ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ, ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಧಾರ್ಮಿಕ ಸಭೆ, ಸನ್ಮಾನ
ಕಡಬ: ಕುದ್ಮಾರು ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ಫೆ. 25ರಂದು ಸಂಜೆ ಧಾರ್ಮಿಕ ಸಭೆ ನಡೆಯಿತು. ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್ ಕೆ.ಎನ್. ಕಾರ್ಲಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರದೀಪ್ ಆರ್. ಗೌಡ ಅರುವಗುತ್ತು ಉದ್ಘಾಟಿಸಿದರು. ಇದೇ ಸಂದರ್ಭ ಭಾರತೀಯ ಭೂಸೇನೆಯ ಮಾಜಿ ಸುಬೇದಾರ್ ರವಿಚಂದ್ರ ಮಾರ್ಕಜೆ, ಭಾರತೀಯ ಭೂಸೇನೆಯ […]










