ಧಾರ್ಮಿಕ

ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣೆ: ವಿವಿಧೆಡೆ ವಲಯವಾರು, ಗ್ರಾಮವಾರು ಪೂರ್ವಭಾವಿ ಸಭೆ

ಪುತ್ತೂರು: ಭೈರವೈಕ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ವಲಯವಾರು ಹಾಗೂ ಗ್ರಾಮವಾರು ಸಭೆ ನಡೆಸಲಾಗುತ್ತಿದೆ.

ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣೆ: ವಿವಿಧೆಡೆ ವಲಯವಾರು, ಗ್ರಾಮವಾರು ಪೂರ್ವಭಾವಿ ಸಭೆ Read More »

ಪಣೋಲಿಬೈಲು: ಇಂದಿನಿಂದ ಜ. 16ರವರೆಗೆ ಅಗೇಲು, ಕೋಲ ಇಲ್ಲ

ಬಂಟ್ವಾಳ: ಕಾರಣಿಕ ಕ್ಷೇತ್ರ ಬಂಟ್ವಾಳ ತಾಲೂಕಿನ ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜ. 9ರಿಂದ ಜ. 16ರವರೆಗೆ ಅಗೇಲು ಹಾಗೂ ಕೋಲ ಸೇವೆ ಇರುವುದಿಲ್ಲ. ಸಜೀಪ ಮಾಗಣೆ ಶ್ರೀ ಉಳ್ಳಾಲ್ದಿ ಅಮ್ಮನವರ ವಾರ್ಷಿಕ ಪುದ್ವಾರ್ ಮೆಚ್ಚಿ ಜಾತ್ರೆಯ ಹಿನ್ನೆಲೆಯಲ್ಲಿ ಪಣೋಲಿಬೈಲು ದೈವಸ್ಥಾನದಲ್ಲಿ ಅಗೇಲು ಸೇವೆ ಮತ್ತು ಕೋಲ ಸೇವೆ ಜ. 16ರವರೆಗೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.

ಪಣೋಲಿಬೈಲು: ಇಂದಿನಿಂದ ಜ. 16ರವರೆಗೆ ಅಗೇಲು, ಕೋಲ ಇಲ್ಲ Read More »

ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಸಂಪನ್ನ, ನೇಮೋತ್ಸವ

ಪುತ್ತೂರು: ಕುಂಬ್ಲಾಡಿ  ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ಜ. 7ರಂದು ಸಂಪನ್ನಗೊಂಡಿತು. ಡಿ 31ರಿಂದ ಮೊದಲ್ಗೊಂಡು ಜ7ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ನಡೆಯಿತು. ಜ. 7ರಂದು ಬೆಳಿಗ್ಗೆ

ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಸಂಪನ್ನ, ನೇಮೋತ್ಸವ Read More »

ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ

ಪುತ್ತೂರು: ಬ್ರಹ್ಮ ಎಂದರೆ ನಿರಾಕಾರ. ವಟುಗಳಿಗೆ ಬ್ರಹ್ಮೋಪದೇಶ ನೀಡುವ ಮೂಲಕ ನಿರಾಕಾರ ತತ್ವವನ್ನು ಬೋಧಿಸಲಾಗಿದೆ. ಬ್ರಹ್ಮೋಪದೇಶ ಸಂಸ್ಕಾರ ಪಡೆದ ವಟುಗಳು ಮುಂದೆ ಸಂಸ್ಕಾರವಂತರಾಗಿ ಸಮಾಜದಲ್ಲಿ ಬೆಳಗುವಂತಾಗಲಿ ಎಂದು ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಹೇಳಿದರು. ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ರವಿವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆದ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ Read More »

ಶಿರಾಡಿ ರಾಜನ್ ದೈವದ ನೇಮೋತ್ಸವ | ಅನ್ಯಾಡಿಯಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಮಾ. 9ರಂದು ನಡೆಯಲಿರುವ ಕುದ್ಮಾರು ಅನ್ಯಾಡಿ ಶ್ರೀ ಶಿರಡಿ ರಾಜನ್ ದೈವದ ನೇಮೋತ್ಸವ ಹಿನ್ನೆಲೆಯಲ್ಲಿ ಜ. 8ರಂದು ಪೂರ್ವಭಾವಿ ಸಭೆ ನಡೆಯಿತು. ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕೆಡೆಂಜಿ ಗುತ್ತಿನ ಪ್ರವೀಣ್ ಕುಮಾರ್ ಕೆಡೆಂಜಿ, ಆಡಳಿತ ಸಮಿತಿ ಉಪಾಧ್ಯಕ್ಷರಾದ ರೋಹಿತಕ್ಷ ಕೆಡೆಂಜಿಕಟ್ಟ, ಚೇನಪ್ಪ ಗೌಡ ನೂಜಿ, ದೇವಪ್ಪ ಗೌಡ ನಡುಮನೆ, ಕಾರ್ಯದರ್ಶಿ ನಾಗೇಶ್ ಕೆ. ಕೆಡೆಂಜಿ, ಕೋಶಾಧಿಕಾರಿ ಉಮೇಶ್, ಯೋಗೀಶ್ ಕೆಡೆಂಜಿ, ಉಮೇಶ್ ಕೆರೆನಾರು, ಊರಿನ ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿರಾಡಿ ರಾಜನ್ ದೈವದ ನೇಮೋತ್ಸವ | ಅನ್ಯಾಡಿಯಲ್ಲಿ ಪೂರ್ವಭಾವಿ ಸಭೆ Read More »

ಕಾಂಚನ: ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಹಾಗೂ ಸಂಸ್ಮರಣಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಜತ್ತೂರು ಕಾಂಚನ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಬಜತ್ತೂರು ಕಾಂಚನ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿ ಮಾಡುವಂತೆ ಸಭೆಯಲ್ಲಿ ವಿನಂತಿಸಲಾಯಿತು.

