ಧಾರ್ಮಿಕ

ಜ. 21ರಿಂದ 23: ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ಜಾತ್ರೆ, ನೂತನ ರಥ ಸಮರ್ಪಣೆ

ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ನೂತನ ರಥ ಸಮರ್ಪಣೆ, 108 ತೆಂಗಿನಕಾಯಿ ಮಹಾಗಣಪತಿ ಹೋಮ ಜ. 20ರಿಂದ 23ರವರೆಗೆ ನಡೆಯಲಿದೆ.ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಜ. 14ರಂದು ಗೊನೆ ಮುಹೂರ್ತ ನಡೆದಿದ್ದು, 15ರಂದು ನೂತನ ರಥ ಆಗಮಿಸಿದೆ. ಜ. 21ರಂದು ಬೆಳಿಗ್ಗೆ 7.30ಕ್ಕೆ ದೇವತಾ ಪ್ರಾರ್ಥನೆ ನಡೆದು, 8ರಿಂದ 108 ತೆಂಗಿನಕಾಯಿ ಮಹಾಗಣಪತಿ ಹೋಮ, ನಾಗನಕಟ್ಟೆಯಲ್ಲಿ ಕಲಶಾಭಿಷೇಕ, ತಂಬಿಲ ಸೇವೆ, […]

ಜ. 21ರಿಂದ 23: ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ಜಾತ್ರೆ, ನೂತನ ರಥ ಸಮರ್ಪಣೆ Read More »

ಕದ್ರಿ ದೇವಸ್ಥಾನದಲ್ಲೂ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಬ್ಯಾನರ್‌

ದೇವಸ್ಥಾನದ ಆಡಳಿತ ಮಂಡಳಿಯಿಂದ ಬ್ಯಾನರ್‌ ತೆರವು ಮಂಗಳೂರು : ಕರಾವಳಿಯಲ್ಲಿ ಅನ್ಯ ಧರ್ಮೀಯರಿಗೆ ಹಿಂದುಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲಿಕ್ಕೆ ಅವಕಾಶ ಕೊಡುತ್ತಿರುವುದಕ್ಕೆ ಪ್ರತಿರೋಧ ಮುಂದುವರಿದಿದೆ. ಇತ್ತೀಚೆಗೆ ಮಂಗಳರಿನ ಕಾವೂರು ಜಾತ್ರೆ ಸಂದರ್ಭದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬ್ಯಾನರ್ ಅಳವಡಿಕೆಯಾಗಿತ್ತು. ಇದೀಗ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲೂ ಇದೇ ರೀತಿಯ ಬ್ಯಾನರ್ ಹಾಕಲಾಗಿದೆ. ಆದರೆ ಬ್ಯಾನರ್ ಅಳವಡಿಸಿದ ಕೆಲವೇ ಗಂಟೆಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಬ್ಯಾನರನ್ನು ತೆರವುಗೊಳಿಸಿದೆ.ಕದ್ರಿ ದೇವಸ್ಥಾನದಲ್ಲಿ ಜ.15ರಿಂದ ಜ.25ರವರೆಗೆ ವಾರ್ಷಿಕ ಜಾತ್ರೆ ನಡೆಯುತ್ತಿದ್ದು, ವಿಶ್ವ

ಕದ್ರಿ ದೇವಸ್ಥಾನದಲ್ಲೂ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಬ್ಯಾನರ್‌ Read More »

ಫೆ. 8ರಿಂದ 10ರವರೆಗೆ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ: ಆಮಂತ್ರಣ ಬಿಡುಗಡೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಫೆ. 8ರಿಂದ 10ರತನಕ ನಡೆಯುವ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆಯ ಆಮಂತ್ರಣ ಪತ್ರ ಬಿಡುಗಡೆ ಮತ್ತು ಜೀರ್ಣೋದ್ಧಾರ ಸಮಿತಿ ಸಭೆ ಬುಧವಾರ ರಾತ್ರಿ ನಡೆಯಿತು. ಬೂಡಿಯಾರ್ ರಾಧಾಕೃಷ್ಣ ರೈ ಅಧ್ಯಕ್ಷತೆಯಲ್ಲಿ ಗ್ರಾಮದ ವಿವಿಧ ಭಾಗದ ಬೈಲ್ವಾರ್ ಸಮಿತಿಯ ಸಭೆ ನಡೆಸಲು ಜವಾಬ್ದಾರಿ ನೀಡಲಾಯಿತು. ಫೆ. 10ರಂದು ಬಾಲಾಲಯ ಪ್ರತಿಷ್ಠೆ ಬಳಿಕ ನಡೆಯುವ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಜೀರ್ಣೋದ್ಧಾರ ಕಾರ್ಯಕ್ಕೆ ಸರ್ವ

