ಧಾರ್ಮಿಕ

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ

ಪುತ್ತೂರು: ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು. ಏ.2 ಹಾಗೂ 3 ರಂದು ವಾರ್ಷಿಕ ಜಾತ್ರೋತ್ಸವ, ದೈವಗಳ ನೇಮೋತ್ಸವದ ಅಂಗವಾಗಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲಿದ್ದ ಪ್ಲಾಸ್ಟಿಕ್, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸುವ ಕಾರ್ಯವನ್ನು ಶ್ರಮದಾನ ಮೂಲಕ ಮಾಡಿದರು. ಶ್ರಮದಾನದಲ್ಲಿ ಯುವಕ ಮಂಡಲದ ಸದಸ್ಯರಾದ ಶಿವಪ್ರಸಾದ್ ಕೈಂದಾಡಿ, ಪ್ರಭಾತ್ ಸಾರಕರೆ, ವರುಣ್ ಶಾಂತಿಗೋಡು, ಪ್ರವೀಣ್ ಬೊಳ್ಳೆಕ್ಕು, ಕಾರ್ತಿಕ್ ಕುಕ್ಯಾನ, ಶಶಿ ಕುಮಾರ್ ಓಲಾಡಿ, ಭಾಸ್ಕರ ಓಲಾಡಿ, ವಿನೋದ್ ಓಲಾಡಿ, ಹರ್ಷಿತ್ ಬಂಡಶಾಲೆ, […]

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ Read More »

ಪೆರಿಗೇರಿ ಮೂಕಾಂಬಿ ಗುಳಿಗ ದೈವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ | ಶಾಸಕ ಮಠಂದೂರು ಭಾಗಿ

ಪುತ್ತೂರು : ಬಡಗನ್ನೂರು ಗ್ರಾಮದ ಪೆರಿಗೇರಿ ನೂಚಿಲೋಡು ಮೂಕಾಂಬಿ ಗುಳಿಗ ದೈವದ ಪುನರ್ ಪ್ರತಿಷ್ಠಾ ಮಹೋತ್ಸವ ಮತ್ತು  ಧಾರ್ಮಿಕ ಸಭಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಭೂತಾರಾಧನೆ ಕುರಿತು ಬಯಲು ಸೀಮೆಯ ಜನ ಕೂಡ ತಿಳಿದುಕೊಳ್ಳುವ ಸಂಗತಿ ಕಾಂತರ ಸಿನಿಮಾದ ಮೂಲಕ ಆಗಿದೆ. ನಂಬಿಕೆ ಆಧಾರದಲ್ಲಿ ನಮ್ಮ ಜೀವನ ಪದ್ಧತಿ ಇದೆ ನಮ್ಮಲ್ಲಿ ಪ್ರೀತಿ ವಿಶ್ವಾಸ, ಸಹ ಬಾಳ್ವೆಯ ಜೀವನ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂಡಿ ಬಂದಿದೆ. ದೈವಸ್ಥಾನಗಳ

ಪೆರಿಗೇರಿ ಮೂಕಾಂಬಿ ಗುಳಿಗ ದೈವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ | ಶಾಸಕ ಮಠಂದೂರು ಭಾಗಿ Read More »

ಮಾ.22 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರ,ಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮ ಮಾ.22 ಚಾಂದ್ರಮಾನ ಯುಗಾದಿಯಂದು ಬೆಳಿಗ್ಗೆ 8 ಕ್ಕೆ ನಡೆಯಲಿದೆ. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.22 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರ,ಮ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ಪೂರ್ವಭಾವಿಯಾಗಿ ಅನುಜ್ಞಾ ಕಲಶ ದೇವಸ್ಥಾನದ ಗರ್ಭಗುಡಿ ಎದುರು  ಪ್ರಾರ್ಥನೆಯೊಂದಿಗೆ ಶುಕ್ರವಾರ ನಡೆಯಿತು. ಕ್ಷೇ್ತ್ರದ  ವೇ.ಮೂ.ರವೀಶ ತಂತ್ರಿ ಅವರ ನೇತೃತ್ವದಲ್ಲಿ ವೇ.ಮೂ. ಗುರು ತಂತ್ರಿ ಶ್ರೀ ದೇವರಿಗೆ ಅನುಜ್ಞಾ ಕಲಶ ನೆರವೇರಿಸಿದರು. ಬಳಿಕ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿದರು. ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಗುರುವಾರ ಸಂಪನ್ನಗೊಂಡಿತು. ಜಾತ್ರೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ ಬಳಿಕ ಅನ್ನಸಂತರ್ಪಣೆ ಜರಗಿತು. ರಾತ್ರಿ ರಂಗಪೂಜೆ ದೈವದ ನೇಮೋತ್ಸವದೊಂದಿಗೆ ಜಾತ್ರೆ  ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಡಾ,ಎಂ.ಕೆ.ಪ್ರಸಾದ್, ವ್ಯವಸ್ಥಾಪನಾ

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ Read More »

ಗುಳಿಗ ದೈವವನ್ನು ನಾನು ಟೀಕಿಸಿಲ್ಲ – ಆರಗ ಜ್ಞಾನೇಂದ್ರ ಸ್ಪಷ್ಟನೆ

ಶಿವಮೊಗ್ಗ : ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ವಿರುದ್ಧ ಟೀಕೆ ಮಾಡುವವರು ಯಾರು? ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ

