ಧಾರ್ಮಿಕ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 79ನೇ ಸ್ವಾತಂತ್ರ್ಯೋತ್ಸವ | ಸ್ವಾತಂತ್ರ್ಯೋತ್ಸವ ಕೇವಲ ಆಚರಣೆಯಲ್ಲ ಬದಲಾಗಿ ಸಂಕಲ್ಪದ ದಿನವಾಗಿದೆ : ಸ್ಟೆಲ್ಲಾ ವರ್ಗೀಸ್

ಪುತ್ತೂರು: ಹಿರಿಯರ ತ್ಯಾಗ ಬಲಿದಾನ ಶೌರ್ಯದ ಸಂಕೇತವಾಗಿ ನಾವಿಂದು ಸ್ವಾತಂತ್ರ್ಯೋತ್ಸವ ಆಚರಣೆ ಮಾಡುತ್ತಿದ್ದು, ಇದು ಕೇವಲ ಆಚರಣೆಯ ದಿನವಲ್ಲ. ಸಂಕಲ್ಪದ ದಿನವಾಗಿದೆ. ಸ್ವಾತಂತ್ರ್ಯದ ಬೆಲೆಯನ್ನು ಅರಿತು ಅದನ್ನುಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೇಳಿದರು. ಅವರು ಕಿಲ್ಲೆ ಮೈದಾನದ ಮಂಗಲ್ ಪಾಂಡೆ ಚೌಕಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ವಂದನೆ ಸ್ವೀಕರಿಸಿ ಸಂದೇಶ ನೀಡಿದರು. ಪ್ರಗತಿಯಲ್ಲಿ ಭಾರತವು […]

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 79ನೇ ಸ್ವಾತಂತ್ರ್ಯೋತ್ಸವ | ಸ್ವಾತಂತ್ರ್ಯೋತ್ಸವ ಕೇವಲ ಆಚರಣೆಯಲ್ಲ ಬದಲಾಗಿ ಸಂಕಲ್ಪದ ದಿನವಾಗಿದೆ : ಸ್ಟೆಲ್ಲಾ ವರ್ಗೀಸ್ Read More »

ರೋಟರಿ ಕ್ಲಬ್ ಪುತ್ತೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ – ನಂಬಿಕೆಯೇ ಸ್ವಾತಂತ್ರ್ಯದ ಜೀವಾಳ – ಸೀತಾರಾಮ ಕೇವಳ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಇದರ ಸಾಪ್ತಾಹಿಕ ಸಭೆಯಲ್ಲಿ ಪ್ರಧಾನ ಉಪನ್ಯಾಸ ನೀಡಿದ ಸೀತಾರಾಮ ಕೇವಳ ಇವರು ‘ರಾಷ್ಟ್ರೀಯ ಭಾವೈಕ್ಯತೆ’ ವಿಚಾರವಾಗಿ ವಿಶೇಷ ಉಪನ್ಯಾಸ ನೀಡಿದರು. ಪಠ್ಯಕ್ಕೆ ಸೀಮಿತಾವಾಗಿರದೆ ರಾಷ್ಟ್ರೀಯ ಭಾವೈಕ್ಯತೆ ಎಂಬುದು ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಮಹತ್ವದ ಸಂಗತಿ ಎಂದ ಅವರು ನಂಬಿಕೆ ಆತ್ಮೀಯತೆ ಮತ್ತು ಸಹಿಷ್ಣುತೆ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳಬಹುದಾದ ಅತ್ಯಂತ ಮಹತ್ವದ ಸಂಗತಿಗಳು ಎಂದು ಅಭಿಪ್ರಾಯ ಪಟ್ಟರು. ಸಭಾಧ್ಯಕ್ಷತೆಯನ್ನು ವಹಿಸಿದ ಕ್ಲಬ್ಬಿನ ಅಧ್ಯಕ್ಷ Rtn Dr. ಶ್ರೀಪ್ರಕಾಶ್ ಬಂಗಾರಡ್ಕ ಅವರು ಸ್ವಾತಂತ್ರ್ಯೋತ್ಸವ ಮತ್ತು ಕೃಷ್ಣ

ರೋಟರಿ ಕ್ಲಬ್ ಪುತ್ತೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ – ನಂಬಿಕೆಯೇ ಸ್ವಾತಂತ್ರ್ಯದ ಜೀವಾಳ – ಸೀತಾರಾಮ ಕೇವಳ Read More »

ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ನಗರದ ಬಾವುಟ ಗುಡ್ಡೆಯಲ್ಲಿರುವ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು .ಶಾಸಕ ವೇದವ್ಯಾಸ ಕಾಮತ್ ಸಮರವೀರ ರಾಮಯ್ಯರ ತ್ಯಾಗ ಬಲಿದಾನದ ಕುರಿತು ಮಾತನಾಡಿದರು. ತುಳು ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಅವರು ರಾಮಯ್ಯ ಗೌಡರ ವೀರ ಮರಣದ ವಿಚಾರವನ್ನು ತಿಳಿಸಿದರು.ಅತಿಥಿಗಳಾಗಿ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ರಿ. ಮಂಗಳೂರು ಇದರ ಅದ್ಯಕ್ಷೆ ಸೌಮ್ಯ ಸುಕುಮಾರ್ ಬಾಗವಹಿಸಿದರು.ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಡಿ. ಬಿ. ಬಾಲಕೃಷ್ಣ,

ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆ Read More »

ಹರ್ ಘರ್ ತಿರಂಗಾ ಅಭಿಯಾನ: ಬಿಜೆಪಿ ಯುವ ಮೋರ್ಚಾದಿಂದ ರಾಷ್ಟ್ರ ಧ್ವಜ ವಿತರಣೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲ ಪುತ್ತೂರು ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ ಆ. 14 ರಂದು ರಾಷ್ಟ್ರ ಧ್ವಜ ವಿತರಣೆ ನಡೆಯಿತು. ಬ್ರಹ್ಮನಗರ ಕಾಲೋನಿ, ಕೋರ್ಟ್ ರೋಡ್, ಪ್ರಗತಿ ಶಿಕ್ಷಣ ಸಂಸ್ಥೆ ಸೇರಿದಂತೆ ಹಲವು ಕಡೆಗಳಲ್ಲಿ 500 ಕ್ಕೂ ಹೆಚ್ಚು ರಾಷ್ಟ್ರಧ್ವಜ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಗರ ಮಂಡಲದ ಅಧ್ಯಕ್ ಶಿವಾನಂದ್ ಕಳ್ಳಿಮಾರ್, ಯುವ ಮೋರ್ಚಾ

ಹರ್ ಘರ್ ತಿರಂಗಾ ಅಭಿಯಾನ: ಬಿಜೆಪಿ ಯುವ ಮೋರ್ಚಾದಿಂದ ರಾಷ್ಟ್ರ ಧ್ವಜ ವಿತರಣೆ Read More »

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ  ಆಶ್ರಯದಲ್ಲಿ 79 ನೇ  ಸ್ವಾತಂತ್ರ್ಯೋತ್ಸವ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ  79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ  ಕಾಲೇಜಿನ   ಅಧ್ಯಕ್ಷರಾದ ಶ್ರೀಯುತ ಜಯಂತ್  ನಡು  ಬೈಲ್     ಧ್ವಜಾರೋಹಣ  ನೆರವೇರಿಸಿ ಸಮಾರಂಭದಲ್ಲಿ  ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಸ್ವಾತಂತ್ರ್ಯಹೋರಾಟದಲ್ಲಿ   ಭಾಗಿಯಾಗಿ  ತಮ್ಮ   ಜೀವನವನ್ನು ತ್ಯಾಗ ,   ಬಲಿದಾನ ಮಾಡಿದ    , ಭಗತ್ ಸಿಂಗ್, ವೀರ ಸಾವರ್ಕರ್   , ಸುಭಾಷ್ ಚಂದ್ರ ಬೋಸ್, ಅಹಿಂಸಾ  ತತ್ವದಲ್ಲಿ ಅನೇಕ ಚಳುವಳಿಗಳ ಮೂಲಕ  ಸ್ವಾತಂತ್ರ್ಯ ಸಂಗ್ರಾಮ ದ  ಚುಕ್ಕಾಣಿ ಹಿಡಿದ ರಾಷ್ಟ್ರ ಪಿತ   ಮಹಾತ್ಮ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ  ಆಶ್ರಯದಲ್ಲಿ 79 ನೇ  ಸ್ವಾತಂತ್ರ್ಯೋತ್ಸವ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ವಿನಯ ಸುವರ್ಣ ಧ್ವಜಾರೋಹಣ ನೆರವೇರಿಸಿದರು. ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ಚೇತನ್ ಕುಮಾರ್, ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕಿ ದಿವ್ಯ ವಂದಿಸಿ, ಸಾತ್ವಿಕ ಕಾರ್ಯಕ್ರಮ ನಿರೂಪಿಸಿದರು.

