ಧಾರ್ಮಿಕ

ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೂಡಿಯಾರು ಹೊಸಮನೆ : ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂಜೆಯ ಪೂರ್ವ ಭಾವಿ ಸಭೆ ಜು.21 ರಂದು ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಪ್ರೀತಮ್ ಪುತ್ತುರಾಯ ರು ಪೂಜೆ ಯ ರೂಪುರೇಷೆ ಗಳ ಬಗ್ಗೆ ತಿಳಿಸಿದರು. ಶ್ರೀ ವರಮಹಾಲಕ್ಷ್ಮಿ ಪೂಜೆಯ ಅಧ್ಯಕ್ಷರಾದ ಭವ್ಯ ರಾಘವೇಂದ್ರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಸಿ ಟಿ ಸುರೇಶ್, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ, ಹಾಗೂ ಗಣ್ಯರು ಉಪಸ್ಥಿತರಿದ್ದರು.

ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ | ಆಮಂತ್ರಣ ಪ್ರತಿಕೆ ಬಿಡುಗಡೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವದ ವತಿಯಿಂದ ಸೆ.7 ರಿಂದ 10 ರ ತನಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜರುಗಲಿರುವ ಗಣೇಶೋತ್ಸವ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ಜು.21 ರಂದು ಆದರ್ಶ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಸಮಿತಿ ಗೌರವಾಧ್ಯಕ್ಷ ಡಾ. ಎಂ ಕೆ ಪ್ರಸಾದ್, ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ,ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ನೀಲಂತ್ ಬೊಳುವಾರು, ಶ್ರೀನಿವಾಸ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ | ಆಮಂತ್ರಣ ಪ್ರತಿಕೆ ಬಿಡುಗಡೆ Read More »

ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬ ದರ್ಶನಕ್ಕೆ ಸಂಪ್ರಾದಾಯಿಕ ಉಡುಗೆ ಕಡ್ಡಾಯ | ಆಡಳಿತ ಮಂಡಳಿ ನಿರ್ಧಾರ

ಶೃಂಗೇರಿ: ಶ್ರೀ ಕ್ಷೇತ್ರ ಶೃಂಗೇರಿಯ ಶಾರದಾಂಬೆಯ ದರ್ಶನಕ್ಕೆ ಬರುವ ಭಕ್ತಾದಿಗಳು ಆ.15 ರಿಂದ ಭಾರತೀಯ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯವಾಗಿ ತೊಡಬೇಕೆಂದು ಆದೇಶಿಸಿದೆ. ಈ ಕುರಿತು  ಶೃಂಗೇರಿ ಶಾರದಾಂಬೆ ಆಡಳಿತ ಮಂಡಳಿ  ನಿರ್ಧರಿಸಿದೆ. ಸಾಂಪ್ರದಾಯಿಕವಲ್ಲದ ಉಡುಗೆ ತೊಟ್ಟು ಬಂದವರಿಗೆ ಅರ್ಧಮಂಟಪದ ಒಳಗೆ ಪ್ರವೇಶವಿರುವುದಿಲ್ಲ, ಬದಲಾಗಿ ಹೊರಗಿನಿಂದಲೇ ದೇವರ ದರ್ಶನ ಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಸಾಂಪ್ರದಾಯಿ ಉಡುಗೆ ಹೀಗಿದೆ ಪುರುಷರು ಧೋತಿ ಅಥವಾ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ, ರವಿಕೆ, ಸಲ್ವಾರ್ ಜೊತೆಗೆ ದುಪ್ಪಟ ಅಥವಾ ಲಂಗ

ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬ ದರ್ಶನಕ್ಕೆ ಸಂಪ್ರಾದಾಯಿಕ ಉಡುಗೆ ಕಡ್ಡಾಯ | ಆಡಳಿತ ಮಂಡಳಿ ನಿರ್ಧಾರ Read More »

ಜು.28: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ  ‘ಕಂಡಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಈಶ್ವರಮಂಗಲ ಒಕ್ಕಲಿಗ ಗೌಡ ಸೇವಾ ಸಂಘ, ಮಹಿಳಾ ಸಂಘ ಮತ್ತು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಈಶ್ವರಮಂಗಲ ಇವರ ಸಹಯೋಗದಲ್ಲಿ ಜು. 28 ರಂದು ಈಶ್ವರಮಂಗಲ ಮರಕ್ಕಡ  ಗದ್ದೆಯಲ್ಲಿ ನಡೆಯಲಿದೆ. ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾಕೂಟದೊಂದಿಗೆ “ಕಂಡಡೊಂಜಿ ದಿನ” ಕಾರ್ಯಕ್ರಮ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು. 16 ರಂದು ನಡೆಯಿತು.  ಈ ಸಂದರ್ಭದಲ್ಲಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಈಶ್ವರಮಂಗಲ

ಜು.28: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ  ‘ಕಂಡಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಆಲಡ್ಕ ಶ್ರೀ‌ ಸದಾಶಿವ ದೇವಸ್ಥಾನದ ಗೇಟ್ ಉದ್ಘಾಟನೆ, ಪುಷ್ಪವನ ಲೋಕಾರ್ಪಣೆ

ಪುತ್ತೂರು: ಆಲಡ್ಕ‌ಶ್ರೀ ಸದಾಶಿವ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಖ್ಯ ಗೇಟ್ ಮತ್ತು ಪುಷ್ಪವನದ  ಉದ್ಘಾಟನೆ ಇಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟನೆ ನೆರವೇರಿಸಿ ಮಾತನಾಡಿ, ಆಲಡ್ಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆದಿತ್ತು. ಇದರಲ್ಲಿ ಉಳಿಕೆಯಾದ ಹಣವನ್ನು‌ ದೇವಸ್ಥಾನದ ಕಾರ್ಯಕ್ಕೆ ಬಳಕೆ ಮಾಡಲಾಗಿದೆ. ಆಲಡ್ಕ ದೇವಸ್ಥಾನದಲ್ಲಿರುವ ವ್ಯವಸ್ಥಾಪನಾ ಸಮಿತಿ ಮತ್ತು ಭಕ್ತರು ಹಾಗೂ ಬ್ರಹ್ಮಕಲಶ ಸಮಿತಿ ಉತ್ತಮ ಕೆಲಸ ಮಾಡಿರುವುದು ಎಲ್ಲರಿಗೂ‌ ಮಾದರಿಯಾಗಿದೆ ಎಂದು ಹೇಳಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಇಲ್ಲಿನ

ಆಲಡ್ಕ ಶ್ರೀ‌ ಸದಾಶಿವ ದೇವಸ್ಥಾನದ ಗೇಟ್ ಉದ್ಘಾಟನೆ, ಪುಷ್ಪವನ ಲೋಕಾರ್ಪಣೆ Read More »

ಕೊರಗಜ್ಜನ ಆದಿಸ್ಥಾನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್ ಸಹಿತ ಸೆಲಬ್ರಿಟಿಗಳು | ಹರಕೆ ತೀರಿಸಿದ ಸೆಲೆಬ್ರಿಟಿಗಳು

ಮಂಗಳೂರು: ಬಾಲಿವುಡ್ ನಟಿ ಕತ್ರಿನಾ ಕೈಪ್, ಸೇರಿದಂತೆ ಸುನೀಲ್ ಶೆಟ್ಟಿ, ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರು ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದಾರೆ. ತುಳುನಾಡಿನವರೇ ಆಗಿರುವ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರ, ಪುತ್ರಿ, ಅಳಿಯನ ಜೊತೆ ಖ್ಯಾತ ನಟಿ ಕತ್ರಿನಾ ಕೈಫ್ ಕೂಡ ಕೊರಗಜ್ಜನ ಸನ್ನಿಧಿಗೆ ಆಗಮಿಸಿ ಕೋಲದಲ್ಲಿ ಭಾಗವಹಿಸಿದ್ದಾರೆ. ಜುಲೈ 14ರ ಭಾನುವಾರ ಕುತ್ತಾರು ಕೊರಗಜ್ಜನ ಕ್ಷೇತ್ರದಲ್ಲಿ ಕಟ್ಟೆ ಕೋಲ ನಡೆದಿದ್ದು,

ಕೊರಗಜ್ಜನ ಆದಿಸ್ಥಾನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್ ಸಹಿತ ಸೆಲಬ್ರಿಟಿಗಳು | ಹರಕೆ ತೀರಿಸಿದ ಸೆಲೆಬ್ರಿಟಿಗಳು Read More »

