ಧಾರ್ಮಿಕ

ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದ ಆಶಾ ತಿಮ್ಮಪ್ಪ

ಪುತ್ತೂರು: ಮುಡಿಪು ಬಳಿಯ ಕಟ್ಟೆಮಾರು ಪೆದಮಲೆಗೆ ಆಗಮಿಸಿದ್ದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು. ಆಶಾ ತಿಮ್ಮಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಪೆದಮಲೆ ನಾಗರಾಜ ಭಟ್ಟರ ಮನೆಯಲ್ಲಿ ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದರು. ಇದೇ ಸಂದರ್ಭ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಜಿ.ಪಂ. ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉಪಸ್ಥಿತರಿದ್ದರು.

ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದ ಆಶಾ ತಿಮ್ಮಪ್ಪ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ | ಅಷ್ಟಾವಧಾನ ಸೇವೆ | ಪೇಟೆ ಸವಾರಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಕೆಎಸ್‍ಆರ್‍ ಟಿಸಿ ಪುತ್ತೂರು ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಗಳ ವತಿಯಿಂದ ಅನ್ನಸಂತರ್ಪಣೆ ಜರಗಿತು. ಅಷ್ಟಾವಧಾನ ಸೇವೆ : ಜಾತ್ರೋತ್ಸವದ ಅಂಗವಾಗಿ ಶಿವನಿಗೆ ಇಷ್ಟವಾದ ಅಷ್ಟಾವಧಾನ ಸೇವೆ ಮಂಗಳವಾರ ರಾತ್ರಿ ನಡೆಯಿತು. ಋಗ್ವೇದ, ಯಜುರ್ವೇದ, ಸಾಮದೇದ, ಅಥರ್ವವೇದ, ಶಾಸ್ತ್ರಾ, ಪುರಾಣ, ಶಂಖನಾದ, ಪಂಚಾಂಗ, ಅಷ್ಟಕ, ಸಂಗೀತ, ವೀಣೆ, ನೃತ್ಯ, ಯಕ್ಷಗಾನ, ಗಾಯನ, ರುದ್ರವಾದ್ಯ, ವೀಣೆ, ಸ್ಯಾಕ್ಸೋಫೋನ್ ಮುಂತಾದ ಸರ್ವ ವಾದ್ಯಗಳ ಮೇಳೈಸುವಿಕೆಯೊಂದಿಗೆ ಅಷ್ಟಾವಧಾನ ಸೇವೆ ಜರಗಿತು. ಬಳಿಕ  ದೇವರ ಬಲಿ ಹೊರಟು ಉತ್ಸವ, ದೇವಸ್ಥಾನದ ವಠಾರದ ಕಟ್ಟೆಯಲ್ಲಿ ಪೂಜೆಗೊಂಡು ಬಳಿಕ ಶ್ರೀ ದೇವರು ನೆಲ್ಲಿಕಟ್ಟೆ, ಸಾಲ್ಮರ, ಸೂತ್ರಬೆಟ್ಟು ಸವಾರಿ ಮಾಡಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ | ಅಷ್ಟಾವಧಾನ ಸೇವೆ | ಪೇಟೆ ಸವಾರಿ Read More »

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಆಶಾ ತಿಮ್ಮಪ್ಪ | ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಿಗೇ ಪುತ್ತೂರು ಭೇಟಿ

ಪುತ್ತೂರು: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ಪುತ್ತೂರು ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಆಶಾ ತಿಮ್ಮಪ್ಪ ಅವರು ಬುಧವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜಾತ್ರಾ ಸಂಭ್ರಮದಲ್ಲಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ತಮ್ಮ ದಿನಚರಿಗೆ ಚಾಲನೆ ನೀಡಿದರು. ದೇವಸ್ಥಾನದಿಂದ ಪುತ್ತೂರು ಬಿಜೆಪಿ ಪಕ್ಷದ ಕಚೇರಿಗೆ ತೆರಳಿದರು.

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಆಶಾ ತಿಮ್ಮಪ್ಪ | ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಿಗೇ ಪುತ್ತೂರು ಭೇಟಿ Read More »

ಶ್ರೀ ಮಹಾಲಿಂಗೇಶ್ವರ ದೇವರ ಬಸವನ ಕೃತಜ್ಞತೆ

ಪುತ್ತೂರು: ಅನಾರೋಗ್ಯದ ವೇಳೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರನ್ನು ಗುರುತಿಸಿದ ಬಸವ, ಕೃತಜ್ಞತೆ ತೋರಿದ ಭಾವುಕ ಘಟನೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಸೋಮವಾರ ರಾತ್ರಿ ನಡೆಯಿತು. ಸೋಮವಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಆರಂಭವಾಗಿದೆ. ದೇವರ ಉತ್ಸವ, ಸವಾರಿ ಸಂದರ್ಭ ಮುಂಭಾಗದಿಂದ ದೇವರ ಬಸವ ಸಾಗುತ್ತದೆ. ಹೀಗೆ ಸಾಗುವಾಗ ದಾರಿ ಮಧ್ಯೆ ಎದುರಾದ ಪುತ್ತೂರು ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪ್ರಸನ್ನ ಕುಮಾರ್ ಹೆಬ್ಬಾರ್ ಅವರನ್ನು ಗುರುತಿಸಿ, ಕೃತಜ್ಞತಾ ಭಾವದಿಂದ ಪ್ರೀತಿ ತೋರಿಸಿತು.

