ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ವೈಭವದ ಚಾಲನೆ | ಹೊರೆಕಾಣಿಕೆ ಸಮರ್ಪಣೆ, ಶ್ರೀ ಮಹಾಮೃತ್ಯುಂಜಯ ಹೋಮ
ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ವೈಭವದ ಚಾಲನೆ ನೀಡಲಾಯಿತು. ಗುರುವಾರ ಬೆಳಿಗ್ಗೆ ಶ್ರೀ ದೇವರಿಗೆ ಹೊರೆಕಾಣಿಕೆ ಸಮರ್ಪಣೆಯಾಗಿ ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಶುಕ್ರವಾರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ಥಿ ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ ನಡೆದು ಬಳಿಕ ಶ್ರೀ ಮಹಾಮೃತ್ಯುಂಜಯ ಹೋಮ ಆರಂಭಗೊಂಡು 11.30 ಕ್ಕೆ ಹೋಮದ ಪೂರ್ಣಾಹುತಿ ನಡೆಯಿತು. ಮಧ್ಯಾಹ್ನ 12.30 ಕ್ಕೆ ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ […]