ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಶ್ರೇಯೋಭಿವೃದ್ಧಿಗೆ ಕುಂಟಾರು ರವೀಶ ತಂತ್ರಿಗಳಿಂದ ವಿಶೇಷ ಪ್ರಾರ್ಥನೆ
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಗೆಲುವು, ಶ್ರೇಯೋಭಿವೃದ್ಧಿಗಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿ ಕುಂಟಾರು ಶ್ರೀ ರವೀಶ ತಂತ್ರಿಗಳು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದರು. ವಿಶೇಷ ಪ್ರಾರ್ಥನೆ ಸಲ್ಲಿಸಿದ ತಂತ್ರಿಗಳು ಬಳಿಕ ಆಶಾ ತಿಮ್ಮಪ್ಪ ಅವರಿಗೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ […]