ಶ್ರೀ ಮಹಾಲಿಂಗೇಶ್ವರ ದೇವರ ಬಸವನ ಕೃತಜ್ಞತೆ Read More »

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ : ಅಭಿನಂದನಾ ಸಭೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ, ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಲೆಕ್ಕಪತ್ರ ಮಂಡನೆ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದ ಕಾರ್ಯಕರ್ತ ಬಂಧುಗಳಿಗೆ ಅಭಿನಂದನಾ ಸಭೆ ನಡೆಯಿತು. ಕೋಶಾಧಿಕಾರಿ ನವೀನ್ ರೈ ಶಿಬಿರ ಬ್ರಹ್ಮಕಲಶೋತ್ಸವದ ಲೆಕ್ಕ ಪತ್ರ ಮಂಡಿಸಿದರು. ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಸದಸ್ಯ ಸುಜಯ ತಂತ್ರಿ ಅಭಿನಂದನಾ ಮಾತುಗಳನ್ನಾಡಿ, ಕಾರ್ಯಕರ್ತರ ಉತ್ತಮ ಸಂಘಟನೆ, ನಿಷ್ಠೆಯ ಶ್ರಮ, ಉತ್ತಮ ಬಾಂಧವ್ಯತೆಯಿಂದಾಗಿ ಕ್ಷೇತ್ರದಲ್ಲಿ ಏಳು ದಿನಗಳ ಕಾಲ ನಡೆದ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನೆರವೇರುವಲ್ಲಿ

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ : ಅಭಿನಂದನಾ ಸಭೆ Read More »

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ ಹಾಗೂ ವರ್ಷಾವಧಿ ನೇಮ ನಡಾವಳಿ ಕುರಿತು ಪೂರ್ವಭಾವಿ ಸಭೆ ದೈವಸ್ಥಾನದ ಸಭಾಭವನದಲ್ಲಿ ನಡೆಯಿತು. ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ ಅಧ್ಯಕ್ಷತೆ ವಹಿಸಿ, ಏ.16 ರಂದು ಸಲು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮಿಸಲಿದ್ದು,ಈ ನಿಟ್ಟಿನಲ್ಲಿ ಈ ಬಾರಿ ಬೆಳಗ್ಗೆಯಿಂದಲೇ ಹೂ ಅರ್ಪಿಸಿ ಪ್ರಸಾದ ಪಡೆದುಕೊಳ್ಳಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿದೆ. ಭಂಡಾರ ಸಂಜೆ ಆಗಮಿಸಿದ ಬಳಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪೂರ್ವಭಾವಿ ಸಭೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಆರಂಭ | ಬಲಿ ಉತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಆರಂಭಗೊಂಡಿದ್ದು, ಉತ್ಸವದ ಅಂಗವಾಗಿ ಸೋಮವಾರ ಸಂಜೆ ಶ್ರೀ ದೇವರ ಬಲಿ ಉತ್ಸವ ನಡೆಯಿತು. ಬಳಿಕ ದೇವಸ್ಥಾನದ ವಠಾರದಲ್ಲಿರುವ ಕಟ್ಟೆಯಲ್ಲಿ ಪೂಜೆ ನಡೆಯಿತು. ಭಕ್ತಾದಿಗಳು ಸೇವಾ ಪೂಜೆ ಮಾಡಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರು ಬೊಳುವಾರು, ಶ್ರೀರಾಮ ಪೇಟೆ, ಕಾರ್ಜಾಲು, ರಕ್ತೇಶ್ವರ ನಗರ, ಕಲ್ಲೇಗ ಪೇಟೆ ಸವಾರಿಗೆ ತೆರಳಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಆರಂಭ | ಬಲಿ ಉತ್ಸವ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣದ ಮೂಲಕ ಚಾಲನೆ | ಇತಿಹಾಸದಲ್ಲಿ ಪ್ರಥಮ ಬಾರಿಗೆ ಶ್ರೀ ವರುಣ ದೇವರ ಪೂಜೆಯೊಂದಿಗೆ ಜಾತ್ರೆ ಆರಂಭ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಸೋಮವಾರ ಬೆಳಿಗ್ಗೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಂಟೆ 9.25 ರ ನಂತರದ ವೃಷಭ ಲಗ್ನ ಸುಮುಹೂರ್ತದಲ್ಲಿ ಭಕ್ತಾದಿಗಳ ಜಯ ಘೋಷದೊಂದಿಗೆ ಧ್ವಜಾರೋಹಣ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ವಿವಿಧ ವೈದಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಸೋಮವಾರ ಮುಂಜಾನೆಯಿಂದಲೇ ಸೀಮೆಯ ಭಕ್ತಾದಿಗಳು ಫಲಪುಷ್ಪ, ಸೀಯಾಳ, ವಿವಿಧ ಹಸಿರುವಾಣಿಯನ್ನು ಶ್ರೀ ದೇವಸ್ಥಾನಕ್ಕೆ ಒತ್ತಾಯಿಸಿದರು. ಬಳಿಕ ಧ್ವಜಸ್ತಂಭದ ಕಟ್ಟೆಗೆ ಹಸಿರುವಾಣಿಯನ್ನು ಕಟ್ಟಿ ಶೃಂಗರಿಸಲಾಯಿತು. ಮಧ್ಯಾಹ್ನ ಮಹಾಪೂಜೆ

