ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ
ಪುತ್ತೂರು: ಬ್ರಹ್ಮ ಎಂದರೆ ನಿರಾಕಾರ. ವಟುಗಳಿಗೆ ಬ್ರಹ್ಮೋಪದೇಶ ನೀಡುವ ಮೂಲಕ ನಿರಾಕಾರ ತತ್ವವನ್ನು ಬೋಧಿಸಲಾಗಿದೆ. ಬ್ರಹ್ಮೋಪದೇಶ ಸಂಸ್ಕಾರ ಪಡೆದ ವಟುಗಳು ಮುಂದೆ ಸಂಸ್ಕಾರವಂತರಾಗಿ ಸಮಾಜದಲ್ಲಿ ಬೆಳಗುವಂತಾಗಲಿ ಎಂದು ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಹೇಳಿದರು. ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ರವಿವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆದ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. […]