ಫೆ. 8ರಿಂದ 10ರವರೆಗೆ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ: ಆಮಂತ್ರಣ ಬಿಡುಗಡೆ Read More »

ಸಂಪ್ಯ ಜಾತ್ರೆಗೆ ಗೊನೆ ಮುಹೂರ್ತ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೆ ಪ್ರಯುಕ್ತ ಜ. 19ರಂದು ಗೊನೆ ಮಹೂರ್ತ ನೆರವೇರಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಪುತ್ತೂರಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಭೀಮಯ್ಯ ಭಟ್, ಸಮಿತಿ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು

ಸಂಪ್ಯ ಜಾತ್ರೆಗೆ ಗೊನೆ ಮುಹೂರ್ತ Read More »

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಆಮಂತ್ರಣವನ್ನು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಸಂಸ್ಮರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಅವರು ಸಂಸ್ಥಾನದಲ್ಲಿ ನೀಡಿದರು. ಜ. ೨೨ರಂದು ನಡೆಯುವ ಕಾರ್ಯಕ್ರಮಕ್ಕೆ ಮೊದಲನೆ ದಿನ ಆಗಮಿಸಲಿರುವ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ. ಮರುದಿನ ಬೆಳಗ್ಗೆಯಿಂದಲೇ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ. ಸಂಸ್ನರಣಾ

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣ Read More »

ಕುಂಜೂರು ದೇವಸ್ಥಾನದಲ್ಲಿ ಶ್ರದ್ದಾ ಕೇಂದ್ರ ಸ್ವಚ್ಛತಾ  ಕಾರ್ಯಕ್ರಮ

ಪುತ್ತೂರು: ಕುಂಜೂರು ಶ್ರೀ  ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕುಂಜೂರು ಪಂಜ  ಒಕ್ಕೂಟದ  ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ  ಕಾರ್ಯಕ್ರಮ ನಡೆಯಿತು. ವಲಯ  ಮೇಲ್ವಿಚಾರಕ ಹರೀಶ್ ಕುಲಾಲ್ ಹಾಗೂ ಒಕ್ಕೂಟದ  ಅಧ್ಯಕ್ಷ ಮಹಾಲಿಂಗ ನಾಯ್ಕ ಅವರ  ಸಹಕಾರದೊಂದಿಗೆ  ಸ್ವಚ್ಛತೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನ  ಸಮಿತಿ  ಅಧ್ಯಕ್ಷ ಪ್ರದೀಪ್ ಕೃಷ್ಣ  ಭಟ್, ವ್ಯವಸ್ಥಾಪನ  ಸಮಿತಿ  ಸದಸ್ಯರು  ಉಪಸ್ಥಿತರಿದ್ದರು, ಸೇವಾಪ್ರತಿನಿಧಿ ಆಶಾ, ಒಕ್ಕೂಟದ  ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು.

ಕುಂಜೂರು ದೇವಸ್ಥಾನದಲ್ಲಿ ಶ್ರದ್ದಾ ಕೇಂದ್ರ ಸ್ವಚ್ಛತಾ  ಕಾರ್ಯಕ್ರಮ Read More »

ಪುರುಷರಕಟ್ಟೆ: ಜ. 28ರಂದು ಸಾರ್ವಜನಿಕ ಶ್ರೀ ದುರ್ಗಾ ಪೂಜೆ

ಪುತ್ತೂರು: ಪುರುಷರಕಟ್ಟೆ ಹಿಂದು ಜಾಗರಣ ವೇದಿಕೆ ಶಿವಾಜಿ ಶಾಖೆಯ ಆಶ್ರಯದಲ್ಲಿ ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಮುಂಭಾಗ ಸಾರ್ವಜನಿಕ ಶ್ರೀ ದುರ್ಗಾ ಪೂಜೆ ಮತ್ತು ಅನ್ನ ಸಂತರ್ಪಣೆ ಜ. 28ರಂದು ನಡೆಯಲಿದೆ. ಸಂಜೆ ಗಂಟೆ 6:30ಕ್ಕೆ ದುರ್ಗಾ ಪೂಜೆ ಆರಂಭಗೊಳ್ಳಲಿದ್ದು, ಬಳಿಕ ಪುರುಷರಕಟ್ಟೆ ದೇವಿನಗರ ವನದುರ್ಗಂಬಿಕಾ ಭಜನಾ ಮಂಡಳಿಯಿಂದ ಭಜನೆ, ರಾತ್ರಿ 7:30ಕ್ಕೆ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, 9.30ರಿಂದ ಪುತ್ತೂರು ವಿಶ್ವಕಲಾನಿಕೇತನ ಇನ್ ಸ್ಟಿಟ್ಯೂಷನ್  ಆಫ್ ಆರ್ಟ್ಸ್ ಆ್ಯಂಡ್ ಕಲ್ಚರಲ್ ಇವರಿಂದ ನೃತ್ಯ ವೈವಿಧ್ಯ

