ಧಾರ್ಮಿಕ

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಡಿವಿಎಸ್ ಭೇಟಿ

ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಮಂಗಳವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ ಸ್ವಯಂಸೇವಕರಾಗಿ ದುಡಿದ ಎಲ್ಲರೊಂದಿಗೂ ಮಾತನಾಡಿ ಖುಷಿಪಡಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್,  ಬ್ರಹ್ಮಕಲಶೋತ್ಸವ ಸಮಿತಿಯ ಆಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ […]

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಡಿವಿಎಸ್ ಭೇಟಿ Read More »

ಇಂದು :  ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ,ವರ್ಷಾವಧಿ ನೇಮೋತ್ಸವ |ಕಾಪು ರಂಗ ತರಂಗ ಕಲಾವಿದರ ಅಭಿನಯದ ಒರಿಯೆ ನಾಟಕ ಪ್ರದರ್ಶನ

ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು ಮಾಡ ,ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ.1ರಂದು ವರ್ಷಾವಧಿ ನೇಮೋತ್ಸವ ನಡೆಯಲಿದೆ. ದೈವಸ್ಥಾನದಲ್ಲಿ ಮೇ.1ರಂದು ಬೆಳಿಗ್ಗೆ 7.30ರಿಂದ ಗಣಹೋಮ, ನವಕ ಕಲಶ ,ಬೆಳಿಗ್ಗೆ11ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ,ಮಧ್ಯಾಹ್ನ ಮಹಾಪೂಜೆ ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.ಸಂಜೆ 6.30ಕ್ಕೆ ಶ್ರೀ ದೈವಗಳ ಭಂಡಾರ ತೆಗೆಯುವುದು, ಅನ್ನಸಂತರ್ಪಣೆ. ರಾತ್ರಿ 11 ರಿಂದ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. ಮೇ.2ರಂದು

ಇಂದು :  ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ,ವರ್ಷಾವಧಿ ನೇಮೋತ್ಸವ |ಕಾಪು ರಂಗ ತರಂಗ ಕಲಾವಿದರ ಅಭಿನಯದ ಒರಿಯೆ ನಾಟಕ ಪ್ರದರ್ಶನ Read More »

ಮೇ 1-2 : ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

ಪುತ್ತೂರು: ತಾಲೂಕಿನ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಮೇ 1 ಹಾಗೂ 2 ರಂದು ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಮೇ 1 ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ  9 ಕ್ಕೆ ಗಣಪತಿ ಹೋಮ, ಮಧ್ಯಾಹ್ನ 12.30 ಕ್ಕೆ ವಿಶೇಷ ಪೂಜೆ, ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30 ಕ್ಕೆ ಮಹಾಪೂಜೆ, ರಾತ್ರಿ 7 ರಿಂದ ಶ್ರೀ ಭೂತ ಬಲಿ ಉತ್ಸವ, ವಸಂತ ಪೂಜೆ,

ಮೇ 1-2 : ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ Read More »

ನಾಳೆ (ಮೇ1) : ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಮಳೆಗಾಗಿ ವಿಶೇಷ ಪೂಜೆ

ಪುತ್ತೂರು: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಮೇ1 ರಂದು ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ 12 ಕಾಯಿ ಗಣಪತಿ ಹವನ, ಆಶ್ಲೇಷ ಬಲಿ, ಶತ ರುದ್ರಾಭಿಷೇಕ, ಸೀಯಾಳ ಅಭಿಷೇಕ, ಕಲಶಾಭಿಷೇಕ ಸೇವೆಗಳೊಂದಿಗೆ ಶೀಘ್ರ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಸೀಯಾಳ ಅಭಿಷೇಕ ಹಾಗೂ ಶತರುದ್ರ ಅಭಿಷೇಕ ಸೇವೆಗೆ ಸೀಯಾಳ ಅಗತ್ಯವಿದ್ದು ಆದಷ್ಟು ಸೀಯಾಳವನ್ನು ಇಂದು (ಏ.30) ದೇವಳಕ್ಕೆ

