ಧಾರ್ಮಿಕ

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ತೆನೆ ಪೂಜೆ | ಸಭಾಭವನದ ಹಾಸು ಕಲ್ಲು ಉದ್ಘಾಟನೆ

ಕಾಣಿಯೂರು: ಕುದ್ಮಾರಿನ ಜನತೆಯ ಪ್ರೀತಿ, ಸಹಕಾರ ಶ್ಲಾಘನೀಯವಾಗಿದ್ದು ದೇವಸ್ಥಾನದ ಬ್ರಹ್ಮಕಲಶೋತ್ಸವವು ಎಲ್ಲರ ಸಹಕಾರದಿಂದ ಅತ್ಯಂತ ಸಂಭ್ರಮದಿಂದ ಯಶಸ್ವಿಯಾಗಿ ನಡೆದಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ ಹೇಳಿದರು. ಅವರು ಆ.27 ರಂದು ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದ ನೆಲಕ್ಕೆ ಅಳವಡಿಸಿದ ಹಾಸು ಕಲ್ಲನ್ನು ಉದ್ಘಾಟಿಸಿ ಮಾತನಾಡಿದರು. ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮಾತನಾಡಿ, ಶಾಂತಿಮೊಗರು ಕ್ಷೇತ್ರವು […]

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ತೆನೆ ಪೂಜೆ | ಸಭಾಭವನದ ಹಾಸು ಕಲ್ಲು ಉದ್ಘಾಟನೆ Read More »

ದಸರಾ ಆಚರಣೆಯ ವಿಷಯದಲ್ಲಿ ರಾಜಕೀಯ: ಪ್ರಮೋದಾ ದೇವಿ ಒಡೆಯರ್ ಬೇಸರ

ಮೈಸೂರು: ರಾಜ್ಯ ಸರ್ಕಾರ ಆಯೋಜಿಸಿರುವ ದಸರಾ ಮತ್ತು ಚಾಮುಂಡೇಶ್ವರಿ ದೇವಸ್ಥಾನದ ಸುತ್ತಮುತ್ತ ನಡೆದ ರಾಜಕೀಯ ತೀವ್ರ ಬೇಸರ ಮೂಡಿಸಿದೆ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಹೇಳಿದ್ದಾರೆ. ಈ ರೀತಿಯ ಬೆಳವಣಿಗೆ ಕಳವಳಕಾರಿಯಾಗಿದೆ. ಆದ್ದರಿಂದ ಪತ್ರ ಬರೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ವರ್ಷದ ನಾಡಹಬ್ಬ (ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆ ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎಂಬಂತಹ ಸಂವೇದನಾರಹಿತ ಹೇಳಿಕೆ ಅನಗತ್ಯವಾಗಿತ್ತು. ಅದು ಹಿಂದೂ ದೇವಸ್ಥಾನ ಅಲ್ಲದಿದ್ದರೆ, ಅದನ್ನು ಎಂದಿಗೂ

ದಸರಾ ಆಚರಣೆಯ ವಿಷಯದಲ್ಲಿ ರಾಜಕೀಯ: ಪ್ರಮೋದಾ ದೇವಿ ಒಡೆಯರ್ ಬೇಸರ Read More »

ಪೆರಿಯಡ್ಕ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ನ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ ಎರಡನೇ ಹಂತದ ಜಿಲ್ಲಾಮಟ್ಟದ ತಂಡಗಳ ತಾಳಮದ್ದಳೆಯು ಪೆರಿಯಡ್ಕದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಜರಗಿತು. ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅಧ್ಯಕ್ಷ ಪ್ರಸನ್ನ ಕುಮಾರ್ ಪೆರಿಯಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕಾಳಿಕಾಂಬ ಯಕ್ಷ ಕಲಾಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಕೃಷ್ಣಾಷ್ಟಮಿ ಸಮಿತಿ ಅಧ್ಯಕ್ಷ ಸುರೇಶ ಅತ್ರಮಜಲು,

ಪೆರಿಯಡ್ಕ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ Read More »

ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದಲ್ಲಿ ಏಳು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು: ಶ್ರೀ ದೇವತಾ ಸಮಿತಿ ವತಿಯಿಂದ 68ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಬುಧವಾರ ಕಿಲ್ಲೇ ಮೈದಾನದಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ 11 ಗಂಟೆಗೆ ಕೋರ್ಟಿರೋಡಿನಲ್ಲಿರುವ ವಿಶ್ವ ಸಂಕೀರ್ಣದಿಂದ ಶ್ರೀ ಗಣಪತಿಯ ವಿಗ್ರಹ ಮೆರವಣಿಗೆ ಮೂಲಕ ಹೊರಟು ಕಿಲ್ಲೇ ಮೈದಾನಕ್ಕೆ ತೆರಳಿ ಅಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಮಧ್ಯಾಹ್ನ  ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಸೆ.2 ರ ತನಕ ಏಳು ದಿನಗಳ ಕಾಲ ಶ್ರೀ ಗಣೇಶೋತ್ಸವ ನಡೆಯಲಿದೆ.

ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದಲ್ಲಿ ಏಳು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣೇಶೋತ್ಸವ ಆಚರಣೆ | ಕಾರ್ಯಕ್ರಮಕ್ಕೆ ಮೆರುಗು ನೀಡಿದ ವಿದ್ಯಾರ್ಥಿ ರೂಪಿತ ಗಣೇಶ ವಿಗ್ರಹಗಳು

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣೇಶೋತ್ಸವ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಸ್ಥಳಶುದ್ಧಿ, ವಿಗ್ರಹ ಪ್ರತಿಷ್ಠಾಪನಾ ಕಾರ್ಯ ನಡೆದು, ಗಣಪತಿ ಹವನವೇ ಮೊದಲಾದ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡವು. ವಿದ್ಯಾರ್ಥಿಗಳಿಂದ ಭಜನೆ, ನಾಟ್ಯವೇ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿ ಮಧ್ಯಾಹ್ನ ನಂತರ ಶ್ರೀ ಮಹಾಗಣಪತಿ ವಿಗ್ರಹದ ವಿಸರ್ಜನಾ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳೂ ನೆರವೇರಿದವು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣೇಶೋತ್ಸವ ಆಚರಣೆ | ಕಾರ್ಯಕ್ರಮಕ್ಕೆ ಮೆರುಗು ನೀಡಿದ ವಿದ್ಯಾರ್ಥಿ ರೂಪಿತ ಗಣೇಶ ವಿಗ್ರಹಗಳು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ 59ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಬುಧವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ವೇ.ಮೂ.ಕುಂಟಾರು ರವೀಶ ತಂತ್ರಿಗಳಿಂದ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬಳಿಕ ಹಿರಿಯ ಸ್ವಯಂಸೇವಕ ಸೋಮನಾಥ ರಾವ್‍ ಅವರಿಂದ ಧ್ವಜಾರೋಹಣ ನೆರವೇರಿತು. ಮಧ್ಯಾಹ್ನ 11.30 ಕ್ಕೆ ಗಣಪತಿ ಹವನ, ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ

ಪುತ್ತೂರು: ತುಳುನಾಡಿನಲ್ಲಿ ಅತ್ಯಂತ ಮಹತ್ವವನ್ನು ಪಡೆದಿರುವ ಕದಿರು ವಿನಿಯೋಗ ಕಾರ್ಯಕ್ರಮ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಇದಕ್ಕೆ ಪೂರಕವಾಗಿ ಸೋಮವಾರ ದೇವರಮಾರು ಗದ್ದೆಯಲ್ಲಿ ಕದಿರು ಕೊಯ್ಯುವ ಮುಹೂರ್ತ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍ಗದ್ದೆಗೆ ಹಾಲೆರೆಯುವ ಮೂಲಕ ಕದಿರು ಕೊಯ್ಯುವ ಮುಹೂರ್ತಕ್ಕೆ ಚಾಲನೆ ನೀಡಿದರು. ಮಂಗಳವಾರ ಗೌರಿ ಪೂಜೆಯಂದು ಶ್ರೀದೇವರು ಗರ್ಭಗುಡಿಯಿಂದ ಹೊರಬಂದು ಚಂಡೆ, ವಾದ್ಯಗಳೊಂದಿಗೆ ತೆರಳಿದರು. ಬಳಿಕ ಅಶ್ವತ್ಥಕಟ್ಟೆಯಲ್ಲಿ ಇಡಲಾಗಿದ್ದ ಕದಿರುತೆನೆಗೆ ತೀರ್ಥ ಸಂಪ್ರೋಕ್ಷಣೆ ಮಾಡಿ ಪೂಜೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ Read More »

