ಮಾ.8-9-10 : ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು
ಪುತ್ತೂರು: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಶಾಂತಿಗೋಡು ಗ್ರಾಮದ ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಶ್ರೀ ಸತ್ಯನಾರಾಯಣ ಪೂಜೆ, ಬಲಿವಾಡು ಕೂಟ ಹಾಗೂ ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ಮಾ.8, 9 ಹಾಗೂ 10 ರಂದು ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಗೌರವ ಸಲಹೆಗಾರ ರತ್ನಾಕರ ಪಿ.ಎಸ್. ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 800 ವರ್ಷಗಳ ಹಿಂದೆ ಈ ದೇವಸ್ಥಾನಕ್ಕೆ ಬೆಂಕಿ ಬಿದ್ದಿದ್ದು, ಸಂಪೂರ್ಣ ನಾಶಗೊಂಡಿತ್ತು. ಬಳಿಕ ಮೊದಲು ದೇವಸ್ಥಾನ ಇದ್ದ […]