ನಾಳೆ (ಮೇ1) : ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಮಳೆಗಾಗಿ ವಿಶೇಷ ಪೂಜೆ Read More »

ಸುಳ್ಯ ಶ್ರೀ ಚೆನ್ನಕೇಶವ ದೇವರಿಗೆ ಬ್ರಹ್ಮರಥ ನಿರ್ಮಾಣ | ವೀಳ್ಯ ಪ್ರದಾನ

ಸುಳ್ಯ:  ಶ್ರೀ ಚನ್ನಕೇಶವ ದೇವರಿಗೆ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆ ಡಾ.ಕೆ.ವಿ ಚಿದಾನಂದ ರವರು ಸಮರ್ಪಿಸುವ ನೂತನ ಬ್ರಹ್ಮ ರಥ ನಿರ್ಮಾಣಕ್ಕೆ ವೀಳ್ಯ ಪ್ರದಾನ ಮಾಡಲಾಯಿತು. ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥಿಸಿ ರಥ ಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ ರಿಗೆ ವೀಳ್ಯಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಹರಪ್ರಸಾದ ತುದಿಯಡ್ಕ. ಡಾ .ಕೆ.ವಿ ಚಿದಾನಂದ ದಂಪತಿ, ಲಿಂಗಪ್ಫ ಗೌಡ ಕೇರ್ಪಳ, ಡಾ.ಲೀಲಾಧರ, ಹರಿರಾಯ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಸುಳ್ಯ ಶ್ರೀ ಚೆನ್ನಕೇಶವ ದೇವರಿಗೆ ಬ್ರಹ್ಮರಥ ನಿರ್ಮಾಣ | ವೀಳ್ಯ ಪ್ರದಾನ Read More »

ಮಳೆಗಾಗಿ ಶ್ರೀ‌ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಪರ್ಜನ್ಯ ಜಪ

ಪುತ್ತೂರು: ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನ‌ಸಂಕಷ್ಡ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ಶಾಸಕರ ಸೂಚನೆಯಂತೆ ಪರ್ಜನ್ಯ ಜ‌ಪ ಭಾನುವಾರ ನೆರವೇರಿತು. ಜಪ ಕಾರ್ಯಕ್ರಮದಲ್ಲಿ‌ಶಾಸಕ ಅಶೋಕ್ ರೈಭಾಗವಹಿಸಿ ಮಳೆಗಾಗಿ ದೇವರಲ್ಲಿ‌ ಪ್ರಾರ್ಥನೆ ಮಾಡಿದರು. ಈ‌ಸಂದರ್ಭದಲ್ಲಿ ಪಂಜಿಗುಡ್ಡೆ ಈಶ್ವರ ಭಟ್, ನ್ಯಾಯವಾದಿ ಜಗನ್ನಿವಾಸ್ ರಾವ್, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ರಂಜಿತ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

ಮಳೆಗಾಗಿ ಶ್ರೀ‌ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಪರ್ಜನ್ಯ ಜಪ Read More »

ಬಲ್ನಾಡು ಶ್ರೀ ದಂಡನಾಯಕ-ಉಳ್ಳಾಲ್ತಿ, ದೈವಗಳ ನೇಮ ನಡಾವಳಿ | ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತ ಭಕ್ತಾದಿಗಳಿಂದ ಮಲ್ಲಿಗೆ, ಪಟ್ಟೆಸೀರೆ ಅರ್ಪಣೆ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿ ಏ.28 ಭಾನುವಾರ ನಡೆಯಿತು. ಶನಿವಾರ ರಾತ್ರಿ ಗಂಟೆ 7 ರಿಂದ ಶ್ರೀ ದೈವಗಳ ಭಂಡಾರ ತೆಗೆದು ಬಳಿಕ ತಂಬಿಲಾದಿಗಳು ಜರಗಿತು. ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಏ.28 ಭಾನುವಾರ ಮುಂಜಾನೆಯಿಂದಲೇ ಸಹಸ್ರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಮಲ್ಲಿಗೆ ಪ್ರಿಯೆ ಉ:ಳ್ಳಾಲ್ತಿ ಅಮ್ಮನವರಿಗೆ ಮಲ್ಲಿಗೆ, ಪಟ್ಟೆ ಸೀರೆಗಳನ್ನು ಸಮರ್ಪಿಸಿದರು. ಬೆಳಿಗ್ಗೆ 6 ರಿಂದ ಶ್ರೀ ದಂಡನಾಯಕ ದೈವದ ವಾಲಸರಿ ನೇಮ ನಡೆದು

