ಧಾರ್ಮಿಕ

ಇಂದು ಕಿಲ್ಲೆ ಗಣಪನ ವೈಭವದ ಶೋಭಾಯಾತ್ರೆ | ಮಧ್ಯಾಹ್ನ ನಡೆಯಿತು ಶ್ರೀ ದೇವರ ವೈಭವದ ಬಲಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ

ಪುತ್ತೂರು: ಜಿಲ್ಲೆಯ 2ನೇ ಅತೀ ಹಿರಿಯ ಗಣಪ ಎಂದೇ ಖ್ಯಾತಿ ಪಡೆದಿರುವ ಪುತ್ತೂರಿನ ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿರುವ 68ನೇ ವರ್ಷದ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಇಂದು ರಾತ್ರಿ ಸಂಪನ್ನಗೊಳ್ಳಲಿದೆ. ತುಳುನಾಡ ದೈವಾರಾಧನೆಯ ನಂಟು ಹೊಂದಿರುವ ಕಿಲ್ಲೆ ಗಣಪನಿಗೆ ಶುಕ್ರವಾರ ಮಧ್ಯಾಹ್ನ 108 ಕಾಯಿ ಗಣಪತಿ ಹೋಮ ನಡೆಯಿತು. ಬಳಿಕ ಶ್ರೀ ಗಣೇಶನ ಮೂರ್ತಿಯೊಂದಿಗೆ ವೈಭವದ ಬಲಿ ಉತ್ಸವ ಚೆಂಡೆ, ಸ್ಕ್ಯಾಕ್ಸೊಫೋನ್ ನೊಂದಿಗೆ ವಿಜೃಂಭಣೆಯಿಂದ ಜರಗಿತು. ಬಳಿಕ ಮಹಾಪೂಜೆ ನಡೆದು ಸಹಸ್ರಾರು […]

ಇಂದು ಕಿಲ್ಲೆ ಗಣಪನ ವೈಭವದ ಶೋಭಾಯಾತ್ರೆ | ಮಧ್ಯಾಹ್ನ ನಡೆಯಿತು ಶ್ರೀ ದೇವರ ವೈಭವದ ಬಲಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ಸಹಸ್ರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ Read More »

ಅ.3-12 : ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು; ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.3 ರಿಂದ 12 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಮಧ್ಯಾಹ್ನ ದೇವಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಭಕ್ತಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ಸದಸ್ಯರುಗಳು, ವಿಶ್ವ ಯುವಕ ವೃಂದದ ಸದಸ್ಯರುಗಳು, ಶ್ರೀಕ್ಷೇತ್ರ ಧರ್ಮಸ್ಥಳದ

ಅ.3-12 : ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ವಿವೇಕಾನಂದ ಕಾಲೇಜಿನಲ್ಲಿ  43ನೇ ವರ್ಷದ ಶ್ರೀಗಣೇಶೋತ್ಸವ | ಮಣ್ಣು ಸೃಷ್ಟಿಯ ಕೊಡುಗೆ : ಡಾ. ಎಚ್. ಎನ್.ಉದಯಶಂಕರ

ಪುತ್ತೂರು: ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ ನಿಧಿ ಎಂದರೆ ಅದು ಮಣ್ಣು. ತಂತ್ರಜ್ಞಾನ ಮುಂದುವರೆದರೂ ಮಣ್ಣನ್ನು ಯಾರು ಉತ್ಪದಿಸಲಾರರು. ಮಣ್ಣಿಗೆ ಅದರದೇ ಆದ ಮಹತ್ವವಿದೆ. ನಮ್ಮ ಸ್ವಾರ್ಥಕ್ಕಾಗಿ  ಪಶ್ಚಿಮ ಘಟ್ಟವನ್ನು ಹಾಳುಮಾಡುತ್ತಿದ್ದೇವೆ. ಅಭಿವೃದ್ಧಿ ಹೆಸರಿನಲ್ಲಿ ಭೂಮಿಯನ್ನು ಕೆಡಿಸುತ್ತಿದ್ದೇವೆ. ಪ್ರಕೃತಿಯ ಮುಂದೆ ಯಾರು ದೊಡ್ಡವರಲ್ಲ, ಮಣ್ಣುಇಲ್ಲದೆ ಜೀವ ಇಲ್ಲಎಂದು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಭೂ ವಿಜ್ಞಾನಿ ಡಾ. ಎಚ್.ಎನ್‌. ಉದಯಶಂಕರ  ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ )

ವಿವೇಕಾನಂದ ಕಾಲೇಜಿನಲ್ಲಿ  43ನೇ ವರ್ಷದ ಶ್ರೀಗಣೇಶೋತ್ಸವ | ಮಣ್ಣು ಸೃಷ್ಟಿಯ ಕೊಡುಗೆ : ಡಾ. ಎಚ್. ಎನ್.ಉದಯಶಂಕರ Read More »

ಸವಣೂರಿನಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ 2ನೇ ದಿನ ನಡೆಯಿತು ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ | ಶ್ರೀ ಗಣೇಶ ಧಾರ್ಮಿಕ ಚೌಕಟ್ಟನ್ನು ಮೀರಿ ಬೆಳೆದವ : ಡಾ.ಹಂದಾಡಿ ಮಾಧವ ಭಟ್

ಸವಣೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 42ನೇ ವರ್ಷದ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಭಾಗವಾಗಿ ಎರಡನೇ ದಿನ ಧಾರ್ಮಿಕ ಉಪನ್ಯಾಸ, ಮನರಂಜನೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಡಾ.ಹಂದಾಡಿ ಮಾಧವ ಭಟ್, ಎಲ್ಲರಿಗೂ ಸಲ್ಲುವವ ಶ್ರೀ ಗಣೇಶ. ಏಕೆಂದರೆ ಆತ ಧಾರ್ಮಿಕ ಚೌಕಟ್ಟನ್ನು ಮೀರಿ ಬೆಳೆದವ. ಆತನು ಆದಿ ಪೂರ್ವದಲ್ಲಿಯೇ ಸ್ವೀಕೃತವಾದವ. ಸಂಘಟನೆಯಲ್ಲಿ ಮುಖ್ಯವಾದುದು ಎಂದರೆ “Religion is what we do in privacy” ಎಂಬ

ಸವಣೂರಿನಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ 2ನೇ ದಿನ ನಡೆಯಿತು ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ | ಶ್ರೀ ಗಣೇಶ ಧಾರ್ಮಿಕ ಚೌಕಟ್ಟನ್ನು ಮೀರಿ ಬೆಳೆದವ : ಡಾ.ಹಂದಾಡಿ ಮಾಧವ ಭಟ್ Read More »

ಗೇರುಕಟ್ಟೆ 52ನೇ ವರ್ಷದ ಶ್ರೀ ಗಣೇಶೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಳಮದ್ದಳೆ

ಗೇರುಕಟ್ಟೆ : ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ 52ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಾಂಸ್ಕೃತಿಕ  ಕಾರ್ಯಕ್ರಮದಲ್ಲಿ ‘ಶಿವಭಕ್ತ ಪುರುಷಮೃಗ’ ತಾಳಮದ್ದಳೆ ಗೇರುಕಟ್ಟೆ ಮಂಜಲಡ್ಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಸಭಾಭಾವನ ದಲ್ಲಿ ಜರಗಿತು. ಭಾಗವತರಾಗಿ ಮಧೂರು ವಿಷ್ಣು ಪ್ರಸಾದ್ ಕಲ್ಲೂರಾಯ ಗೇರುಕಟ್ಟೆ. ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ಪುರುಷಮೃಗ), ರಾಘವೇಂದ್ರ ಆಸ್ರಣ್ಣ ನಾಳ (ಹನುಮಂತ ), ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀಕೃಷ್ಣ), ರಾಘವ ಪೂಜಾರಿ ಮೆದಿನ (ಧರ್ಮರಾಯ

ಗೇರುಕಟ್ಟೆ 52ನೇ ವರ್ಷದ ಶ್ರೀ ಗಣೇಶೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಳಮದ್ದಳೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಗಣೇಶನ ಪ್ರತಿಷ್ಠೆ – ವಿವಿಧ ಕಾರ್ಯಕ್ರಮಗಳಿಗೆ ಚಾಲನೆ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ 58 ನೇ ವರ್ಷದ ಗಣೇಶೋತ್ಸವಕ್ಕೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಂಟಾರು ಗುರುತಂತ್ರಿಯವರು ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಮಾಡುವ ಮೂಲಕ ಶನಿವಾರ ಚಾಲನೆ ನೀಡಿದರು. ಬೆಳಿಗ್ಗೆ ಸಮಿತಿ ಪದಾಧಿಕಾರಿಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಬಳಿಕ ದೇವಳದ  ಎದುರು ಗದ್ದೆಯ ಬೃಹತ್ ಚಪ್ಪರದಲ್ಲಿ ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಕಾರ್ಯ ನಡೆಯಿತು. ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಬಳಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಗಣೇಶನ ಪ್ರತಿಷ್ಠೆ – ವಿವಿಧ ಕಾರ್ಯಕ್ರಮಗಳಿಗೆ ಚಾಲನೆ, ಧಾರ್ಮಿಕ ಸಭಾ ಕಾರ್ಯಕ್ರಮ Read More »

