ಧಾರ್ಮಿಕ

ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಇಂದು ಮತ್ತು ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ | ಪಾರ್ಕಿಂಗ್‍ ಗೆ ಸ್ಥಳ ನಿಗದಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವುದು ಹಾಗೂ ನಾಳೆ ನಡೆಯುವ ರಥೋತ್ಸವದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ವಾಹನ ಸಂಚಾರ ಬದಲಾವಣೆ ಸಹಿತ ಪಾರ್ಕಿಂಗ್ ವ್ಯವಸ್ಥೆಗೂ ಸೂಕ್ತ ಸ್ಥಳ ಗುರುತಿಸುವ ಕುರಿತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಪೊಲೀಸ್ ಇಲಾಖೆ ವರದಿ ನೀಡಿದೆ. ಸಹಾಯಕ ಆಯುಕ್ತರ […]

ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಇಂದು ಮತ್ತು ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ | ಪಾರ್ಕಿಂಗ್‍ ಗೆ ಸ್ಥಳ ನಿಗದಿ Read More »

ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಟ್ಟೆಯಲ್ಲಿ ಪೂಜೆಗೊಂಡ ಶ್ರೀ ಮಹಾಲಿಂಗೇಶ್ವರ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಶನಿವಾರ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ಶ್ರೀ ದೇವರಿಗೆ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ

ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಟ್ಟೆಯಲ್ಲಿ ಪೂಜೆಗೊಂಡ ಶ್ರೀ ಮಹಾಲಿಂಗೇಶ್ವರ Read More »

ಚಾಕೊಟೆತ್ತಡಿ ಮಾಡದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಪಾಲ್ತಾಡಿ ಸಮೀಪದ ಶ್ರೀ ಧರ್ಮರಸು ಉಳ್ಳಾಕುಲು ದೇವಸ್ಥಾನ ಚಾಕೊಟೆತ್ತಡಿ ಮಾಡದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಇಂದು ಬೆಳಿಗ್ಗೆ ನಡೆಯಿತು. ಏ.22 ರಿಂದ 24 ರ ತನಕ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.

ಚಾಕೊಟೆತ್ತಡಿ ಮಾಡದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

ಸಾವಿರ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶು ಕಣಿ ಪೂಜೆ

ಪಂಜ : ಸಾವಿರ ಸೀಮೆಯ ಒಡೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಪ್ರಯುಕ್ತ ವಿಶು ಕಣಿ ಪೂಜೆ ಇಂದು ಜರುಗಿತು. ಸ್ಥಳೀಯ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸಾವಿರ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶು ಕಣಿ ಪೂಜೆ Read More »

ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ  ಏಕಾಹ ಭಜನೋತ್ಸವದ ಸಂಭ್ರಮ

ಕಡಬ : ಕಡಬದಲ್ಲಿ ಜರಗುವ ಏಕಾಹ ಭಜನಾ ಮಹೋತ್ಸವ ಜಿಲ್ಲೆಯಲ್ಲಿಯೇ ವಿಶಿಷ್ಟ ಸ್ಥಾನ ಪಡೆದಿದೆ. ಊರ ಜಾತ್ರೆಯಂತೆ ನಡೆಯುವ ಈ ಏಕಾಹ ಭಜನೆಗೆ ಶುಕ್ರವಾರದಂದು ಜನ ಸಾಗರವೇ ಹರಿದು ಬಂದಿದೆ.  ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನಡೆಯುವ ಈ ಏಕಾಹ ಭಜನೋತ್ಸವದ ಸಂಭ್ರಮದಲ್ಲಿ ದ.ಕ.ಜಿಲ್ಲೆಯ ಹಲವು ಕಡೆಗಳಿಂದ ಭಜನಾ ಸಂಘಗಳು ಕಡಬದ ಏಕಾಹ ಭಜನೆಗೆ ಆಗಮಿಸಿ ಭಜನಾ ಸೇವೆಯನ್ನು ಸಲ್ಲಿಸುವುದು ಇಲ್ಲಿನ ಮೆಚ್ಚಿಗೆಗೆ  ಪಾತ್ರವಾಗಿದೆ. ಏಕಾಹ ಭಜನೆ ಆರಂಭವಾದಗಿನಿಂದಲೂ  ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ಸುಬ್ರಹ್ಮಣ್ಯ

ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ  ಏಕಾಹ ಭಜನೋತ್ಸವದ ಸಂಭ್ರಮ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ದಶ ದಿಕ್ಕುಗಳಿಗೆ ಪೇಟೆ ಸವಾರಿ | ಭಕ್ತ ಸಮೂಹದಲ್ಲಿ ಸಂಭ್ರಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಜಾತ್ರೋತ್ಸವಕ್ಕೆ ಕಳೆದ ಮೂರು ದಿನಗಳ ಹಿಂದೆ ಚಾಲನೆ ನೀಡಲಾಗಿದ್ದು, ಪ್ರತಿದಿನ ರಾತ್ರಿ ಶ್ರೀ ದೇವರು ಒಂದೊಂದು ಕಡೆ ಪೇಟೆ ಸವಾರಿಗೆ ತೆರಳುವ ಮೂಲಕ ಆ ಪ್ರದೇಶದ ಭಕ್ತ ಸಮೂಹದಲ್ಲಿ ಸಂಭ್ರಮ ಮನೆ ಮಾಡಿದೆ. ಮನೆ ಬಾಗಿಲಿಗೆ ತೆರಳು ದೇವರು ಎಂದು ಪ್ರಸಿದ್ಧಿ ಪಡೆದ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಪ್ರತಿನಿತ್ಯ ಸಂಜೆ ಶ್ರೀ ದೇವರ ಬಲಿ ಉತ್ಸವ ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣದಲ್ಲಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ದಶ ದಿಕ್ಕುಗಳಿಗೆ ಪೇಟೆ ಸವಾರಿ | ಭಕ್ತ ಸಮೂಹದಲ್ಲಿ ಸಂಭ್ರಮ Read More »

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಆರಂಭ – ಏ.11 ರಿಂದ 12 ವರೆಗೆ

ಸುಳ್ಯ: ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಕಾಲಾವಧಿ ಜಾತ್ರೋತ್ಸವವು ಎ.11ರಂದು ಬೆಳಿಗ್ಗೆ ಉಗ್ರಾಣ ತುಂಬಿಸುವುದರ ಮೂಲಕ ಪ್ರಾರಂಭಗೊಂಡಿದ್ದು, ನಾಳೆ ರಾತ್ರಿ ಶ್ರೀ ಪಂಚಲಿಂಗೇಶ್ವರ ದೇವರ ನೃತ್ಯಬಲಿ, ಬಟ್ಟಲುಕಾಣಿಕೆ ಉತ್ಸವ ಜರುಗಲಿದೆ. ಇಂದು ಬೆಳಿಗ್ಗೆ ದೇಗುಲದಲ್ಲಿ ಪರಿವಾರ ದೈವಗಳ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಇಂದು ಸಂಜೆ ತಂತ್ರಿಗಳ ಆಗಮನ, ದೇವತಾ ಪ್ರಾರ್ಥನೆ, ಪಶುದಾನ, ಪುಣ್ಯಾಹ, ಪ್ರಸಾದ ಶುದ್ದಿ, ರಾಕ್ಷೆಘ್ನ

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಆರಂಭ – ಏ.11 ರಿಂದ 12 ವರೆಗೆ Read More »

ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ ಧ್ವಜಾರೋಹಣ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಬುಧವಾರ ಬೆಳಿಗ್ಗೆ ಧ್ವಜಾರೋಹಣದ ಮೂಲಕ ವೈಭವದ ಚಾಲನೆ ನೀಡಲಾಯಿತು. ಬೆಳಿಗ್ಗೆ 9.25 ನಂತರದ ವೃಷಭ ಲಗ್ನದಲ್ಲಿ ಭಕ್ತಾದಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್‍.ಭಟ್ ಹಾಗೂ ವಸಂತ ಕೆದಿಲಾಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರು, ಸದಸ್ಯರು, ಅರ್ಚಕರು, ಸಿಬ್ಬಂದಿಗಳು, ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ಏ.1 ರಂದು ಗೊನೆ ಮುಹೂರ್ತ ನಡೆದಿತ್ತು. ಗೊನೆ ಮುಹೂರ್ತ

ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ ಧ್ವಜಾರೋಹಣ Read More »

1300 ವರ್ಷ ಹಳೆಯ ಶಾಸನ ಪತ್ತೆ| ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶಾಸನ- ಶೋಧನ- ಅಧ್ಯಯನ -ಸಂರಕ್ಷಣ ತಂಡದಿಂದ ಕುರುಹುಗಳ ಪರಿಶೀಲನೆ

ಬೆಳ್ಳಾರೆ: ಬೆಳ್ಳಾರೆಯ ಗೌರಿಪುರಂ ಎಂಬಲ್ಲಿ ಶ್ರೀ ರಾಜರಾಜೇಶ್ವರಿ ಸಾನಿಧ್ಯವಿರುವ ಕ್ಷೇತ್ರದ ಪರಿಸರದಲ್ಲಿ ಪತ್ತೆಯಾದ ಕೆಲವು ಶಾಸನ ಇತ್ಯಾದಿ ಪರಿಕರ ಕುರುಹು ಗಳ ಪರಿಶೀಲನೆಗೆ ಶಾಸನ ತಜ್ಞರಾದ ಡಾ.ಉಮಾನಾಥ್ ಶೆಣೈ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ  ಪುತ್ತೂರು ಉಮೇಶ್ ನಾಯಕ್ ಭೇಟಿ ನೀಡಿ  ಪರಿಶೀಲಿಸಿದರು. ಪರಿಶೀಲನೆಯ ಸಮಯದಲ್ಲಿ ಪುರಾತನ ಕಾಲದಲ್ಲಿ ವೈಭವದಲ್ಲಿ ಮೆರೆದ ದೇವಸ್ಥಾನದ ಕುರುಹುಗಳು, ಪಾಣಿಪೀಠ, ಸೋಮಸೂತ್ರ, ಬಲಿಕಲ್ಲು, ಇತ್ಯಾದಿಗಳು ಪತ್ತೆಯಾಗಿವೆ. ಮಾತ್ರವಲ್ಲದೆ ವಿಶೇಷವಾಗಿ   ದೇವಸ್ಥಾನವಿರುವ ಸ್ಥಳದಿಂದ ಸುಮಾರು 300 ಮೀಟರ್ ದೂರದ ದೇವರ

1300 ವರ್ಷ ಹಳೆಯ ಶಾಸನ ಪತ್ತೆ| ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶಾಸನ- ಶೋಧನ- ಅಧ್ಯಯನ -ಸಂರಕ್ಷಣ ತಂಡದಿಂದ ಕುರುಹುಗಳ ಪರಿಶೀಲನೆ Read More »

ನಾಳೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ | ಕುರಿಯ ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿಯಿಂದ ವಿಶೇಷ ಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ

ಪುತ್ತೂರು: ಕುಡಿಯ ಮಾಡಾವು ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ನಾಳೆ ನಡೆಯುವ ಧ್ವಜಾರೋಹಣದ ಅಂಗವಾಗಿ ಶ್ರೀ ದೇವಸ್ಥಾನದಲ್ಲಿ ಮಹಾಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ಧ್ವಜಾರೋಹಣ ದಿನದಂದು ಪೂರ್ವಶಿಷ್ಠ ಪದ್ಧತಿಯಂತೆ ಕುರಿಯ ಮಾಡಾವು ಏಳ್ನಾಡುಗುತ್ತು ಮನೆತನದ ಶ್ರೇಯಸ್ಸು ಹಾಗೂ ಗೌರವಾರ್ಥವಾಗಿ ನಡೆಯುವ ಕಾರ್ಯಕ್ರಮದ ಅಂಗವಾಗಿ ಈ ವಿಶೇಷ ಪೂಜೆ ನಡೆಯಲಿದೆ. ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಭಗವಂತನ ಅನುಗ್ರಹಕ್ಕೆ

ನಾಳೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ | ಕುರಿಯ ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿಯಿಂದ ವಿಶೇಷ ಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ Read More »

error: Content is protected !!
Scroll to Top