ಪುರುಷರಕಟ್ಟೆ: ಜ. 28ರಂದು ಸಾರ್ವಜನಿಕ ಶ್ರೀ ದುರ್ಗಾ ಪೂಜೆ Read More »

ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಬೃಹತ್ ಮಹಿಳಾ ಸಮಾವೇಶ

ಬೆಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಚುಂಚಾದ್ರಿ ಮಹಿಳಾ ಸಮಾವೇಶ ನಡೆಯಿತು. ಸಮಾರಂಭವನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಉದ್ಘಾಟಿಸಿ, ಆಶೀರ್ಚನ ನೀಡಿದರು. ಇದೇ ಸಂದರ್ಭ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದು, ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಯರನ್ನು ಸನ್ಮಾನಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಬೃಹತ್ ಮಹಿಳಾ ಸಮಾವೇಶ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಒಕ್ಕಲಿಗ ಸ್ವಸಹಾಯ ಸಂಘದ ಸದಸ್ಯರಿಗೆ ಸೀರೆ ಸಮವಸ್ತ್ರ

ಪುತ್ತೂರು: ಒಕ್ಕಲಿಗ ಸ್ವಸಹಾಯ ಸಂಘದ ಸುಮಾರು 5 ಸಾವಿರ ಮಹಿಳೆಯರು ಜ. 22ರಂದು ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದಲ್ಲಿ ಸಮವಸ್ತ್ರ ತೊಟ್ಟು, ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ. ಒಕ್ಕಲಿಗ ಸ್ವಸಹಾಯ ಸಂಘದಲ್ಲಿ ಸುಮಾರು 8 ಸಾವಿರ ಸದಸ್ಯರಿದ್ದು, ಇದರಲ್ಲಿ 5 ಸಾವಿರ ಮಂದಿ ಮಹಿಳೆಯರು. ಅವರಿಗೆ ಸಮವಸ್ತ್ರ ವಿತರಣೆ ಮಾಡಲಿದ್ದು, ಸಾಂಕೇತಿಕವಾಗಿ ಮಂಗಳವಾರ ಸಮಿತಿಯ ಕಾರ್ಯಾಲಯದಲ್ಲಿ ಸಮವಸ್ತ್ರ ವಿತರಿಸಲಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಒಕ್ಕಲಿಗ ಸ್ವಸಹಾಯ ಸಂಘದ ಸದಸ್ಯರಿಗೆ ಸೀರೆ ಸಮವಸ್ತ್ರ Read More »

ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ

ಪುತ್ತೂರು: 1979ರಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ದಕ್ಷಿಣ ಕನ್ನಡಕ್ಕೆ ಬಂದಿದ್ದರು. ಆಗ ಒಕ್ಕಲುತನ ಮಾಡುತ್ತಿದ್ದ ಮನೆಗಳಲ್ಲಿ ನಿಂತು, ಇಲ್ಲಿನ ಕೃಷಿ ಕಾರ್ಯದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದರು. ಸಂಘಟನೆಯ ಕಾರ್ಯಕ್ಕೂ ಚಾಲನೆ ನೀಡಿ, ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನ ನಿರ್ಮಾಣಕ್ಕೆ, ಕೊಂಬೆಟ್ಟು ಐಟಿಐ ನಿರ್ಮಾಣಕ್ಕೆ ಕಾರಣಕರ್ತರಾದರು. ಅವರ ಈ ಎಲ್ಲಾ ಕೆಲಸಗಳನ್ನು ನೆನಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಜ. 22ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ

ಜ. 22: ದಕ್ಷಿಣ ಕನ್ನಡದಲ್ಲಿ ಸಂಘಟನೆ ಮಾಡಿದ್ದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ Read More »

error: Content is protected !!
Scroll to Top