೂಜೆ, ಮಹಾಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬೆಳಿಗ್ಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಗಳಿ ಶ್ರೀ ಸದಾಶಿವ

ಮೇ 27 – ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ, ಧಾರ್ಮಿಕ ಸಭೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ನಿತ್ಯ ಉತ್ಸವಕ್ಕೆ ತೆರೆ

ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಶ್ರೀ ದೇವರ ಪತ್ತನಾಜೆ ಬಲಿ ಉತ್ಸವ ನಡೆದ ಬಳಿಕ ಒಳಾಂಗಣ ಪ್ರವೇಶಿಸುವುದರೊಂದಿಗೆ ಗುರುವಾರ ಸಂಪನ್ನಗೊಂಡಿತು. ಶುದ್ಧ ಷಷ್ಠಿಯ ದಿನವಾದ ಗುರುವಾರ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ಶ್ರೀ ದೇವರು ಒಳಾಂಗಣ ಪ್ರವೇಶಿಸಿದರು. ಕುಕ್ಕೆಯಲ್ಲಿ ಮಾತ್ರ ದೀಪಾವಳಿ ಅಮವಾಸ್ಯೆಯಂದು ಉತ್ಸವ ಆರಂಭವಾಗಿ ಜೇಷ್ಠ ಶುದ್ಧಷಷ್ಠಿಯಂದು ಕೊನೆಯ ಉತ್ಸವವು ನಡೆಯುತ್ತದೆ. ಈ ಬಾರಿ ಜೇಷ್ಠ ಶುದ್ಧಷಷ್ಠಿಯ  ದಿನವಾದ  ಗುರುವಾರ ರಾತ್ರಿ ಮಹಾಪೂಜೆಯ ಬಳಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ನಿತ್ಯ ಉತ್ಸವಕ್ಕೆ ತೆರೆ Read More »

error: Content is protected !!
Scroll to Top