ಶ್ರೀ ದೇವತಾ ಸಮಿತಿ ವತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು : ಕಿಲ್ಲೇ ಮೈದಾನದಲ್ಲಿ ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆಯುವ 67ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ಗಣೇಶನ ಮೂರ್ತಿ ರಚನಾ ಸ್ಥಳದಿಂದ ಮೆರವಣಿಗೆ ಮೂಲಕ ಶ್ರೀ ಗಣೇಶನನ್ನು ಕರೆತಂದು ಕಿಲ್ಲೇ ಮೈದಾನದ ಭವ್ಯ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಮಧ್ಯಾಹ್ನ ಮಹಾಪೂಜೆ ನಡೆದು, ಸಾವಿರಾರು ಮಂದಿಗೆ ಅನ್ನಸಂತಪರ್ಣೆ ಜರಗಿತು. ಏಳು ದಿನಗಳ ಕಾಲ ನಡೆಯುವ ಕಿಲ್ಲೇ ಮೈದಾನದ ಗಣಪತಿ ಅತ್ಯಂತ ಪುರಾತನವಾಗಿದ್ದು, ಇಲ್ಲಿ ಒಟ್ಟು

ಶ್ರೀ ದೇವತಾ ಸಮಿತಿ ವತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ವಠಾರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಶನಿವಾರ ಶ್ರೀ ಗಣೇಶನ ಮೂರ್ತಿ ಪ್ರತಿಷ್ಠೆ ಮೂಲಕ ಚಾಲನೆ ನೀಡಲಾಯಿತು. ಶನಿವಾರ ಬೆಳಿಗ್ಗೆ 8 ಕ್ಕೆ ಭಜನೆ ನಡೆಯಿತು. 8.30 ಕ್ಕೆ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬಳಿಕ ಧ್ವಜಾರೋಹಣವನ್ನು ಉದ್ಯಮಿ ವಾಮನ್ ಪೈ ನೆರವೇರಿಸಿದರು. ಮಧ್ಯಾಹ್ನ 11.30 ಕ್ಕೆ ಗಣಪತಿ ಹವನ, ಮಹಾಪೂಜೆ, ಪ್ರಸಾದ ವಿತರಣೆಯಾಗಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »

ನಾಳೆ (ಸೆ.6) : ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ ಹಾಗೂ ಶತ ಚಂಡಿಕಾಯಾಗ

ಕಡಬ : ತಾಲೂಕಿನ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ ಹಾಗೂ ಶತ ಚಂಡಿಕಾ ಯಾಗ ಸೆ.6 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7.20 ರಿಂದ 7.40 ರ ಸಮಯ ನಡೆಯುವ ಕನ್ಯಾಲಗ್ನ ಸುಮುಹೂರ್ತದಲ್ಲಿ ‘ಷಡಾಧಾರ ಪ್ರತಿಷ್ಠೆ’ ಜರಗಲಿದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ನೂತನ ಗರ್ಭಗೃಹಕ್ಕೆ ಇಷ್ಟಿಕಾಸ್ಥಾಪನ-ಗರ್ಭಪಾತ್ರನ್ಯಾಸ, ಪಾದುಕಾನ್ಯಾಸ ಕಾರ್ಯಕ್ರಮ ಈಗಾಗಲೇ ನಡೆದಿದೆ. ನಿಧಿಕುಂಭದ ಒಳಗೆ ತುಂಬಿಸುವ ಚಿನ್ನ, ಬೆಳ್ಳಿ, ನವರತ್ನಗಳನ್ನು ಅರ್ಪಿಸಲು  ಭಕ್ತಾಭಿಮಾನಿ ಅವಕಾಶವಿದ್ದು, ಸೆ.6 ಶುಕ್ರವಾರ ಬೆಳಿಗ್ಗೆ 7

ನಾಳೆ (ಸೆ.6) : ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ ಹಾಗೂ ಶತ ಚಂಡಿಕಾಯಾಗ Read More »

ಸೆ.7 ರಿಂದ 10 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ | ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ ಸೆ.7, 8, 9  ಹಾಗೂ 10 ರಂದು ವಿವಿಧ ಧಾರ್ಮಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವದಲ್ಲಿ ಸೆ.7 ಶನಿವಾರ ಬೆಳಿಗ್ಗೆ 8 ಕ್ಕೆ ಭಜನೆ, 8.30 ಕ್ಕೆ ಶ್ರೀ ದೇವರ ಪ್ರತಿಷ್ಠೆ, 10 ಕ್ಕೆ ನಡೆಯುವ ಧ್ವಜಾರೋಹಣವನ್ನು ಉದ್ಯಮಿ ವಾಮನ್

ಸೆ.7 ರಿಂದ 10 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ | ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ Read More »

error: Content is protected !!
Scroll to Top