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣದ ಮೂಲಕ ಚಾಲನೆ | ಇತಿಹಾಸದಲ್ಲಿ ಪ್ರಥಮ ಬಾರಿಗೆ ಶ್ರೀ ವರುಣ ದೇವರ ಪೂಜೆಯೊಂದಿಗೆ ಜಾತ್ರೆ ಆರಂಭ Read More »

ಪುತ್ತೂರು ಮಾಯಿದೇ ದೆವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ.

ಪುತ್ತೂರು: ಪುತ್ತೂರಿನ ಮಾಯಿದೆ ದೇವುಸ್ ಚರ್ಚಿನಲ್ಲಿ ಯೇಸಕ್ರಿಸ್ತನ ಪುನರ್ಜನ್ಮವನ್ನು ಸಾರುವ ಈಸ್ಟರ್ ಹಬ್ಬವನ್ನು ಶನಿವಾರ ರಾತ್ರಿ ಆಚರಿಸಲಾಯಿತು. ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು ದೊಡ್ಡ ಮೇಣದ ಬತ್ತಿಗೆ ಯೇಸುವನ್ನು ಶಿಲುಬೆಗೆ ಏರಿಸಿದಾಗ ಹೊಡೆದಿರುವoತಹ ಮೊಳೆಗಳನ್ನು ಚುಚ್ಚಲಾಗುತ್ತದೆ. ತದನಂತರ ಆಶೀರ್ವದಿಸಿದ ಹೊಸ ಬೆಂಕಿಯಿಂದ ಮೇಣದ ಬತ್ತಿಯನ್ನು ಹೊತ್ತಿಸಲಾಗುತ್ತದೆ. ಈ ಮೇಣದ ಬತ್ತಿಯನ್ನು ಹಿಡಿದ ಯಾಜಕರು ಜನರ ನಡುವಿನಿಂದ ಹೋಗುವಾಗ ಇದು ಯೇಸಕ್ರಿಸ್ತರ ಜ್ಯೋತಿಯು ಎಂದು ಉದ್ಗರಿಸಿದಾಗ ಎಲ್ಲಾ ಭಕ್ತಾದಿಗಳು ದೇವರಿಗೆ ಮಹಿಮೆ ಸಲ್ಲಲ್ಲಿ

ಪುತ್ತೂರು ಮಾಯಿದೇ ದೆವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ. Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸ್ವಚ್ಛತಾ ಕಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ “ಸ್ವಚ್ಛ ಜಾತ್ರೆ ಸ್ವಚ್ಛ ಪುತ್ತೂರು” ಎಂಬ ಕಲ್ಪನೆಯೊಂದಿಗೆ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಭಕ್ತಾದಿಗಳೊಂದಿಗೆ ಮೂರು ಬಾರಿ ಓಂಕಾರ ಹೇಳಿ ತೆಂಗಿನಕಾಯಿ ಒಡೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ವಚ್ಛತೆ ಎಲ್ಲಿ ಇರುತ್ತದೋ ಅಲ್ಲಿ ದೇವರು ಇರುತ್ತಾರೆ. ಸ್ವಚ್ಛತಾ ಮನೋಭಾವದಿಂದ ದೇವಸ್ಥಾನದ ವಠಾರವನ್ನು ನಾವೆಲ್ಲರೂ ಸೇರಿಕೊಂಡು ಮುತುವರ್ಜಿ ವಹಿಸಿ ಕೆಲಸ ಮಾಡಿದರೆ

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸ್ವಚ್ಛತಾ ಕಾರ್ಯ Read More »

error: Content is protected !!
Scroll to Top