ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು
ಪುತ್ತೂರು: ಅತ್ಯಂತ ಪಾವಿತ್ರ್ಯತೆ ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ 35 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಅನುದಾನ ತರಿಸಿಕೊಂಡು, ಇನ್ನಷ್ಟು ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಿಣಿ ಅಭಿವೃದ್ಧಿಗಾಗಿ ಪುಡಾದ 35 ಲಕ್ಷ ರೂ. ಅನುದಾನದ ಕಾಮಗಾರಿಗೆ ಶನಿವಾರ ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ […]










