ನಾಳೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ | ಕುರಿಯ ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿಯಿಂದ ವಿಶೇಷ ಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ
ಪುತ್ತೂರು: ಕುಡಿಯ ಮಾಡಾವು ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ನಾಳೆ ನಡೆಯುವ ಧ್ವಜಾರೋಹಣದ ಅಂಗವಾಗಿ ಶ್ರೀ ದೇವಸ್ಥಾನದಲ್ಲಿ ಮಹಾಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ಧ್ವಜಾರೋಹಣ ದಿನದಂದು ಪೂರ್ವಶಿಷ್ಠ ಪದ್ಧತಿಯಂತೆ ಕುರಿಯ ಮಾಡಾವು ಏಳ್ನಾಡುಗುತ್ತು ಮನೆತನದ ಶ್ರೇಯಸ್ಸು ಹಾಗೂ ಗೌರವಾರ್ಥವಾಗಿ ನಡೆಯುವ ಕಾರ್ಯಕ್ರಮದ ಅಂಗವಾಗಿ ಈ ವಿಶೇಷ ಪೂಜೆ ನಡೆಯಲಿದೆ. ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಭಗವಂತನ ಅನುಗ್ರಹಕ್ಕೆ […]