ಕಾಂಚನ: ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ Read More »

ಬಳ್ಪಕ್ಕೆ ಭೇಟಿ ನೀಡಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ| ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆಯ ಹಿನ್ನೆಲೆಯಲ್ಲಿ ಬಳ್ಪ ಶ್ರೀ ಭಾರತಿ ತೀರ್ಥ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ವಿವರಿಸಲಾಯಿತು. ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ‌ ಜೊತೆಗೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ದಶಮಾನೋತ್ಸವದ ಹಾಗೂ ರಜತ ತುಲಾಭಾರ ಹಾಗೂ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ

ಬಳ್ಪಕ್ಕೆ ಭೇಟಿ ನೀಡಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ| ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ Read More »

ಕುಂಬ್ಲಾಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪುತ್ತೂರು: ಚಾರ್ವಾಕ ಗ್ರಾಮದ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ. 5ರಂದು ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ, ಅಷ್ಠಬಂಧ ಲೇಪನ, ಬೆಳಿಗ್ಗೆ 11.14ಕ್ಕೆ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಂಗಪೂಜೆ, ಶ್ರೀ ಭೂತ ಬಲಿ, ರಾಜಾಂಗಣ ಪ್ರಸಾದ, ಬಟ್ಟಲು ಕಾಣಿಕೆ, ನಾಲ್ಕಂಭ ಕ್ಷೇತ್ರದಲ್ಲಿ ಕಟ್ಟೆ ಪೂಜೆ, ಮಂತ್ರಾಕ್ಷತೆ ಹಾಗೂ ಬೆಳಂದೂರು ಲಕ್ಷ್ಮೀಪ್ರಿಯಾ ಭಜನಾ ಮಂಡಳಿಯಿಂದ ಭಜನೆ ನಡೆಯಿತು. ಜ. 6ರ ಕಾರ್ಯಕ್ರಮ:ಜ. 6ರಂದು ಬೆಳಿಗ್ಗೆ ಉಳ್ಳಾಕ್ಲು ಭಂಡಾರ ತೆಗೆಯಲಾಗುವುದು. ರಾತ್ರಿ 9ರಿಂದ

ಕುಂಬ್ಲಾಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಭಾವಚಿತ್ರದ ಸ್ಟಿಕ್ಕರ್ ವಿತರಣೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆಯ ಹಿನ್ನೆಲೆಯಲ್ಲಿ ಮಹಾಸ್ವಾಮೀಜಿ ಅವರ ಭಾವಚಿತ್ರದ ಸ್ಟಿಕ್ಕರನ್ನು ಸವಣೂರು ಗ್ರಾಮದಲ್ಲಿ ವಿತರಿಸಲಾಯಿತು. ಇದರೊಂದಿಗೆ ಪ್ರತಿ ಮನೆಮನೆಗೆ ಆಮಂತ್ರಣವನ್ನು ನೀಡಿ, ಕಾರ್ಯಕ್ರಮಕ್ಕೆ ಸ್ವಾಗತಿಸಲಾಯಿತು

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಭಾವಚಿತ್ರದ ಸ್ಟಿಕ್ಕರ್ ವಿತರಣೆ Read More »

ಚುಂಚಶ್ರೀ ಸಭಾಂಗಣದಲ್ಲಿ ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಸಿದ್ಧತಾ ಸಭೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜ. 5ರಂದು ತೆಂಕಿಲ ಒಕ್ಕಲಿಗ ಗೌಡ ಸೇವಾ ಸಂಘದ ಚುಂಚಶ್ರೀ ಸಭಾಂಗಣದಲ್ಲಿ ಸಭೆ ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣಾ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಸಂಘಟಿಸಿರುವುದೇ ನಮ್ಮೆಲ್ಲರ ಭಾಗ್ಯ. ರಾಜ್ಯದ ಕೇಂದ್ರವಾಗಿ ಪುತ್ತೂರಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಜನರೇ ಪುತ್ತೂರಿನತ್ತ ನೋಡಲಿದ್ದಾರೆ. ಆದ್ದರಿಂದ ಎಲ್ಲರೂ ಜೊತೆಯಾಗಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಆದಿಚುಂಚನಗಿರಿ

ಚುಂಚಶ್ರೀ ಸಭಾಂಗಣದಲ್ಲಿ ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಸಿದ್ಧತಾ ಸಭೆ Read More »

error: Content is protected !!
Scroll to Top