ನಾಳೆ (ಆ.23): ಆಲಂಕಾರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 10ನೇ ವರ್ಷದ ಅಟ್ಟಿ ಮಡಿಕೆ ಒಡೆಯುವ ಉತ್ಸವ

ಆಲಂಕಾರು: ಹಿಂದೂ ಜಾಗರಣ ವೇದಿಕೆ ಆಲಂಕಾರು ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 10ನೇ ವರ್ಷದ ಅಟ್ಟಿ ಮಡಿಕೆ ಒಡೆಯುವ ಉತ್ಸವ ಆ.23 ಶನಿವಾರ ಮಧ್ಯಾಹ್ನ 2 ರಿಂದ ಆಲಂಕಾರು ಪೇಟೆಯಲ್ಲಿ ನಡೆಯಲಿದೆ. ಉತ್ಸವಕ್ಕೆ ಮಧ್ಯಾಹ್ನ 2 ಗಂಟೆಗೆ ಆಲಂಕಾರು ಮಾನಸ ಚಿಕಿತ್ಸಾಲಯದ ಡಾ.ಹರಿದಾಸ್ ಭಟ್‍ ಚಾಲನೆ ನೀಡಲಿದ್ದಾರೆ. ಸಂಜೆ 5.30 ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಆಲಂಕಾರು ಅಟ್ಟಿಮಡಿಕೆ ಉತ್ಸವ ಸಮಿತಿ ಅಧ್ಯಕ್ಷ ದಾಮೋಧರ್ ಆಚಾರ್ಯ ಆಲಂಕಾರು

ನಾಳೆ (ಆ.23): ಆಲಂಕಾರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 10ನೇ ವರ್ಷದ ಅಟ್ಟಿ ಮಡಿಕೆ ಒಡೆಯುವ ಉತ್ಸವ Read More »

ಆ.24 : ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು

ಪುತ್ತೂರು ಪುತ್ತೂರು: ದ. ಕ. ಜವಾಹರ್ ಬಾಲ್ ಮಂಚ್, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ, ಸಂಶೋಧನಾ ಸಂಸ್ಥೆ ಬಾಳ್ತಿಲ ವತಿಯಿಂದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ಆ.24ರಂದು ಬೆಳಗ್ಗೆ 9 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ವಕೀಲೆ ಶೈಲಜಾ ರಾಜೇಶ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುದ್ದು ಕೃಷ್ಣ ವೇಷ ಸ್ಪರ್ಧೆ, ಯಶೋಧ ಕೃಷ್ಣ ವೇಷ ಸ್ಪರ್ಧೆ, ಮೆಹಂದಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಬೆಂಕಿ ಬಳಸದೆ ಅಡುಗೆ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ

ಆ.24 : ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌”

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರು, ತುಳು ಸಾಹಿತ್ಯ ಸಂಘ ಹಾಗೂ ತುಳುವ ಮಹಾಸಭೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ “ಆಟಿದ ಲೇಸ್‌”, ಮಂದಾರ ರಾಮಾಯಣ- ಅಜ್ಜೆರೆ ಸಾಲೆ- ಸುಗಿಪು-ದುನಿಪು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಂದಾರ ಪ್ರತಿಷ್ಠಾನದ ಅಧ್ಯಕ್ಷ ಡಾ|ರಾಜೇಶ್‌ ಭಟ್‌ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಟಿ ತಿಂಗಳಿನ ಮಹತ್ವ, ತುಳುನಾಡು ಮತ್ತು ತುಳು ಭಾಷೆಯ ಸಮೃದ್ಧತೆಗಳ ಬಗ್ಗೆ ತಿಳಿಸಿದರು. ಸುಗಿಪು-ದುನಿಪು ವಿಶೇಷ ಕಾರ್ಯಕ್ರಮದಲ್ಲಿ ತುಳು ಮಹಾಕಾವ್ಯ ಮಂದಾರ ರಾಮಾಯಣದ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌” Read More »

error: Content is protected !!
Scroll to Top