ಬಲ್ನಾಡು ಶ್ರೀ ದಂಡನಾಯಕ-ಉಳ್ಳಾಲ್ತಿ, ದೈವಗಳ ನೇಮ ನಡಾವಳಿ | ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತ ಭಕ್ತಾದಿಗಳಿಂದ ಮಲ್ಲಿಗೆ, ಪಟ್ಟೆಸೀರೆ ಅರ್ಪಣೆ Read More »

ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಸಭಾ ಕಾರ್ಯಕ್ರಮ ಉದ್ಘಾಟನೆ

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಶ್ರೀ ಶಿವ ಸುಜ್ಞಾನ ತೀರ್ಥ ಮಹಾ ಸ್ವಾಮಿಜಿಯವರು ದ್ವೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮಿಜಿ ದಿವ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕ ಸಂಜೀವ

ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಸಭಾ ಕಾರ್ಯಕ್ರಮ ಉದ್ಘಾಟನೆ Read More »

ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಕಾರ್ತಿಕ ತಂತ್ರಿ

ಪುತ್ತೂರು: ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ದೇವರ ಆರಾದನೆ ದೇವಸ್ಥಾನದಲ್ಲಿ ಮಾತ್ರವಲ್ಲ. ಪ್ರತಿ ಮನೆಯಲ್ಲಿ ನಡೆಯಬೇಕು. ಧರ್ಮ ರಕ್ಷಣೆಯೇ ಉಪಾಸನೆಯ ಅಂಗ. ಯಾವುದೇ ಕ್ಷೇತ್ರದಲ್ಲಿ ನಷ್ಟವಾದ ಚೈತನ್ಯ ತುಂಬಿಸುವುದೇ ಬ್ರಹ್ಮಕಲಶ. ಬ್ರಹ್ಮಕಲಶದ ಬಳಿಕ ಚೈತನ್ಯ ಬೆಳಗಲಿದೆ. ಧರ್ಮದ ಆಚರಣೆ ಮಾಡಿದಾಗ ಮನುಷ್ಯ ಜನ್ಮ ಸಾಥಕ. ಉತ್ತಮ ಕಾರ್ಯಗಳು, ಉತ್ತಮ ಸ್ಥಾನ ಲಭಿಸಲಿದೆ ಎಂದು ಕೆಮ್ಮಿಂಜೆ ಕಾರ್ತಿಕ  ತಂತ್ರಿಯವರು ಹೇಳಿದರು. ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ

ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಕಾರ್ತಿಕ ತಂತ್ರಿ Read More »

ವೈಭವದಿಂದ ನಡೆಯಿತು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ

ಪುತ್ತೂರು: ಕಳೆದ ಏಳು ದಿನಗಳಿಂದ ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ ಏ.27 ಶನಿವಾರ ವೈಭವದಿಂದ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಇಂದು ಮುಂಜಾನೆ 5 ರಿಂದ ಮಹಾಗಣಪತಿ ಹೋಮ, ಪಂಚಾಮೃತಾಭಿಷೇಕ, ಇಂದ್ರಾದಿ ದಿಕ್ಪಾಲ ದೇವತೆಗಳ ಪ್ರತಿಷ್ಠೆ, ಮಹಾಬಲಿ ಪೀಠ ಪ್ರತಿಷ್ಠೆ ನಡೆದು ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು. ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ

ವೈಭವದಿಂದ ನಡೆಯಿತು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ Read More »

error: Content is protected !!
Scroll to Top