ಗುಳಿಗ ದೈವವನ್ನು ನಾನು ಟೀಕಿಸಿಲ್ಲ – ಆರಗ ಜ್ಞಾನೇಂದ್ರ ಸ್ಪಷ್ಟನೆ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಜಾತ್ರೆಗೆ ಮುನ್ಸೂಚನೆಯಂತೆ ಬ್ರಹ್ಮರಥ ಮಂದಿರದಿಂದ ರಥಬೀದಿಗೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10 ರಿಂದ ನಡೆಯುವ ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥಬೀದಿಗೆ ತಂದು ನಿಲ್ಲಿಸುವ ಮುಹೂರ್ತ ಗುರುವಾರ ನಡೆಯಿತು. ಈ ಮೂಲಕ ಪುತ್ತೂರು ಜಾತ್ರೋತ್ಸವಕ್ಕೆ ಮುನ್ಸೂಚನೆ ನೀಡಲಾಯಿತು. ಪ್ರತೀ ವರ್ಷದಂತೆ ಬಿಲ್ವಪತ್ರೆ ಭೂಸ್ಪರ್ಶ ಮಾಡುವ ಮೂಲಕ ಸೂಚಿಸುವಂತೆ ಈ ಬಾರಿಯೂ ಬಿಲ್ವಪತ್ರೆ ಭೂಸ್ಪರ್ಶ ಮಾಡಿದೆ. ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ವೆ.ಮೂ. ವಸಂತ ಕೆದಿಲಾಯರು ಬ್ರಹ್ಮರಥಕ್ಕೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಣೆ ಮಾಡಿ ವಿಜೃಂಭಣೆಯಿಂದ ಜಾತ್ರೆ

ಇತಿಹಾಸ ಪ್ರಸಿದ್ಧ ಪುತ್ತೂರು ಜಾತ್ರೆಗೆ ಮುನ್ಸೂಚನೆಯಂತೆ ಬ್ರಹ್ಮರಥ ಮಂದಿರದಿಂದ ರಥಬೀದಿಗೆ Read More »

ಮಾ.16 ರಿಂದ 20 : ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಪುತ್ತೂರು : ಬಡಗನ್ನೂರು ಗ್ರಾಮದ ದೇಯಿಬೈದೈತಿ – ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಮಾ.16 ರಿಂದ 20 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹೋತ್ಸವದ ಅಂಗವಾಗಿ ಮಾ.16 ಗುರುವಾರ ಸಂಜೆ 5.30 ರಿಂದ ಸ್ವಸ್ತಿ ಪುಣ್ಯಾಹ ಸ್ಥಳ ಶುದ್ಧಿ, ಸಾಮೂಹಿಕ ಪ್ರಾರ್ಥನೆ, ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ, ರಾತ್ರಿ 7 ರಿಂದ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ನಾಳ

ಮಾ.16 ರಿಂದ 20 : ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ Read More »

ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು; ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಕುರಿತು ಪೂರ್ವಭಾವಿ ಸಭೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕೆದಿಲಾಯರವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಉಪ ಸಮಿತಿಗಳ ಸಂಚಾಲಕರು ಹಾಗೂ ಸದಸ್ಯರುಗಳಿಗೆ ಅವರವರ ಜವಾಬ್ದಾರಿಗಳನ್ನು ತಿಳಿಸಿ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರುವಲ್ಲಿ ಎಲ್ಲರ ಸಹಕಾರವನ್ನು ಕೋರಲಾಯಿತು. ಮಾ.21 ರಂದು ಪುತ್ತೂರಿನಲ್ಲಿ ಆಮಂತ್ರಣ ವಿತರಣೆ: ಬ್ರಹ್ಮಕಲಶೋತ್ಸವದ ಪ್ರಚಾರಾರ್ಥವಾಗಿ ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆಯನ್ನು ಮಾ.21 ರಂದು ವಿತರಿಸುವುದಾಗಿ ತೀರ್ಮಾನಿಸಲಾಯಿತು. ಬೆಳಿಗ್ಗೆ 9.30

ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ Read More »

ಮಾ.17 ರಿಂದ 19 : ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ

ಪುತ್ತೂರು: ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವದ ಹೆಸರಲ್ಲಿ ನಡೆದುಕೊಂಡು ಬರುತ್ತಿರುವ ಆಂಡ್ ನೇರ್ಚೆ ಮೂರು ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ.17, 18 ಹಾಗೂ 19 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಡುಮಲೆ ಪ್ರದೇಶ ಮಸೀದಿ, ದೇವಸ್ಥಾನ, ದೈವಸ್ಥಾನಗಳನ್ನೊಳಗೊಂಡು ಸೌಹಾರ್ದತೆಯಿಂದ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ ಎಂದರು. ಮಾ.17 ರಂದು ಧ್ವಜಾರೋಹಣದೊಂದಿಗೆ

ಮಾ.17 ರಿಂದ 19 : ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ Read More »

error: Content is protected !!
Scroll to Top