ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ “ರಜತ ಪಥ” | ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ, ಕುಣಿತ ಭಜನೆ | ಶ್ರೀ ದೇವರಿಗೆ ರಜತ ಕವಚ ಸಮರ್ಪಣೆ
ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ ಉತ್ಸವ ‘ರಜತ ಪಥ’ ಫೆ.26 ಬುಧವಾರ ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬೆಳಿಗ್ಗೆ 6.30 ರಿಂದ ಸಂಜೆ 6.30 ರ ತನಕ ಅರ್ಧ ಏಕಾಹ ಭಜನೆ, ಬೆಳಿಗ್ಗೆ 7.30 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಏಕಾದಶ ರುದ್ರಾಭಿಷೇಕ, ಶ್ರೀ ಪಂಚಲಿಂಗೇಶ್ವರ ದೇವರಿಗೆ ರಜತ ಕವಚ ಸಮರ್ಪಣೆ, ಶ್ರೀ ರುದ್ರಯಾಗದ ಪ್ರಾರಂಭ, ಮಧ್ಯಾಹ್ನ […]










