ಫೆ.16-21: ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಬಂಟ್ವಾಳ: ತಾಲೂಕಿನ ವಿಟ್ಲ ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇಂದಿನಿಂದ ಫೆ.21 ರ ವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಉಳಿತ್ತಾಯ ವಿಷ್ಣು ಅಸ್ರ ಅವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ವಿಷ್ಣುಮೂರ್ತಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರಾಡಳಿತ ಸೇವಾ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಫೆ.16-21: ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »