ಧಾರ್ಮಿಕ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಭಾವಚಿತ್ರದ ಸ್ಟಿಕ್ಕರ್ ವಿತರಣೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆಯ ಹಿನ್ನೆಲೆಯಲ್ಲಿ ಮಹಾಸ್ವಾಮೀಜಿ ಅವರ ಭಾವಚಿತ್ರದ ಸ್ಟಿಕ್ಕರನ್ನು ಸವಣೂರು ಗ್ರಾಮದಲ್ಲಿ ವಿತರಿಸಲಾಯಿತು. ಇದರೊಂದಿಗೆ ಪ್ರತಿ ಮನೆಮನೆಗೆ ಆಮಂತ್ರಣವನ್ನು ನೀಡಿ, ಕಾರ್ಯಕ್ರಮಕ್ಕೆ ಸ್ವಾಗತಿಸಲಾಯಿತು

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಭಾವಚಿತ್ರದ ಸ್ಟಿಕ್ಕರ್ ವಿತರಣೆ Read More »

ಚುಂಚಶ್ರೀ ಸಭಾಂಗಣದಲ್ಲಿ ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಸಿದ್ಧತಾ ಸಭೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜ. 5ರಂದು ತೆಂಕಿಲ ಒಕ್ಕಲಿಗ ಗೌಡ ಸೇವಾ ಸಂಘದ ಚುಂಚಶ್ರೀ ಸಭಾಂಗಣದಲ್ಲಿ ಸಭೆ ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣಾ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಸಂಘಟಿಸಿರುವುದೇ ನಮ್ಮೆಲ್ಲರ ಭಾಗ್ಯ. ರಾಜ್ಯದ ಕೇಂದ್ರವಾಗಿ ಪುತ್ತೂರಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಜನರೇ ಪುತ್ತೂರಿನತ್ತ ನೋಡಲಿದ್ದಾರೆ. ಆದ್ದರಿಂದ ಎಲ್ಲರೂ ಜೊತೆಯಾಗಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಆದಿಚುಂಚನಗಿರಿ

ಚುಂಚಶ್ರೀ ಸಭಾಂಗಣದಲ್ಲಿ ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಸಿದ್ಧತಾ ಸಭೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥಿಸಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ | ಸವಣೂರಿನಲ್ಲಿ ಪೂರ್ವಸಿದ್ಧತಾ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸವಣೂರಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಮನೆಮನೆಗೆ ಆಮಂತ್ರಣ ಪತ್ರ ತಲುಪಿಸುವ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ, ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಭಾವಚಿತ್ರವುಳ್ಳ ಸ್ಟಿಕ್ಕರನ್ನು ಪ್ರತಿ ಮನೆಮನೆಗೆ ತಲುಪಿಸಿ, ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಲಾಯಿತು.

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ | ಸವಣೂರಿನಲ್ಲಿ ಪೂರ್ವಸಿದ್ಧತಾ ಸಭೆ Read More »

ಜ. 5, 6: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರಸ್ವಾಮಿ, ಧರ್ಮದೈವಗಳ ಪುನಶ್ಚೈತನ್ಯ ಕಲಶಾಭಿಷೇಕ, ನೇಮೊತ್ಸವ

ಪುತ್ತೂರು: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರಸ್ವಾಮಿ ಹಾಗೂ ಧರ್ಮದೈವಗಳ ಪುನಶ್ಚೈತನ್ಯ ಕಲಶಾಭಿಷೇಕ ಹಾಗೂ ನೇಮೊತ್ಸವ ಜ. 5ರಿಂದ ನಡೆಯಲಿದೆ. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ, ಶೇವಿರೆ ಕೃಷ್ಣ ಮಡಪುಳಿತ್ತಾಯರವರ ಪೌರೋಹಿತ್ಯದಲ್ಲಿ ವೈದಿಕ ಕಾರ್ಯಕ್ರಮ ನಡೆಯಲಿದೆ. ಜ. 5ರಂದು ಬೆಳಿಗ್ಗೆ 6.30ಕ್ಕೆ ಕಲ್ಲೇಗ ಗುತ್ತಿನ ಭಂಡಾರ ಚಾವಡಿಯಿಂದ ಭಂಡಾರ ಹೊರಡಲಿದೆ. ಬೆಳಿಗ್ಗೆ 7ರಿಂದ ಮಹಾಗಣಪತಿ ಹೋಮ, ಪ್ರತಿಷ್ಠಾ ಹೋಮ, ಪಂಚವಿಂಶತಿ, ಕಲಶ ಪೂಜೆ, ಬೆಳಿಗ್ಗೆ 10.28ಕ್ಕೆ ನಾಗಪ್ರತಿಷ್ಠೆ, ಪಂಚಾಮೃತ ಅಭಿಷೇಕ, ತಂಬಿಲಸೇವೆ, ಶ್ರೀ ಪುಣ್ಯಕುಮಾರ, ಶ್ರೀ ಅಣ್ಣಪ್ಪ