ಬರೋಬ್ಬರಿ 46 ವರ್ಷಗಳ ಬಳಿಕ ತೆರೆದ ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’

ಭುವನೇಶ್ವರ: ಬರೋಬ್ಬರಿ 46 ವರ್ಷಗಳ ಬಳಿಕ ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ವನ್ನು ತೆರೆಯಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಆರು ವರ್ಷಗಳ ಬಳಿಕ ಈ ರತ್ನ ಭಂಡಾರದ ಬಾಗಿಲನ್ನು ನಕಲಿ ಕೀಲಿಕ್ಕೆ ಬಳಸಿ ಭಾನುವಾರ ಮಧ್ಯಾಹ್ನ 1.28ರ ಶುಭ ಮುಹೂರ್ತದಲ್ಲಿ ತೆರೆಯಲಾಯಿತು. ಪುರಿ ಜಗನ್ನಾಥ ದೇಗುಲದಲ್ಲಿರುವ ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದ್ದು, ಅದು ಅವುಗಳ ತೂಕ ಮತ್ತು ತಯಾರಿಕೆಯ ವಿವರಗಳನ್ನು ಹೊಂದಿರುತ್ತದೆ. ಅಲ್ಲದೆ ರತ್ನ ಭಂಡಾರ ದೀರ್ಘಕಾಲದಿಂದ

ಬರೋಬ್ಬರಿ 46 ವರ್ಷಗಳ ಬಳಿಕ ತೆರೆದ ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ Read More »

ನರೇಂದ್ರ ಕಾಲೇಜು ವಿದ್ಯಾರ್ಥಿಗಳಿಂದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ಪುತ್ತೂರು: ಸ್ವಚ್ಛತೆ ಎಂಬುದು ಭಾರತೀಯ ಸಂಸ್ಕೃತಿಯ ಒಂದು ಅಂಗವಾಗಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಇಡೀ ದೇಶವೇ ಮತ್ತೊಮ್ಮೆ ಸ್ಪೂರ್ತಿ ಪಡೆದುಕೊಂಡು ದೇಶ ಸ್ವಚ್ಛತೆಯತ್ತ ಕಾಲಿಡುತ್ತಿದೆ ಎಂದು ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣು ಸೇವಾ ಸಮಿತಿ ಅಧ್ಯಕ್ಷ ಮಧು ನರಿಯೂರು ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಕಾರ್ಯದ ಸಂದರ್ಭ ಅವರು ಮಾತನಾಡಿದರು. ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಮಹಾವಿಷ್ಣು

ನರೇಂದ್ರ ಕಾಲೇಜು ವಿದ್ಯಾರ್ಥಿಗಳಿಂದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ Read More »

ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ

ಪುತ್ತೂರು: ಪುತ್ತೂರು ನವ್ಯಶ್ರೀ ಮಹಿಳಾ ಮಂಡಲ ಹಾಗೂ ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ ದುರ್ಗಾವಾಹಿನಿ ವತಿಯಿಂದ ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ ಮಂಗಳವಾರ ಸಂಜೆ ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದ ಕಲ್ಯಾಣ ಮಂಠಪದಲ್ಲಿ ನಡೆಯಿತು. ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರ ನೇತೃತ್ವದಲ್ಲಿ ರಾಜೇಶ್‍ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ನೂರಾರು ಮಂದಿ ಪೂಜಾ ಸೇವೆ ಮಾಡಿಸಿದರು.

ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ Read More »

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಸುಬ್ರಹ್ಮಣ್ಯ: ಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿದರು. ಸುಬ್ರಹ್ಮಣ್ಯ ನ ದರ್ಶನ ಪಡೆದ ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ನಾಣ್ಯಗಳ ತುಲಾಭಾರ ಸೇವೆ ನೆರವೇರಿಸಿದರು. ಈ ವೇಳೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಇತರೆ ಬಿಜೆಪಿ ನಾಯಕರು ಬಿ ಎಸ್ ಯಡಿಯೂರಪ್ಪ ಅವರ ಜೊತೆಗಿದ್ದರು.

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read More »

error: Content is protected !!
Scroll to Top