ಲಿಟ್ಲ್ ಫ್ಲವರ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ Read More »

ಪುತ್ತೂರು ತಾಲೂಕು ಪಂಚಾಯತಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಭಾರತ ಸ್ವಾತಂತ್ರ್ಯ ಅನೇಕಾ ಬಲಿದಾನಗಳ ಪ್ರತೀಕ. ಅಷ್ಟೇ ಅಲ್ಲದೆ ಸಂವಿಧಾನದ ಮೂಲಕ ದೇಶ ಪ್ರಜೆಗಳು ಪಾಲಿಸಬೇಕಾದ ಕರ್ತವ್ಯವನ್ನು ಸ್ಪಷ್ಟವಾಗಿ ನೀಡಲಾಗಿದೆ. ಆದರೆ ಸ್ವಚ್ಛತೆ, ಭ್ರಾತೃತ್ವ ಹಾಗೂ ಸಮಾಜದಲ್ಲಿ ಶಾಂತಿ ನೆಲೆಸಲು ಪ್ರಜ್ಞಾವಂತ ನಾಗರಿಕರು ಸಹಕರಿಸಬೇಕು ಎಂದು ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಅಭಿಪ್ರಾಯಪಟ್ಟರು.ಅವರು ಪುತ್ತೂರು ತಾಲೂಕು ಪಂಚಾಯಿತಿ ಆವರಣದಲ್ಲಿ 79 ನೇ ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ದೇಶದ ವೈಶಿಷ್ಟ್ಯತೆಗಳನ್ನು, ಪರಂಪರೆಗಳನ್ನು ಉಳಿಸಿ ಬೆಳೆಸಿಕೊಂಡು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ದೇಶವನ್ನು

ಪುತ್ತೂರು ತಾಲೂಕು ಪಂಚಾಯತಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ Read More »

ಕೊಪ್ಪ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ

ಕಾಣಿಯೂರು : ಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79 ನೇ ಸ್ವಾತಂತ್ರ ದಿನಾಚರಣೆಯನ್ನು ಸಡಗರದಿಂದ ಶುಕ್ರವಾರ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸೀತಾರಾಮ ಕೊಪ್ಪರವರು ಧ್ವಜಾರೋಹಣಗೈದು ಶುಭ ಹಾರೈಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರವೀಣ್ ಕುಂಟ್ಯಾನರವರು ಮಾತನಾಡಿ, ಸ್ವಾತಂತ್ರ್ಯಕ್ಕೆ ಹೋರಾಡಿದ ಅದೆಷ್ಟೋ ಮಹಾನ್ ವೀರರಿದ್ದಾರೆ. ಆದರೆ ಇಂದು ಕೆಲವೇ ವ್ಯಕ್ತಿಗಳ ಹೆಸರು ಮಾತ್ರ ನಮಗೆ ತಿಳಿದಿದೆ. ಸ್ಥಳೀಯವಾಗಿ ಹೋರಾಡಿದ ಕೆದಂಬಾಡಿ ರಾಮಯ್ಯ ಗೌಡ ರಂಥ ಮಹನೀಯರ ಕಥೆಗಳನ್ನು ಇಂದಿನ

ಕೊಪ್ಪ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ Read More »

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ನಲ್ಲಿ 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಲರಾಮ ಆಚಾರ್ಯರವರು ಧ್ವಜಾರೋಹಣ ನೆರವೇರಿಸಿ ಮಾತಾನಾಡಿ, ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಸಂಧರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಬಿ. ಆಚಾರ್ಯ, ವೇದ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ ಬಿ. ಆಚಾರ್ಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ Read More »

ನೆಹರೂನಗರದ ಹೊಟೇಲ್ ಶ್ರೀ ಕೃಷ್ಣ ಭವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ನೆಹರೂನಗರದ ಪಟ್ಲ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಹೋಟೆಲ್ ಶ್ರೀ ಕೃಷ್ಣ ಭವನದಲ್ಲಿ ಸಂಭ್ರಮದ 79ನೇ ಸ್ವಾತಂತ್ರೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಹೋಟೆಲ್ ಮಾಲಕರಾದ ಕೃಷ್ಣಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನೆಹರೂನಗರದ ಹೊಟೇಲ್ ಶ್ರೀ ಕೃಷ್ಣ ಭವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ Read More »

error: Content is protected !!
Scroll to Top