ಜ. 5, 6: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರಸ್ವಾಮಿ, ಧರ್ಮದೈವಗಳ ಪುನಶ್ಚೈತನ್ಯ ಕಲಶಾಭಿಷೇಕ, ನೇಮೊತ್ಸವ Read More »

ಜ. 5, 6: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ. 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, 5ರಂದು ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸುವರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧು ನರಿಯೂರು ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭ ವೆಂಕಟ್ರಮಣ ನಕ್ಷತ್ರಿತ್ತಾಯ, ಅರಣ್ ರೈ ಡಿಂಬ್ರಿ, ನವೀನ್ ಕಿನ್ನಿಮಜಲು, ಗೀತಾ, ರಾಮಣ್ಣ ಪಡ್ಪು ಅವರನ್ನು ಸನ್ಮಾನಿಸಲಾಗುವುದು. ಬಳಿಕ ಹನುಮಗಿರಿ ಶ್ರೀ

ಜ. 5, 6: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ

ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ವಿಶ್ವಕರ್ಮ ಸಮಾಜದ ವಟುಗಳಿಗಾಗಿ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಜ. 8ರಂದು ಬೆಳಿಗ್ಗೆ 10.15ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಲಿದೆ. ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಪುರೋಹಿತ್ ಕೆ. ರಮೇಶ ಆಚಾರ್ಯ ಗೇರುಕಟ್ಟೆ ಅವರ ಆಚಾರ್ಯತ್ವದಲ್ಲಿ ಸಾಮೂಹಿಕ ಬ್ರಹ್ಮೋಪದೇಶ ನಡೆಯಲಿದೆ. ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಈ ಸಲ 8ನೇ ಬಾರಿ

ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ Read More »

ಕುಂಬ್ಲಾಡಿ ಆಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ಉಳ್ಳಾಕ್ಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ

ಪುತ್ತೂರು: ಚಾರ್ವಾಕ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೊತ್ಸವ ನಡೆಯುತ್ತಿದ್ದು, ಬುಧವಾರ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ಜರಗಿತು. ಬೆಳಿಗ್ಗೆ ಬೆಳಿಗ್ಗೆ 8ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಸ್ಥಾನದಲ್ಲಿ ಗಣಪತಿ ಹೋಮ, ಸಾನಿಧ್ಯ ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ಮಧ್ಯಾಹ್ನ 11.45ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೇವಸ್ಥಾನದಲ್ಲಿ ಕುಂಬೇಶ ಕರ್ಕರೀ

ಕುಂಬ್ಲಾಡಿ ಆಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ಉಳ್ಳಾಕ್ಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ Read More »

ಕುಂಬ್ಲಾಡಿ ಬ್ರಹ್ಮಕಲಶ: ಭಜನಾ ಸೇವೆ

ಪುತ್ತೂರು: ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶ ಸಂದರ್ಭ ಸುಳ್ಯ ಗೀತಾಂಜಲಿ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ಜರಗಿತು.

ಕುಂಬ್ಲಾಡಿ ಬ್ರಹ್ಮಕಲಶ: ಭಜನಾ ಸೇವೆ Read More »

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ | ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಪೂರ್ವಸಿದ್ಧತಾ ಸಭೆ

ಪುತ್ತೂರು: ಭೈರವೈಕ್ಯರಾಗಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ, ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆಯನ್ನು ಮಾಡುವ ಸೌಭಾಗ್ಯ ಈ ಭಾಗದ ಜನರದ್ದಾಗಿದೆ. ಆದ್ದರಿಂದ ನಿರೀಕ್ಷೆಗಳೂ ಹೆಚ್ಚಿದೆ.

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ | ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಪೂರ್ವಸಿದ್ಧತಾ ಸಭೆ Read More »

error: Content is protected !!
Scroll to Top