ಮೇಲಿನ ಮುಕ್ಕೂರು ತರವಾಡು ಕ್ಷೇತ್ರ : ಜೀರ್ಣೋದ್ಧಾರದ ಪೂರ್ವಭಾವಿ ಸಭೆ | ಎ.18 : ಗಣಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ
ಮುಕ್ಕೂರು : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿಗಳ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ಅಷ್ಟಮಂಗಲ ಚಿಂತನೆಯ ಪ್ರಕಾರ ಊರವರ ಸಹಕಾರದೊಂದಿಗೆ ಸ್ಥಳ ಸಾನಿಧ್ಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ಸಂಕಲ್ಪ ತೊಡಲಾಗಿದ್ದು ಇದರ ಭಾಗವಾಗಿ ಶ್ರೀ ಕ್ಷೇತ್ರದಲ್ಲಿ ಎ.18 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಮುಖ್ಯಸ್ಥ ಮೋಹನ ಬೈಪಡಿತ್ತಾಯ, ವಸಂತ ಬೈಪಡಿತ್ತಾಯ, ಲಕ್ಷ್ಮೀಶ ಬೈಪಡಿತ್ತಾಯ ಅವರು ದೈವ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ಮಾ.24 […]