ಇಂದಿನಿಂದ ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಭಕ್ತರ ಜಯಘೋಷದೊಂದಿಗೆ ನೆರವೇರಿದ ಧ್ವಜಾರೋಹಣ | ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ
ಪುತ್ತೂರು: ಏ.10 ರಿಂದ 20 ರ ತನಕ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಗುರುವಾರ ಬೆಳಿಗ್ಗೆ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ವಿ.ಎಸ್. ಭಟ್ ಅವರು ವೈದಿಕ ವಿಧಾನಗಳನ್ನು ನೆರವೇರಿಸಿದರು. ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ಬಳಿಕ ಭಕ್ತಾದಿಗಳ ಜಯಘೋಷದೊಂದಿಗೆ ಧ್ವಜಾರೋಹಣ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ […]